ರಾಜ್ಯದ ಪ್ರಥಮ ನದಿ ಉತ್ಸವ ಸಂಪನ್ನ
Team Udayavani, Jan 14, 2019, 4:51 AM IST
ಮಂಗಳೂರು: ರಾಜ್ಯದಲ್ಲೇ ಪ್ರಥಮವಾಗಿ ಮಂಗಳೂರಿನಲ್ಲಿ ಆಯೋಜನೆಗೊಂಡಿದ್ದ ಎರಡು ದಿನಗಳ ನದಿ ಉತ್ಸವ ನಿರೀಕ್ಷೆಗೂ ಮೀರಿದ ಜನಸ್ಪಂದನೆಯೊಂದಿಗೆ ರವಿವಾರ ಸಂಪನ್ನಗೊಂಡಿತು. 2 ದಿನವೂ ಭಾರೀ ಸಂಖ್ಯೆಯಲ್ಲಿ ಜನರು ನದಿ ಉತ್ಸವದಲ್ಲಿ ಭಾಗವಹಿಸಿದ್ದು ಜಿಲ್ಲೆಯಲ್ಲಿ ಜಲ ಪ್ರವಾಸೋದ್ಯಮದ ಹೊಸ ಆಯಾಮ
ಸೃಷ್ಟಿಸುವಲ್ಲಿ ಯಶಸ್ವಿಯಾಗಿದೆ.
ನದಿ ಉತ್ಸವ ಆರಂಭಗೊಂಡ ಶನಿವಾರ ಬಂಗ್ರಕೂಳೂರು, ಸುಲ್ತಾನ್‌ಬತ್ತೇರಿ ಹಾಗೂ ಕೂಳೂರಿನಿಂದ ಬೋಟ್‌ಗಳಲ್ಲಿ ಸುಮಾರು 5,000ಕ್ಕೂ ಅಧಿಕ ಮಂದಿ ಸಂಚರಿಸಿದ್ದರು. ರವಿವಾರ ಬೆಳಗ್ಗಿನಿಂದಲೇ ಜನರು ಆಗಮಿಸತೊಡಗಿದ್ದು 15,000ಕ್ಕೂ ಅಧಿಕ ಮಂದಿ ದೋಣಿಗಳಲ್ಲಿ ನದಿ ಉತ್ಸವ ನಡೆಯುವ ತಾಣಗಳಿಗೆ ಭೇಟಿ ನೀಡಿದ್ದರು. ದಕ್ಷಿಣ ಕನ್ನಡ ಅಲ್ಲದೆ ನೆರೆಯ ಉಡುಪಿ ಜಿಲ್ಲೆಯ ವಿವಿಧ ಭಾಗಗಳಿಂದಲೂ ಸಾವಿರಾರು ಜನರು ಆಗಮಿಸಿ ಸಂಭ್ರಮಿಸಿದರು.
ಬಂಗ್ರಕೂಳೂರು ಹಾಗೂ ಸುಲ್ತಾನ್ ಬತ್ತೇರಿಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ನದಿ ಉತ್ಸವಕ್ಕೆ ಇನ್ನಷ್ಟು ಮೆರುಗು ನೀಡಿತು. ಇದಲ್ಲದೆ ನದಿಚಲನಚಿತ್ರಗಳನ್ನು ಪ್ರದರ್ಶಿಸಿ ನದಿ ಸಂರಕ್ಷಣೆ ಪ್ರಾಮುಖ್ಯದ ಬಗ್ಗೆ ಅರಿವು ಮೂಡಿಸಲಾಯಿತು.
ಎರಡು ದಿನಗಳ ಕಾಲ ಜಲ
ಸಂಬಂಧಿತ ಕ್ರೀಡೆಗಳನ್ನು ಆಯೋ ಜಿಸಲಾಗಿತ್ತು. ರೋಯಿಂಗ್, ಸ್ಟಾಂಡ್ ಆಫ್ ಫೆಡಲಿಂಗ್, ವಿಂಡ್ ಸರ್ಫಿಂಗ್ ಜೆಟ್ಸೆಕಿ, ಸ್ಪೀಡ್‌ಬೋಟು ಸೇರಿದಂತೆ ವಿವಿಧ ಜಲಕ್ರೀಡೆಗಳನ್ನು ಆಯೋಜಿಸಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಾರ್ವಜನಿಕರು ಜಲಕ್ರೀಡೆಗಳಲ್ಲಿ ಭಾಗವಹಿಸಿ ಆನಂದಿಸಿದರು. ನದಿ ಕಿನಾರೆಯನ್ನು ವರ್ಣರಂಜಿತ ವಿದ್ಯುತ್‌ದೀಪಗಳಿಂದ ಆಕರ್ಷಕವಾಗಿ ಸಿಂಗರಿಸಲಾಗಿತ್ತು.
ಪ್ರಥಮ ಬಾರಿ ಆಯೋಜನೆಗೊಂಡ ನದಿ ಉತ್ಸವಕ್ಕೆ ನಿರೀಕ್ಷೆಗೂ ಮೀರಿ ಜನರ ಸ್ಪಂದನೆ ದೊರಕಿದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ವಿಸ್ತಾರಗೊಳ್ಳುವ ನಿಟ್ಟಿನಲ್ಲಿ ಇಲ್ಲಿ ವ್ಯವಸ್ಥಿತ ಜೆಟ್ಟಿಗಳ ನಿರ್ಮಾಣವಾಗಬೇಕಾಗಿದೆ. ಈ ದೃಷ್ಟಿಯಲ್ಲಿ 13 ಜೆಟ್ಟಿಗಳ ನಿರ್ಮಾಣಕ್ಕೆ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ.
ಶಶಿಕಾಂತ ಸೆಂಥಿಲ್, ದ.ಕ.ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
ಕ್ಯುಆರ್ ಕೋಡ್ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ
Tannirbhavi: ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ
Mangaluru ಎಚ್‌ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.