ದ್ವಿತೀಯ ಪಿಯು ಪರೀಕ್ಷೆ : ಅಕ್ರಮ ತಡೆಗೆ ಎಲ್ಲೆಡೆ ಸಿಸಿ ಕೆಮರಾ
Team Udayavani, Feb 21, 2020, 6:24 AM IST
ಸಾಂದರ್ಭಿಕ ಚಿತ್ರ
ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 4ರಿಂದ 23ರ ವರೆಗೆ ನಡೆಯಲಿದ್ದು, ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಪ್ರಶ್ನೆ ಪತ್ರಿಕೆ ಇಡಲಾಗುವ ಜಿಲ್ಲಾ ಖಜಾನೆ ಸೇರಿದಂತೆ, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕೆಮರಾಗಳನ್ನು ಅಳವಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 15,100 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು, ಜಿಲ್ಲೆಯ ತಹಶೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ 8 ತಂಡಗಳನ್ನು ರಚಿಸಲಾಗಿದೆ.
ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಲ್ಲಿ ಮಾತ್ರ ಠೇವಣಿ ಮಾಡಲಾಗುವುದರಿಂದ, ಪ್ರಶ್ನೆ ಪತ್ರಿಕೆ ವಿತರಣೆಗೆ ನಿಯೋಜಿಸಲಾದ ಆಯಾಯ ತಾಲೂಕುಗಳ ತಹಶೀಲ್ದಾರ್‌ಗಳು, ಶಿಕ್ಷಣ ಸಂಯೋಜಕರು, ರೂಟ್ ಆಫೀಸರ್‌ಗಳು, ಪ್ರಶ್ನೆ ಪತ್ರಿಕೆ ಸಾಗಾಟ ವಾಹನಗಳು, ಪೊಲೀಸ್ ಸಿಬಂದಿ ಕ್ಲಪ್ತ ಸಮಯಕ್ಕೆ ಜಿಲ್ಲಾ ಖಜಾನೆಯಲ್ಲಿ ಹಾಜರಿದ್ದು, ಪ್ರಶ್ನೆ ಪತ್ರಿಕೆಗಳನ್ನು ಪಡೆದು ವಿತರಿಸುವಂತೆ ಸೂಚಿಸಿದರು.
ಜಿಲ್ಲಾ ಖಜಾನೆಯಲ್ಲಿ ಬಯೋಮೆಟ್ರಿಕ್ ಹಾಜರಾತಿ ಮತ್ತು ಬಾರ್‌ಕೋಡ್ ರೀಡರ್‌ಗಳನ್ನು ಅಳವಡಿಸಲಾಗುತ್ತಿದೆ. ಪರೀಕ್ಷೆ ಮುಗಿದ ಬಳಿಕ ಉತ್ತರ ಪತ್ರಿಕೆ ಗಳನ್ನು ಸುರಕ್ಷಿತವಾಗಿ ಸಾಗಿಸಲು ಅಂಚೆ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ನಡೆಸಲು ಹಿರಿಯ ಪ್ರಾಂಶುಪಾಲರ ನೇತೃತ್ವದಲ್ಲಿ ಜಾಗೃತ ತಂಡಗಳನ್ನು ನೇಮಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಡಿಡಿಪಿಐ ಶೇಷಶಯನ ಕಾರಿಂಜ, ಎಲ್ಲ ತಾಲೂಕುಗಳ ತಹಶೀಲ್ದಾರ್‌ಗಳು, ಉಪ ತಹಶೀಲ್ದಾರ್‌ಗಳು, ಬಿಇಒಗಳು, ಎಲ್ಲ ಕಾಲೇಜುಗಳ ಪ್ರಾಂಶುಪಾಲರು, ಹಿರಿಯ ಉಪನ್ಯಾಸಕರು ಉಪಸ್ಥಿತರಿದ್ದರು.
ದ.ಕ. ಜಿಲ್ಲೆ: 34,346 ವಿದ್ಯಾರ್ಥಿಗಳು
ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಲ್ಲಿ ಎಲ್ಲ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚಿಸಿದರು.
ಜಿಲ್ಲಾಧಿಕಾರಿ ಸಂಭಾಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ವ ಸಿದ್ಧತೆ ಸಭೆಯಲ್ಲಿ ಅವರು ಮಾತನಾಡಿದರು. ಮಂಗಳೂರು – 24, ಮೂಡುಬಿದಿರೆ – 4, ಬಂಟ್ವಾಳ -7, ಪುತ್ತೂರು – 9, ಬೆಳ್ತಂಗಡಿ -4 , ಸುಳ್ಯ 3 ಕೇಂದ್ರಗಳ ಸಹಿತ ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಿವೆ. 17,137 ಬಾಲಕ ಮತ್ತು 17,209 ಬಾಲಕಿಯರ ಸಹಿತ ಒಟ್ಟು 34,346 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಲಾ ವಿಭಾಗದಲ್ಲಿ 4,532 ವಿದ್ಯಾರ್ಥಿಗಳು, ವಾಣಿಜ್ಯ 16,237, ವಿಜ್ಞಾನ ವಿಭಾಗದಲ್ಲಿ 13,577 ವಿದ್ಯಾರ್ಥಿಗಳಿದ್ದಾರೆ ಎಂದು ಮಾಹಿತಿ ನೀಡಿದರು. ಸಹಾಯಕ ಆಯುಕ್ತ ಮದನ್ ಮೋಹನ್, ಡಿಡಿಪಿಯು ವಿಷ್ಣು ಮೂರ್ತಿ, ಡಿಡಿಪಿಐ ಮಲ್ಲೇಸ್ವಾಮಿ ಇಲಾಖೆಯ ಅಧಿಕಾರಿಗಳು, ಕಾಲೇಜು ಮುಖ್ಯಸ್ಥರು ಉಪಸ್ಥಿತರಿದ್ದರು.
ವಾಹನಗಳಿಗೆ ಜಿಪಿಎಸ್
ಪ್ರಶ್ನೆ ಪತ್ರಿಕೆ ಸಾಗಿಸುವ ಎಲ್ಲ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದ್ದು, ಸೂಕ್ತ ಪೊಲೀಸ್
ಭದ್ರತೆಯೊಂದಿಗೆ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಅವಧಿಯೊಳಗೆ ಪ್ರಶ್ನೆ ಪತ್ರಿಕೆ ತಲುಪಿಸಲಾ ಗುವುದು. ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ತೆರೆಯುವುದು ಮತ್ತು ವಿತರಿಸುವುದನ್ನು ಪರಿಶೀಲಿಸಲು ಜಿಲ್ಲಾ ಖಜಾನೆಯ ಒಳಗೆ ಮತ್ತು ಹೊರಗೆ 24×7 ಸಿಸಿ ಟಿವಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಇದನ್ನು ವೀಕ್ಷಿಸಲು ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಜಿಲ್ಲಾಧಿಕಾರಿ ಕಚೇರಿ
ಯಲ್ಲಿ 24×7 ಹಾಗೂ ಬೆಂಗಳೂರಿನ ಪಿಯು ಬೋರ್ಡ್‌ನಲ್ಲಿ ಕಂಟ್ರೋಲ್ ರೂಂ ತೆರೆಯಲಾಗು ವುದು ಎಂದು ಸದಾಶಿವ ಪ್ರಭು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Train; ಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ?
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.