Surathkal: ಭೀಕರ ರಸ್ತೆ ಅಪಘಾತ; ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ
Team Udayavani, Sep 30, 2023, 10:32 AM IST
ಸುರತ್ಕಲ್: ಭೀಕರ ರಸ್ತೆ ಅಪಘಾತ ಸಂಭವಿಸಿ ಫಾರ್ಚುನರ್ ಕಾರೊಂದು ನಿಲ್ಲಿಸಿದ್ದ ಈಚರ್ ಟಿಪ್ಪರ್ ಗೆ ಹಿಂಬದಿಯಿಂದ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಕಾರು ಸಂಪೂರ್ಣ ನಜ್ಜ ಗುಜ್ಜಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜ್ಯೋತಿ ಸರ್ವಿಸ್ ಸ್ಟೇಷನ್ ಬಳಿ ಹೊಸಬೆಟ್ಟುವಿನಲ್ಲಿ ನಡೆದಿದೆ.
ಸುಮಾರು 3.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ತಮಿಳುನಾಡು ನೊಂದಣಿಯ ಕಾರು ಇದಾಗಿದೆ. ಪೊಲೀಸರ ಮತ್ತು ಸಾರ್ವಜನಿಕರು ಸಹಕಾರದಿಂದ ಎರಡು ಗಂಟೆಯ ಪರಿಶ್ರಮದಿಂದ ಶವವನ್ನು ಹೊರತೆಗೆಯಲಾಯಿತು ಎನ್ನಲಾಗಿದೆ.
ಫಾರ್ಚುನರ್ ಕಾರಿನ ಚಾಲಕ ಅರ್ಜುನ್ ಎಂದು ತಿಳಿದು ಬಂದಿದ್ದು, ಇವರ ಅಜಾಗರೂಕತೆಯ ಚಾಲನೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಅರ್ಜುನ್ ಎಂಬವರು ಮಂಗಳೂರಿನಿಂದ ಸುರತ್ಕಲ್ ಹೋಗುತ್ತಿದ್ದ ಸಂದರ್ಭ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಈಚರ್ ಟಿಪ್ಪರ್ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಅರ್ಜುನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರಿನಲಿದ್ದ ಸಹ ಪ್ರಯಾಣಿಕ ಮೊಹಮ್ಮದ್ ಫಿಜಾನ್ ಅವರಿಗೆ ತಲೆಯ ಒಳಭಾಗಕ್ಕೆ ಗಂಭೀರವಾದ ಗಾಯವಾಗಿದೆ. ಇತರ ಸಹ ಪ್ರಯಾಣಿಕ ಅನಿರಿಧ್ ನಾಯರ್ ಅವರ ಹಣೆ ಮೇಲೆ ಸಣ್ಣ ಒತ್ತಡದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.