Second PU Exam ಆರಂಭ; ದ.ಕ.: 126 ವಿದ್ಯಾರ್ಥಿಗಳು ಗೈರು; ಉಡುಪಿ: 44 ವಿದ್ಯಾರ್ಥಿಗಳು ಗೈರು
Team Udayavani, Mar 2, 2024, 8:50 AM IST
ಮಂಗಳೂರು,/ಉಡುಪಿ: ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಶುಕ್ರವಾರದಿಂದ ಆರಂಭವಾಗಿದ್ದು, ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ.
ದ.ಕ. ಜಿಲ್ಲೆಯಲ್ಲಿ ಮೊದಲ ದಿನದ ಕನ್ನಡ ಭಾಷಾ ಪರೀಕ್ಷೆಗೆ 20,776 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, ಈ ಪೈಕಿ 20,650 ಮಂದಿ ಹಾಜರಾಗಿದ್ದಾರೆ. 126 ಮಂದಿ ಗೈರು ಹಾಜರಾಗಿದ್ದಾರೆ. ಅರೇಬಿಕ್ ಪರೀಕ್ಷೆಗೆ 191 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಎಲ್ಲ ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಜಿಲ್ಲೆಯ 53 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆರಂಭವಾಗಿದೆ. ಒಟ್ಟು 36,147 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಅದರಲ್ಲಿ 34,125 ಸಾಮಾನ್ಯ ವಿದ್ಯಾರ್ಥಿಗಳು, 1,635 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಖಾಸಗಿಯಾಗಿ ನೋಂದಾಯಿಸಿಕೊಂಡಿದ್ದಾರೆ. 387 ವಿದ್ಯಾರ್ಥಿಗಳು ಪುನರಾವರ್ತಿತರು.
ಯಾವುದೇ ಪರೀಕ್ಷಾ ಅಕ್ರಮಗಳು ಘಟಿಸದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಜೆರಾಕ್ಸ್ ಅಂಗಡಿ ಗಳನ್ನು ಮುಚ್ಚಲಾಗಿತ್ತು. ಮೊದಲ ದಿನದ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ಘಟಿಸಿಲ್ಲ.
ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಕನ್ನಡ ಪರೀಕ್ಷೆಯಲ್ಲಿ ಶೇ.99.53ರಷ್ಟು ವಿದ್ಯಾರ್ಥಿಗಳು ಪಾಲ್ಗೊಂಡು, 44 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ.
ಕನ್ನಡ ಪರೀಕ್ಷೆಗೆ 4,361 ಬಾಲಕರು, 5,028 ಬಾಲಕಿ ಯರು ಸೇರಿ 9,389 ವಿದ್ಯಾರ್ಥಿಗಳು ನೋಂದಣಿ ಮಾಡಿ ಕೊಂಡಿದ್ದರು. ಇದರಲ್ಲಿ 25 ಬಾಲಕರು, 19 ಬಾಲಕಿ ಯರು ಸೇರಿ 44 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 9,345 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಅಕ್ರಮ, ಡಿಬಾರ್ ನಡೆದಿಲ್ಲ. ಅಪರ ಡಿಸಿ ಮಮತಾ ದೇವಿ ಜಿ.ಎಸ್. ಸಹಿತ ಅಧಿಕಾರಿಗಳು ಪರೀಕ್ಷೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.