ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಪ್ರತೀ ವಿದ್ಯಾರ್ಥಿಯ ಜವಾಬ್ದಾರಿ ಸರಕಾರದ್ದು


Team Udayavani, Jun 23, 2020, 9:41 AM IST

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಪ್ರತೀ ವಿದ್ಯಾರ್ಥಿಯ ಜವಾಬ್ದಾರಿ ಸರಕಾರದ್ದು

ಎಸೆಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತಾ ಕ್ರಮಗಳ ಪರಿಶೀಲನ ಸಭೆ ನಡೆಯಿತು.

ಮಂಗಳೂರು: ರಾಜ್ಯಾದ್ಯಂತ ಜೂ. 25ರಿಂದ ಜು. 4ರ ವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಸುರಕ್ಷಿತವಾಗಿ ಬರೆಯಲು ಬೇಕಾದ ಎಲ್ಲ  ಅಗತ್ಯ ಸಿದ್ಧತೆಗಳನ್ನು ಸರಕಾರ ಮತ್ತು ಜಿಲ್ಲಾಡಳಿತದಿಂದ ಕೈಗೊಳ್ಳಲಾ ಗಿದೆ. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಯ ಸಂಪೂರ್ಣ ಜವಾಬ್ದಾರಿ ಸರಕಾರದ್ದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಸೋಮವಾರ ನಡೆದ ಎಸೆಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತಾ ಕ್ರಮಗಳ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್ ಹಿನ್ನೆಲೆಯಲ್ಲಿ ಯಾರಲ್ಲೂ ಆಂತಕ ಬೇಡ. ಪರೀಕ್ಷಾ ಕೇಂದ್ರಕ್ಕೆ ಬರಲು ಅವಶ್ಯವಿದ್ದಲ್ಲಿ ಒಬ್ಬನೇ ವಿದ್ಯಾರ್ಥಿಗಾಗಿಯೂ ಬಸ್ಸಿನ ವ್ಯವಸ್ಥೆ ಮಾಡಲೂ ಸರಕಾರ ಸಿದ್ಧವಾಗಿದೆ ಎಂದರು.

ಜಿಲ್ಲೆಯಲ್ಲಿ 95 ಪರೀಕ್ಷೆ ಕೇಂದ್ರಗ ಳಿದ್ದು ಹೆಚ್ಚುವರಿಯಾಗಿ 19 ಕೇಂದ್ರಗಳನ್ನು ಗುರುತಿಸಲಾಗಿದೆ. 1,585 ಕೊಠಡಿಗಳಲ್ಲಿ 30,835 ವಿದ್ಯಾರ್ಥಿ ಗಳು ಪರೀಕ್ಷೆ ಬರೆಯಲು ಎಲ್ಲ ಸಿದ್ಧತೆ ಆಗಿದೆ. ಈ ಜಿಲ್ಲೆಯಲ್ಲಿ ನೋಂದಾಯಿಸಿ ಬೇರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ 1318 ವಿದ್ಯಾರ್ಥಿಗಳಿಗೆ ಆಯಾ ಜಿಲ್ಲೆ ಯಲ್ಲಿ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ ಎಂದರು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಭಾರತ್‌ ಸ್ಕೌಟ್‌-ಗೈಡ್‌ ಸಂಸ್ಥೆಯಿಂದ 4 ಸದಸ್ಯರ ಜತೆ ಆರೋಗ್ಯ, ಪೊಲೀಸ್‌ ಇಲಾಖೆಯಿಂದ ತಲಾ ಇಬ್ಬರು ಸಿಬಂದಿಯನ್ನು ನೀಡಲಾಗುತ್ತದೆ. ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್‌ ಮಾಡುವ ಜವಾಬ್ದಾರಿಯನ್ನು ಆಯಾ ವ್ಯಾಪ್ತಿ
ಯಲ್ಲಿ ಬರುವ ಗ್ರಾ.ಪಂ., ಮನಪಾ, ನಗರಸಭೆ, ಪಟ್ಟಣ ಪಂಚಾಯತ್‌ ಮತ್ತು ಪುರಸಭೆಗಳು ವಹಿಸಿಕೊಳ್ಳ ಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಮಾತನಾಡಿ, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ ಎಲ್ಲ ಅಧಿಕಾರಿ ಗಳು, ಸಿಬಂದಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಕಾರ್ಯ ನಿರ್ವಹಿಸಬೇಕು ಎಂದರು. ಸಂಸದ ನಳಿನ್‌ ಕುಮಾರ್‌ ಕಟೀಲು, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮೇಯರ್‌ ದಿವಾಕರ್‌ ಪಾಂಡೇಶ್ವರ, ಶಾಸಕರಾದ ಸಂಜೀವ ಮಠಂದೂರು, ರಾಜೇಶ್‌ ನಾಯ್ಕ, ಡಿ. ವೇದವ್ಯಾಸ ಕಾಮತ್‌, ಯು.ಟಿ. ಖಾದರ್‌, ಉಮಾನಾಥ ಕೋಟ್ಯಾನ್‌, ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇ ಗೌಡ, ಡಿಡಿಪಿಐ ಮಲ್ಲೇಸ್ವಾಮಿ ಉಪಸ್ಥಿತರಿದರು.

ಕರ್ನಾಟಕ ಎಸೆಸೆಲ್ಸಿ ಪರೀಕ್ಷೆ: ಪ್ರತ್ಯೇಕ ಇ-ಪಾಸ್‌ ಬೇಕಿಲ್ಲ
ಕಾಸರಗೋಡು: ಕರ್ನಾಟಕ ರಾಜ್ಯದಲ್ಲಿ ಜೂ. 25ರಿಂದ ಜು. 4ರ ವರೆಗೆ ನಡೆಯುವ ಎಸೆಸೆಲ್ಸಿ ಪರೀಕ್ಷೆಗೆ ಕಾಸರಗೋಡು ಜಿಲ್ಲೆಯಿಂದ 367 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರತ್ಯೇಕ ಇ-ಪಾಸ್‌ ಅಗತ್ಯವಿಲ್ಲ. ಬೆಳಗ್ಗೆ 7.30ರ ಒಳಗೆ ನಿಗದಿತ ಸ್ಥಳಕ್ಕೆ ತಲುಪಬೇಕು. ಪರೀಕ್ಷೆಯ ಪ್ರವೇಶ ಪತ್ರ ಜತೆಗಿದ್ದರೆ ಸಾಕು ಎಂದು ಕಾಸರಗೋಡು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರು ತಿಳಿಸಿದ್ದಾರೆ. ಈ ವರೆಗೆ ಮಂಜೇಶ್ವರ ವರೆಗೆ ಮಾತ್ರ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳು ಪರೀಕ್ಷೆಯ ದಿನಗಳಲ್ಲಿ ವಿದ್ಯಾರ್ಥಿಗಳ ಸೌಕರ್ಯಕ್ಕಾಗಿ ತಲಪಾಡಿ ವರೆಗೆ ಸಂಚರಿಸಲಿವೆ. ಎಲ್ಲ ಗಡಿ ಪ್ರದೇಶಗಳಿಂದ ದ.ಕ. ಜಿಲ್ಲಾಡಳಿತ ಬಸ್‌ ಸೌಲಭ್ಯ ಒದಗಿಸಲಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಟಾಪ್ ನ್ಯೂಸ್

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.