ಮಹಾನಗರ ಪಾಲಿಕೆ; ಇ-ಖಾತಾಗೆ ಸರ್ವರ್ ಸಮಸ್ಯೆ
Team Udayavani, May 24, 2022, 9:36 AM IST
ಲಾಲ್‌ಬಾಗ್: ಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲಕರ ಅಧಿಕೃತ ಹಾಗೂ ಅನಧಿಕೃತವಲ್ಲದ ನಿವೇಶನ, ಕಟ್ಟಡಗಳ ಆಸ್ತಿ ಹಕ್ಕಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ವಿವರವನ್ನು ದಾಖಲಿಸಿದ ಇ – ಖಾತಾ ಪಡೆಯಲು ಇದೀಗ ಸರ್ವರ್ ಸಮಸ್ಯೆ ಎದುರಾಗಿದೆ.
ಮಂಗಳೂರು ಪಾಲಿಕೆ ವ್ಯಾಪ್ತಿಯ ಹಲವು ಸೇವೆಗಳು ಆನ್‌ಲೈನ್ ಆಗಿದ್ದು, ಇ – ಖಾತಾ ಪಡೆಯಲು ಸಾರ್ವಜನಿಕರಿಗೆ ಕೆಲವು ಸಮಸ್ಯೆಗಳು ಹಾಗೂ ತಾಂತ್ರಿಕವಾದ ಸವಾಲುಗಳು ಎದುರಾಗುತ್ತಿದೆ. ಕೆಲವು ಸಮಯದಿಂದ ಇ – ಖಾತಾ ಪಡೆಯಲು ಬಯೋಮೆಟ್ರಿಕ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಆದರೆ ಈ ವ್ಯವಸ್ಥೆಯಲ್ಲಿ ಬಯೋಮೆಟ್ರಿಕ್ ತಾಳೆ ಆಗುತ್ತಿಲ್ಲ. ಇನ್ನು ಖಾತಾ ಪಡೆಯಲು ಗೌಪ್ಯತೆಯ ಕಾರಣಕ್ಕೆ ಒಟಿಪಿ ವ್ಯವಸ್ಥೆಯನ್ನೂ ಜಾರಿಗೆ ತರಲಾಗಿದ್ದು, ಕೆಲವೊಂದು ಬಾರಿ ಒಟಿಪಿಯೇ ಬರುತ್ತಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.
ಪಾಲಿಕೆಯು ಕಳೆದ ವರ್ಷ ಆಸ್ತಿ ತೆರಿಗೆ ಪಾವತಿ ಮಾಡಲು ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಸದ್ಯ ಅನೇಕ ಮಂದಿಗೆ ಆನ್ ಲೈನ್ ಮುಖೇನ ತೆರಿಗೆ ಪಾವತಿ ಮಾಡುತ್ತಿದ್ದಾರೆ. ಆನ್‌ಲೈನ್ ಮುಖೇನ ಬಳಸಿಕೊಳ್ಳಲು ವೆಬ್ ಅಪ್ಲಿಕೇಶನ್ ಸಿದ್ಧಪಡಿಸಲಾಗಿದ್ದು, ಅದರಲ್ಲಿ ಈ ಹಿಂದೆ ಸಮಸ್ಯೆ ಉಂಟಾಗುತ್ತಿತ್ತು. ಆದರೆ, ಸದ್ಯ ತಕ್ಕಮಟ್ಟಿಗೆ ಸಮಸ್ಯೆ ನಿವಾರಣೆಯಾಗುತ್ತಿದೆ ಎನ್ನುತ್ತಾರೆ ಪಾಲಿಕೆ ಅಧಿಕಾರಿಗಳು.
ಏನಿದು ಇ ಖಾತಾ?
ಗ್ರಾಮಾಂತರ ಭಾಗದಲ್ಲಿ ಆರ್‌ಟಿಸಿ ಇದ್ದ ಹಾಗೆ, ಪಾಲಿಕೆ ವ್ಯಾಪ್ತಿಯಲ್ಲಿ ಈ ಹಿಂದೆ ಖಾತಾ ನೀಡಲಾಗುತ್ತಿತ್ತು. ಬಳಿಕ ಕರ್ನಾಟಕ ಮುನ್ಸಿಪಲ್ ಡಾಟಾ ಸೊಸೈಟಿ ಹಾಗೂ ರಾಷ್ಟ್ರೀಯ ಸೂಚ್ಯಂಕ ಕೇಂದ್ರದ ಸಹಯೋಗದೊಂದಿಗೆ ಆಸ್ತಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಇ-ಖಾತಾ ಅನುಷ್ಠಾನಿಸಲಾಗಿದೆ.
ತಂತ್ರಾಂಶದ ಮೂಲಕ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತವಲ್ಲದ ಹಾಗೂ ಅಕ್ರಮ ಆಸ್ತಿಗಳ ಮಾಹಿತಿಯನ್ನು ದಾಖಲಿಸಲು/ತಿದ್ದುಪಡಿ ಮಾಡಲು ಆಸ್ತಿಗಳ ಮಾಲಕತ್ವ ಹಕ್ಕು ವರ್ಗಾವಣೆ ಮಾಡಲು ಹಾಗೂ ಆಸ್ತಿ ತೆರಿಗೆಯ ನಕಲನ್ನು ಡಿಜಿಟಲ್ ಸಹಿಯೊಂದಿಗೆ ತಂತ್ರಾಂಶದಿಂದ ಪಡೆಯಲು ಅವಕಾಶ ನೀಡಲಾಗಿದೆ.
ಸಮಸ್ಯೆ ಶೀಘ್ರ ಬಗೆಹರಿಯಲಿದೆ
ಪಾಲಿಕೆಯಲ್ಲಿ ಇ-ಖಾತ ಪಡೆದು ಕೊಳ್ಳಲು ಕೆಲವೊಂದು ತಾಂತ್ರಿಕ ಸಮಸ್ಯೆ ಎದುರಾಗಿದೆ. ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ರಾಜ್ಯದ ಅಧಿಕಾರಿಗಳ ಜತೆಗೂ ಚರ್ಚೆ ನಡೆಸಲಾಗಿದೆ. ಸದ್ಯದಲ್ಲಿಯೇ ಸಮಸ್ಯೆ ಬಗೆಹರಿಯಲಿದೆ. – ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.