Mangaluru; ರಥಬೀದಿಯ ಶಾರದಾ ಮಹೋತ್ಸವ ಭಕ್ತಿ, ಸಂಭ್ರಮದಿಂದ ಸಮಾಪನ
Team Udayavani, Oct 15, 2024, 1:12 AM IST
ಮಂಗಳೂರು: ನಗರದ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನ ಆಚಾರ್ಯಮಠ ವಠಾರದ 102ನೇ ವರ್ಷದ ಶಾರದಾ ಮಹೋತ್ಸವದಲ್ಲಿ ಪೂಜಿಸಲ್ಪಟ್ಟ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಾಯಾತ್ರೆ ಸೋಮವಾರ ರಾತ್ರಿ ಸಂಭ್ರಮೋಲ್ಲಾಸಗಳಿಂದ ನಡೆಯಿತು. ಮಳೆಯ ನಡುವೆಯೂ ಸಹಸ್ರಾರು ಮಂದಿ ಭಾಗವಹಿಸಿದರು.
ಅ. 8ರಿಂದ ಪೂಜಿಸಲ್ಪಟ್ಟ ಶಾರದಾ ಮಾತೆಯನ್ನು ಸರ್ವಾಲಂಕೃತಗೊಳಿಸಿ, ಸೋಮವಾರ ಸಂಜೆಯಿಂದ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಸಹಸ್ರಾರು ಭಕ್ತರು ಶಾರದಾ ಮಾತೆಯನ್ನು ಕಣ್ತುಂಬಿಕೊಂಡು ಪ್ರಸಾದ ಸ್ವೀಕರಿಸಿದರು.
ಸೋಮವಾರ ಸಂಜೆ ಶ್ರೀ ಶಾರದಾ ಮಾತೆಗೆ ಪೂರ್ಣಾಲಂಕಾರ ನಡೆದು ಚಿತ್ರಾಪುರ ಮಠ ಸಂಸ್ಥಾನದ ಶ್ರೀಮದ್ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಗಳವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಶಾರದಾ ಮಾತೆಗೆ ಶ್ರೀಗಳವರು ಮಹಾ ಮಂಗಳಾರತಿ ಬೆಳಗಿದರು.
ಮಂಗಳೂರು ಶಾರದೆಯ ವಿಸರ್ಜನಾ ಮೆರವಣಿಗೆಯಲ್ಲಿ ಚಿತ್ರಾಪುರ ಮಠ ಸಂಸ್ಥಾನದ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿ ಗಳವರು ಸರಸ್ವತಿ ಕಲಾಮಂಟಪದಲ್ಲಿ ಆಸೀನರಾಗಿ ಶೋಭಾಯಾತ್ರೆಯ ವೈಭವವನ್ನು ವೀಕ್ಷಿಸಿದರು.
ಸಂಜೆ ಶ್ರೀಗಳಿಗೆ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಶ್ರೀ ಶಾರದಾ ಮಹೋತ್ಸವ ಸಮಿತಿಯಿಂದ ಶ್ರೀಗಳವರಿಗೆ ಶ್ರೀ ದೇವಳದಲ್ಲಿ ಸ್ವಾಗತ ನೀಡಲಾಯಿತು. ಬಳಿಕ ಶ್ರೀ ದೇವರ ಭೇಟಿ, ಶ್ರೀ ಶಾರದಾ ಮಾತೆಯ ವಸಂತ ಮಂಟಪಕ್ಕೆ ಆಗಮಿಸಿ ಶ್ರೀ ಶಾರದಾ ಮಾತೆಗೆ ಮಾಹಾ ಆರತಿ ನೆರವೇರಿತು.
ಬಳಿಕ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಾಯಾತ್ರೆಯು ಉತ್ಸವ ಸ್ಥಾನದಿಂದ ಹೊರಟು ಶ್ರೀ ಮಹಾಮಾಯ ದೇವಾಲಯವಾಗಿ, ಕೆನರಾ ಹೈಸ್ಕೂಲ್‌ನ ಹಿಂಬದಿಯಿಂದ ನವಭಾರತ್ ವೃತ್ತ ತಲುಪಿ ಅಲ್ಲಿಂದ ಡೊಂಗರಕೇರಿಯ ಮೂಲಕ ನ್ಯೂಚಿತ್ರಾ ಟಾಕೀಸ್, ಬಸವನಗುಡಿ, ಚಾಮರಗಲ್ಲಿ, ರಥಬೀದಿಯಾಗಿ ಶ್ರೀ ಮಹಾಮಾಯಿ ತೀರ್ಥದಲ್ಲಿ ಜಲಸ್ತಂಭನಗೊಳಿಸಲಾಯಿತು.
ಸ್ವಯಂಸೇವಕರು ಭುಜ ಸೇವೆಯ ಮೂಲಕ ಶ್ರೀ ಮಾತೆಯ ವಿಗ್ರಹದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು. ಹರಕೆಯ ಶಾರದಾ ಹುಲಿವೇಷದ ಟ್ಯಾಬ್ಲೋ ಗಮನ ಸೆಳೆಯಿತು.
ಸಮಿತಿ ಅಧ್ಯಕ್ಷ ಡಾ| ಉಮಾನಂದ ಮಲ್ಯ, ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ, ಪಂಡಿತ್ ನರಸಿಂಹ ಆಚಾರ್ಯ, ಜೋಡುಮಠ ಭಾಸ್ಕರ್ ಭಟ್, ದತ್ತಾತ್ರೇಯ ಭಟ್, ಗಣೇಶ್ ಬಾಳಿಗ, ಸುರೇಶ್ ಕಾಮತ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್, ನಂದನ್ ಮಲ್ಯ, ಜಿಲ್ಲಾದಿಕಾರಿ ಮುಲ್ಲೈ ಮುಗಿಲನ್, ಎಸ್‌ಪಿ ಅನುಪಮ್ ಅಗರ್‌ವಾಲ್ ಸಹಿತ ಹಲವಾರು ಭಕ್ತರು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.