ಮೌಲ್ಯಮಾಪಕರ ಎಡವಟ್ಟು ; ಮಕ್ಕಳ ಭವಿಷ್ಯಕ್ಕೆ ಕುತ್ತು
ಪಾಸ್ ಅಂಕವಿದ್ದರೂ ಅನುತ್ತೀರ್ಣ! ಮರುಮೌಲ್ಯಮಾಪನಕ್ಕೆ ಸಾವಿರಾರು ಅರ್ಜಿ
Team Udayavani, Aug 19, 2020, 6:40 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಕೋವಿಡ್ ಆತಂಕದ ನಡುವೆ ಈ ಬಾರಿ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೈಕಿ ಹಲವರಿಗೆ ಫಲಿತಾಂಶವು ಅನುಮಾನದ ಜತೆಗೆ ಬೇಸರವನ್ನೂ ಉಂಟು ಮಾಡಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ನೂರಾರು ವಿದ್ಯಾರ್ಥಿಗಳು ಈಗ ಮರು ಮೌಲ್ಯಮಾಪನದ ಮೊರೆ ಹೋಗುತ್ತಿದ್ದಾರೆ.
ಇನ್ನೊಂದೆಡೆ ಉತ್ತೀರ್ಣ ಅಂಕ ಪಡೆದಿದ್ದ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಿರುವುದೂ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿ, ಉತ್ತರ ಪತ್ರಿಕೆ ಪಡೆದುಕೊಂಡಾಗ ಬೆಳಕಿಗೆ ಬಂದಿದೆ. ಕೋವಿಡ್ ಕಾಲದಲ್ಲಿ ನಡೆದ ಪರೀಕ್ಷೆಯ ಮೌಲ್ಯಮಾಪನವನ್ನು ಕಠಿನಗೊಳಿಸಬಾರದು, ಉದಾರತೆ ಇರಲಿ ಎಂದು ಸ್ವತಃ ಶಿಕ್ಷಣ ಸಚಿವರೇ ಹೇಳಿದ್ದರು. ಹಾಗಿದ್ದರೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಬಹಳ ಬಿಗಿಯಾಗಿ ಮೌಲ್ಯಮಾಪನ ಮಾಡಲಾಗಿದೆ.
ಇದು ಸಾವಿರಾರು ವಿದ್ಯಾರ್ಥಿಗಳನ್ನು ನಿರಾಸೆಗೊಳಿಸಿದೆ. ಅಷ್ಟೇ ಅಲ್ಲ, ಒಂದೆರಡು ಅಂಕಗಳ ಅಂತರದಲ್ಲಿ ಅನುತ್ತೀರ್ಣರಾದವರ ಸಂಖ್ಯೆಯೂ ಜಾಸ್ತಿಯಿದೆ. ಅವರೆಲ್ಲ ಸಾವಿರಾರು ರೂ. ಖರ್ಚು ಮಾಡಿ ಮರು ಮೌಲ್ಯಮಾಪನ ಮಾಡಿಸಬೇಕಾದ ಅನಿವಾರ್ಯಕ್ಕೆ ಸಿಲುಕಿದ್ದಾರೆ. ಮೌಲ್ಯಮಾಪನದಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎನ್ನುವ ಆರೋಪ ಹೆತ್ತವರು-ಶಿಕ್ಷಕರದು.
ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿಜ್ಞಾನ, ಗಣಿತ, ಸಮಾಜ ವಿಜ್ಞಾನ, ಇಂಗ್ಲಿಷ್ ವಿಷಯದಲ್ಲಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ವರ್ಷಗಳಿಗಿಂತ ಹೆಚ್ಚು ಮಂದಿ ಈ ಬಾರಿ ವಿಜ್ಞಾನ ಮತ್ತು ಗಣಿತ, ಇಂಗ್ಲಿಷ್ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಜಿಲ್ಲೆಯ ಶಿಕ್ಷಕರೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ. ಆದರೆ ಎಷ್ಟು ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂಬ ಅಂಕಿಅಂಶ ಇನ್ನಷ್ಟೇ ಲಭ್ಯವಾಗಬೇಕು. ಜಿಲ್ಲೆಯ ವಿದ್ಯಾರ್ಥಿಗಳ ಉತ್ತರಪತ್ರಿಕೆ ಮೌಲ್ಯಮಾಪನ ಮಾಡಿರುವುದು ಯಾವ ಜಿಲ್ಲೆಯಲ್ಲಿ ಎಂಬುದು ತಿಳಿದುಬಂದಿಲ್ಲ.
ಪಾಸ್ ಅಂಕ ನೀಡಿದ್ದೆವು
ದಕ್ಷಿಣ ಕನ್ನಡ ಜಿಲ್ಲೆಗೆ ಬೇರೆ ಜಿಲ್ಲೆಗಳ ಉತ್ತರ ಪತ್ರಿಕೆಗಳು ಮೌಲ್ಯಮಾಪನಕ್ಕೆ ಬಂದಿದ್ದವು. ಇಲ್ಲಿನ ಶಿಕ್ಷಕರು ಅನುತ್ತೀರ್ಣಗೊಳ್ಳುವ ಹಂತದಲ್ಲಿದ್ದ ವಿದ್ಯಾರ್ಥಿಗಳಿಗೆ ಸುಮಾರು 8-10 ಅಂಕಗಳಷ್ಟು ಹೆಚ್ಚುವರಿಯಾಗಿ ನೀಡಿ ಉತ್ತೀರ್ಣಗೊಳಿಸಿದ್ದಾರೆ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಮತ್ತು ಈ ಸಂದಿಗ್ಧ ಕಾಲದಲ್ಲಿ ಅಗತ್ಯ ಎಂದಿದ್ದಾರೆ ಶಿಕ್ಷಕ ರಾಮಕೃಷ್ಣ ಶಿರೂರು.
ಸಾವಿರ ರೂ. ನೀಡಬೇಕು!
ವಿದ್ಯಾರ್ಥಿಗಳು ಒಂದು ವಿಷಯದ ಉತ್ತರಪತ್ರಿಕೆಯ ಛಾಯಾಪ್ರತಿ ಪಡೆಯಲು 405 ರೂ. ನೀಡಬೇಕು. ಮರು ಮೌಲ್ಯಮಾಪನ ಮಾಡಿಸಬೇಕಾದರೆ ಮತ್ತೆ 810 ರೂ. ಪಾವತಿಸಬೇಕು. ಹೀಗೆ ಪಾವತಿಸಿದ 810 ರೂ. ಮರಳಿ ಸಿಗಬೇಕಾದರೆ ಮರು ಮೌಲ್ಯಮಾಪನದಲ್ಲಿ ಕನಿಷ್ಠ 6 ಅಂಕ ಹೆಚ್ಚುವರಿ ಪಡೆಯಬೇಕು. ಅನುತ್ತೀರ್ಣನಾದ ವಿದ್ಯಾರ್ಥಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದರೂ ಆತ ಪೂರಕ ಪರೀಕ್ಷೆಗೆ 300 ರೂ. ಕಟ್ಟಲೇಬೇಕು. ಮರು ಮೌಲ್ಯಮಾಪನದಲ್ಲಿ ಹೆಚ್ಚು ಅಂಕ ಬಂದು ಉತ್ತೀರ್ಣನಾದರೆ ಪೂರಕ ಪರೀಕ್ಷೆಗೆ ಕಟ್ಟಿದ ಹಣ ವಾಪಸ್ ಸಿಗುವುದಿಲ್ಲ. ಇದರಿಂದ ಯಾರಧ್ದೋ ತಪ್ಪಿನಿಂದಾಗಿ ಕೊರೊನಾ ಸಂಕಷ್ಟದ ನಡುವೆಯೂ ಅನಗತ್ಯವಾಗಿ ಹಣ ಕಳೆದುಕೊಳ್ಳುವ ಶಿಕ್ಷೆಗೆ ನೊಂದ ವಿದ್ಯಾರ್ಥಿಗಳು, ಹೆತ್ತವರು ಸಿಲುಕಿದ್ದಾರೆ.
ಉಡುಪಿಯಲ್ಲೂ ಇದೇ ಸಮಸ್ಯೆ
ಉಡುಪಿ ಜಿಲ್ಲೆಯಲ್ಲಿಯೂ ಬಹುತೇಕ ವಿದ್ಯಾರ್ಥಿಗಳು ವಿಜ್ಞಾನ ಮತ್ತು ಸಮಾಜವಿಜ್ಞಾನ ವಿಷಯಗಳಲ್ಲಿ ಕಡಿಮೆ ಅಂಕ ಬಂದಿರುವುದರಿಂದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲ ವಿಷಯಗಳಲ್ಲಿ ಉತ್ತಮ ಅಂಕ ಗಳಿಸಿದ್ದರೂ ವಿಜ್ಞಾನ, ಸಮಾಜವಿಜ್ಞಾನಗಳಲ್ಲಿ ಅನುತ್ತೀರ್ಣರಾಗಿರುವ ಅಥವಾ ಜಸ್ಟ್ ಪಾಸ್ ಅಂಕ ಪಡೆದ ಉದಾಹರಣೆಗಳು ಇಲ್ಲಿವೆ. ಈ ವಿಚಾರವನ್ನು ಪರೀಕ್ಷಾ ಮಂಡಳಿ ನಿರ್ದೇಶಕರ ಗಮನಕ್ಕೆ ತಂದಿದ್ದೇವೆ ಎಂದು ಉಡುಪಿ ಡಿಡಿಪಿಐ ಶೇಷಶಯನ ಕಾರಿಂಜ “ಉದಯವಾಣಿ’ಗೆ ತಿಳಿಸಿದ್ದಾರೆ.
ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರು ಮೌಲ್ಯಮಾಪನಕ್ಕೆ ಹೆಚ್ಚಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿರುವುದರ ಬಗ್ಗೆ ಮಾಹಿತಿ ಇಲ್ಲ ಎಂದು ಈ ಬಗ್ಗೆ ಜಿಲ್ಲೆಯ ಡಿಡಿಪಿಐ ಮಲ್ಲೇಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಮೌಲ್ಯಮಾಪಕರ ಎಡವಟ್ಟುಗಳು
01- ಪುಟ ಸಂಖ್ಯೆಯೇ ಅಂಕವಾಯಿತು!
ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಯೊಂದರ ವಿದ್ಯಾರ್ಥಿನಿಯೋರ್ವಳು ವಿಜ್ಞಾನದಲ್ಲಿ 36 ಅಂಕ ಗಳಿಸಿದ್ದರೂ ಪುಟ ಸಂಖ್ಯೆ ಕಾಲಂನಲ್ಲಿ ಬರೆದಿದ್ದ “17 ಪುಟ’ವನ್ನೇ ಆಕೆಯ ಅಂಕವೆಂದು ನೀಡಲಾಗಿರುವುದು ಬೆಳಕಿಗೆ ಬಂದಿದೆ. ಈಕೆಯ ಫಲಿತಾಂಶ ಅನುತ್ತೀರ್ಣವೆಂದು ಬಂದಿದ್ದು, ಅನುಮಾನಗೊಂಡು ಉತ್ತರ ಪತ್ರಿಕೆಯನ್ನು ತರಿಸಿದಾಗ ಮೌಲ್ಯಮಾಪಕರ ಈ ಎಡವಟ್ಟು ಪತ್ತೆಯಾಗಿದೆ ಎಂದು ಆ ಶಾಲೆಯ ಶಿಕ್ಷಕರು ಹೇಳಿದ್ದಾರೆ.
02 – ಒಂದರಲ್ಲಿ ಮಾತ್ರ 19 ಅಂಕ!
ಎಲ್ಲ ವಿಷಯಗಳಲ್ಲಿ 70ಕ್ಕೂ ಅಧಿಕ ಅಂಕ ಗಳಿಸಿ ಪ್ರಥಮ ದರ್ಜೆ ಪಡೆದ ಹುಡುಗನೊಬ್ಬ ವಿಜ್ಞಾನದಲ್ಲಿ 19 ಅಂಕ ಪಡೆದು ಅನುತ್ತೀರ್ಣನಾಗಿದ್ದಾನೆ. ಇದು ತನ್ನ ಅಂಕ ಅಲ್ಲ ಎಂದು ಆತ ನೋವು ಅನುಭವಿಸುತ್ತಿದ್ದಾನೆ.
03- 3 ವಿಷಯ ಮರು ಮೌಲ್ಯಮಾಪನ
600ಕ್ಕೂ ಹೆಚ್ಚು ಅಂಕಗಳ ನಿರೀಕ್ಷೆಯಲ್ಲಿದ್ದ ನನಗೆ 558 ಮಾತ್ರ ಬಂದಿದೆ. ವಿಜ್ಞಾನ, ಗಣಿತದಲ್ಲಿ 75ಕ್ಕಿಂತ ಹೆಚ್ಚು ಅಂಕ ಗಳಿಸುವ ವಿಶ್ವಾಸವಿತ್ತು. ಆದರೆ ಲಭಿಸಿದ್ದು ಕೇವಲ 60 ಅಂಕ. ಸಣ್ಣ ಅಕ್ಷರ ತಪ್ಪಿಗೂ ಒಂದೊಂದು ಅಂಕ ಕಳೆದಿದ್ದಾರೆ. ಹೀಗಾಗಿ ನಾನು ಕೂಡ ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದೇನೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಯೊಬ್ಬ ಹೇಳಿದ್ದಾನೆ.
ಅಂಕಗಳ ತಪ್ಪು ಉಲ್ಲೇಖ ಮತ್ತಿತರ ಗಂಭೀರ ಲೋಪದೋಷಗಳು ಕಂಡುಬಂದಿದ್ದರೆ ತತ್‌ಕ್ಷಣ ಗಮನಕ್ಕೆ ತನ್ನಿ, ಪರೀಕ್ಷಾ ಮಂಡಳಿಯಿಂದ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ.
-ವಿ. ಸುಮಂಗಲಾ, ಎಸೆಸೆಲ್ಸಿ ಪರೀಕ್ಷಾ ಮಂಡಳಿ ನಿರ್ದೇಶಕಿ
ಧನ್ಯಾ ಬಾಳೆಕಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.