ಕ್ಯಾಟರಿಂಗ್ ವಸ್ತು ಕೊಡುವುದಾಗಿ ಹೇಳಿ 1.16 ಲ.ರೂ. ವಂಚನೆ
Team Udayavani, Jul 16, 2023, 5:07 AM IST
ಮಂಗಳೂರು: ಕ್ಯಾಟರಿಂಗ್ ವ್ಯವಹಾರಕ್ಕೆ ಬೇಕಾಗುವ ವಸ್ತುಗಳನ್ನು ನೀಡುವುದಾಗಿ ಹೇಳಿ 1.16 ಲ.ರೂ. ವಂಚಿಸಿರುವ ಘಟನೆ ನಡೆದಿದೆ.
ದೂರುದಾರರು ಜು. 15ರಂದು ಬಿಗ್‌ಬಾಸ್ಕೆಟ್ ಆ್ಯಪ್‌ನಲ್ಲಿ ಕ್ಯಾಟರಿಂಗ್ ವ್ಯವಹಾರಕ್ಕೆ ಬೇಕಾದ ವಸ್ತುಗಳನ್ನು ನೋಡಿ ಬಿಗ್‌ಬಾಸ್ಕೆಟ್ ಫೇಸ್‌ಬುಕ್ ಖಾತೆದಾರರೊಂದಿಗೆ ಚಾಟಿಂಗ್ ಮಾಡಿದ್ದರು. ಆಗ ಕಡಿಮೆ ಬೆಲೆಗೆ ವಸ್ತುಗಳನ್ನು ಕೊಡುವುದಾಗಿ ಚಾಟಿಂಗ್ ನಡೆಸಿದ ಅಪರಿಚಿತ ಭರವಸೆ ನೀಡಿದ್ದ.
ಅನಂತರ ಬಿಗ್‌ಬಾಸ್ಕೆಟ್ ಎಂಬ ಫೇಸ್‌ಬುಕ್ ಲಿಂಕ್ ಕಳುಹಿಸಿ ಅದರಲ್ಲಿ ಮಾಹಿತಿಯನ್ನು ನೀಡುವಂತೆ ತಿಳಿಸಿದ. ದೂರುದಾರರು ಅವರ ಬ್ಯಾಂಕ್‌ನ ಕ್ರೆಡಿಟ್ ಕಾರ್ಡ್ ವಿವರಗಳನ್ನು ನೀಡಿದ್ದರು. ಬಳಿಕ ಅವರ ಕ್ರೆಡಿಟ್ ಕಾರ್ಡ್ ಖಾತೆಯಿಂದ ಹಂತ ಹಂತವಾಗಿ ಮೋಸದಿಂದ ಒಟ್ಟು 1.16 ಲ.ರೂ. ವರ್ಗಾಯಿಸಿ ವಂಚಿಸಲಾಗಿದೆ. ನಗರದ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.