ಕೆಲಸ ಕಳೆದುಕೊಂಡ ವೃದ್ಧೆಗೆ ಎಸ್‌ಐ ಉಮೇಶ್ ನೆರವು
Team Udayavani, Jun 20, 2020, 10:10 AM IST
ಪಣಂಬೂರು: ಲಾಕ್‌ಡೌನ್ ವೇಳೆ ನೌಕರಿ ಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿ ಮಂಗಳೂರಿಗೆ ಬಂದಿದ್ದ ಮಹಿಳೆಯ ಪ್ರಯಾಣಕ್ಕೆ ಹಣ ನೀಡಿ ಪಣಂಬೂರಿನ ಎಸ್‌ಐ ಉಮೇಶ್ ಕುಮಾರ್ ಮಾನವೀಯತೆ ಮೆರೆದಿದ್ದಾರೆ.
ಮೂಲತಃ ಚಿಕ್ಕಮಗಳೂರಿನ ವಿಜಯಲಕ್ಷ್ಮೀ (59) ಉತ್ತರ ಭಾರತದ ಶಾಲೆಯೊಂದರಲ್ಲಿ ಉಪನ್ಯಾಸಕಿಯಾಗಿ ಇದ್ದರು. ಲಾಕ್‌ಡೌನ್ ಕಾರಣದಿಂದ ಅಲ್ಲಿಂದ ಊರಿಗೆ ಕಳುಹಿಸಿದ್ದರು. ಇದರಿಂದಾಗಿ ಚಿಕ್ಕಮಗಳೂರಿನಲ್ಲಿ ಯಾರೂ ಇಲ್ಲದ ಕಾರಣ ಈಕೆ ಧರ್ಮಸ್ಥಳಕ್ಕೆ ಆಗಮಿಸಿ, ಅಲ್ಲಿಂದ ಮಂಗಳೂರಿಗೆ ಬಂದಿದ್ದರು. ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಲ್ಲಿ ತನಗೆ ಕೆಲಸ ಬೇಕೆಂದು ಕೇಳಿಕೊಂಡಾಗ ಅವರನ್ನು ಬೈಕಂಪಾಡಿಗೆ ಕಳುಹಿಸಿದ್ದರು. ಬೈಕಂಪಾಡಿಯಲ್ಲಿ ಯಾರೂ ಕೆಲಸ ನೀಡದಿದ್ದಾಗ ಸ್ಥಳೀಯರು ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದರು.ಅಲ್ಲಿಂದ ಬಂದ ಮಾಹಿತಿ ಮೇರೆಗೆ ಎಸ್‌ಐ ಉಮೇಶ್ ಮತ್ತು ಸಿಬಂದಿ ಸ್ಥಳಕ್ಕೆ ಧಾವಿಸಿ ವಿಚಾರಿಸಿದರು. ಆಗ ಆಕೆ ನನಗೆ ಯಾರೂ ಕೆಲಸ ಕೊಡುವುದಿಲ್ಲ, ನನ್ನನ್ನು ಧರ್ಮಸ್ಥಳಕ್ಕೆ ಕಳುಹಿಸಿಕೊಡಿ ಎಂದು ಬೇಡಿಕೊಂಡಾಗ ಎಸ್‌ಐ ಉಮೇಶ್ ಕುಮಾರ್ ಅವರು ಬಸ್ ನಿಲ್ದಾಣಕ್ಕೆ ಬಿಟ್ಟು,ಬಸ್‌ಗೆ ಹಣ ನೀಡಿ ಕಳುಹಿಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.