ಮನೆಗಳಿಗೆ ನುಗ್ಗುತ್ತಿರುವ ನೀರು; ಸ್ಥಳೀಯ ಜನರಿಗೆ ಸಂಕಷ್ಟ

ಹೊಯಿಗೆ ಬಜಾರ್‌: ಅಸಮರ್ಪಕ ಚರಂಡಿ ವ್ಯವಸ್ಥೆ

Team Udayavani, Jun 23, 2020, 5:35 AM IST

ಮನೆಗಳಿಗೆ ನುಗ್ಗುತ್ತಿರುವ ನೀರು; ಸ್ಥಳೀಯ ಜನರಿಗೆ ಸಂಕಷ್ಟ

ಮಹಾನಗರ: ನಗರದ ಹೊಯಿಗೆ ಬಜಾರ್‌ ಪ್ರದೇಶದ ರಸ್ತೆಗೆ ಕಾಂಕ್ರೀಟ್‌ ಹಾಕಿ ಅಭಿವೃದ್ಧಿಪಡಿಸಲಾಗಿದ್ದು, ಚರಂಡಿ ವ್ಯವಸ್ಥೆಯನ್ನು ಅದಕ್ಕನುಗುಣವಾಗಿ ನಿರ್ವಹಣೆ ಮಾಡದ ಕಾರಣ ಮಳೆ ಬಂದಾಗ ರಸ್ತೆ ಮತ್ತು ಚರಂಡಿಯ ನೀರು ರಸ್ತೆ ಬದಿಯ ಮನೆಗಳಿಗೆ ನುಗ್ಗುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.

ರಸ್ತೆಗೆ 12 ಇಂಚು ದಪ್ಪದ ಕಾಂಕ್ರೀಟ್‌ ಹಾಕಲಾಗಿದೆ. ಹೀಗಾಗಿ ರಸ್ತೆಯು ಚರಂಡಿ ಹಾಗೂ ರಸ್ತೆಯ ಇಕ್ಕೆಲ ಗಳಲ್ಲಿರುವ ಮನೆಗಳಿಗಿಂತ ಎತ್ತರದಲ್ಲಿದೆ. ರಸ್ತೆಯ ನೀರು ಚರಂಡಿಗೆ ಹರಿಯುತ್ತಿದ್ದರೂ ಚರಂಡಿಯ ಮೂಲಕ ಅದು ಮುಂದಕ್ಕೆ ಹರಿದು ರಾಜ ಕಾಲುವೆಗೆ ಸೇರಲು ಅನುವು ಮಾಡಿ ಕೊಟ್ಟಿಲ್ಲ. ಹಾಗಾಗಿ ನೀರು ಚರಂಡಿಯಲ್ಲಿಯೇ ತುಂಬಿ ತುಳುಕಿ ರಸ್ತೆಯ ಎರಡೂ ಬದಿಗಳಲ್ಲಿರುವ ಮನೆಗಳ ಆವರಣಕ್ಕೆ ನುಗ್ಗುತ್ತಿದೆ. ಇದರಿಂದಾಗಿ ರಸ್ತೆ ಬದಿಯ ತಾಜ್ಯ, ಕಲ್ಲು, ಮಣ್ಣು ಇತ್ಯಾದಿ ಮನೆಗಳ ಆವರಣದಲ್ಲಿ ಸೇರುತ್ತಿವೆ.

ಹೊಯಿಗೆ ಬಜಾರ್‌ ರೈಲ್ವೇ ಕ್ರಾಸಿಂಗ್‌ ಬಳಿ ಟೈಲ್ಸ್‌ ಸಂಸ್ಥೆಯ ಸಮೀಪ ರಸ್ತೆಯ ಚರಂಡಿಯ ಮೇಲೆ ಹಾಸಿದ್ದ ಚಪ್ಪಡಿ ಕಲ್ಲುಗಳನ್ನು ಅಲ್ಲಲ್ಲಿ ಮೇಲೆಕ್ಕೆತ್ತಿ ಇರಿಸಲಾಗಿದ್ದು, ಇಲ್ಲಿ ಚರಂಡಿ ಪೂರ್ತಿ ನೀರು ತುಂಬಿ ನಿಲ್ಲುತ್ತದೆ. ಚರಂಡಿಯ ಎರಡೂ ತುದಿಗಳಲ್ಲಿ ನೀರು ಮುಂದಕ್ಕೆ ಹರಿಯಲು ಸಂಪರ್ಕ ಕಲ್ಪಿಸಿಲ್ಲ. ಇದು ಸಮಸ್ಯೆಯ ಮೂಲ.

“ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಆರಂಭಿಸುವ ಸಂದರ್ಭ ಸೂಕ್ತ ಚರಂಡಿ ವ್ಯವಸ್ಥೆ ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಬೇಕೆಂದು ಸ್ಮಾರ್ಟ್‌ ಸಿಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ಮಾತ್ರವಲ್ಲದೇ ಕಾರ್ಪೊರೇಟರ್‌, ಶಾಸಕರ ಸಹಿತ ಜನಪ್ರತಿನಿಧಿಗಳ ಗಮನಕ್ಕೂ ತರಲಾಗಿದೆ. ಈ ತನಕ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಧಾರಾಕಾರ ಮಳೆ ಬಂದಾಗ ಚರಂಡಿ ನೀರು ಮನೆ ಆವರಣಕ್ಕೆ ಹರಿದು ಬರುತ್ತದೆ. ಮನೆಯಿಂದ ಹೊರಗೆ ಕಾಲಿಡದ ಪರಿಸ್ಥಿತಿ ಇದೆ’ ಎಂದು ಸ್ಥಳೀಯ ನಿವಾಸಿ ಯೊಬ್ಬರು ಉದಯವಾಣಿಗೆ ತಿಳಿಸಿದ್ದಾರೆ.

ಕೋವಿಡ್ ದಿಂದಾಗಿ ಕಾಮಗಾರಿ ವಿಳಂಬ
ಇಲ್ಲಿ ಹಳೆಯ ಚರಂಡಿ ವ್ಯವಸ್ಥೆ ಇದ್ದು, ರಸ್ತೆಗೆ ಕಾಂಕ್ರೀಟ್‌ ಆಗಿದ್ದರೂ ಚರಂಡಿ ವ್ಯವಸ್ಥೆ ಇನ್ನೂ ಸಮರ್ಪಕವಾಗಿ ಆಗಿಲ್ಲ. ಕೋವಿಡ್ ಸಮಸ್ಯೆಯಿಂದಾಗಿ ಕಾಮಗಾರಿ ವಿಳಂಬವಾಗಿದೆ. ಇಲ್ಲಿನ ಚರಂಡಿಯ ನೀರು ಹರಿದು ಹೋಗಲು ಸಮೀಪದ ಭಗತ್‌ ಸಿಂಗ್‌ ರಸ್ತೆಯ ಚರಂಡಿಗೆ ಸಂಪರ್ಕ ಕಲ್ಪಿಸಿದರೆ ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿಯಬಹುದು.
 -ಅಬ್ದುಲ್‌ ಲತೀಫ್‌,
ಸ್ಥಳೀಯ ಕಾರ್ಪೊರೇಟರ್‌

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.