Students ದುರಂತ ಅಂತ್ಯ; ಶಾಸಕ ಡಾ.ಭರತ್ ದಿಗ್ಬ್ರಮೆ, ಶವಾಗಾರದಲ್ಲಿ ಕುಟುಂಬಸ್ಥರ ಆಕ್ರಂದನ
Team Udayavani, Feb 28, 2024, 12:05 PM IST
ಸುರತ್ಕಲ್: ಸುರತ್ಕಲ್ ಖಾಸಗಿ ಶಾಲೆಯೊಂದರ ನಾಲ್ವರು ವಿದ್ಯಾರ್ಥಿಗಳು ಹಳೆಯಂಗಡಿ ಬಳಿಯ ನಂದಿನಿ ನದಿಯಲ್ಲಿ ಮುಳುಗಿ ದುರಂತ ಸಾವಿಗೀಡಾಗಿರುವ ಬಗ್ಗೆ ಶಾಸಕ ಡಾ. ಭರತ್ ಶೆಟ್ಟಿ ದಿಗ್ಬ್ರಮೆ, ಆಘಾತ ವ್ಯಕ್ತಪಡಿಸಿದ್ದಾರೆ.
ತಾನು ಬೆಂಗಳೂರಿನಲ್ಲಿದ್ದು, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಪ್ರಮುಖ ಅಧಿಕಾರಿಗಳನ್ನು ಕಳಿಸಲಾಗುವುದು ಎಂದರು.
ತಾನು ಸ್ವತಃ ಗೃಹ ಸಚಿವರಿಗೆ ಮಾಹಿತಿ ನೀಡಿ ಕುಟುಂಬಕ್ಕೆ ಗರಿಷ್ಟ ಪರಿಹಾರ ಒದಗಿಸಲು ಮುಂದಾಗುತ್ತೇನೆ. ನೊಂದಿರುವ ಕುಟುಂಬಕ್ಕೆ ದೇವರು ನೋವು ಸಹಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ವಿದ್ಯಾರ್ಥಿ ವೃಂದ ತಮ್ಮ ವಿದ್ಯಾಭ್ಯಾಸದ ಸಮಯದಲ್ಲಿ ಸುರಕ್ಷತೆಯಿಂದಿರಲು ಗಮನ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ವೆನ್ಲಾಕ್ ಶವಾಗಾರದಲ್ಲಿ ಕುಟುಂಬಸ್ಥರ ಆಕ್ರಂದನ
ಸುರತ್ಕಲ್ ಮಾಜಿ ಶಾಸಕ ಮೊಯ್ದಿನ್ ಬಾವಾ ಶವಾಗಾರಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.
ಮರಣೋತ್ತರ ಶವ ಪರೀಕ್ಷೆ ವೆನ್ಲಾಕ್ ಶವಾಗಾರದಲ್ಲಿ ನಡೆಯುತ್ತಿದ್ದು ಹೆತ್ತವರು, ಸಂಬಂಧಿಕರ ಆಕ್ರಂದನ ಮನ ಕಲಕುವಂತಿದೆ. ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು ಹಾಜರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.