“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
Team Udayavani, Apr 30, 2024, 1:29 AM IST
ಮಂಗಳೂರು: ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವುದನ್ನು ಹಿಂಪಡೆಯುವ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿ ಕೃಷಿ ರಕ್ಷಣೆಗಾಗಿ ಆಯುಧ ಪರವಾನಗಿ ಹೊಂದಿರುವ (ಪೊಲೀಸ್ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲ ಆಯುಧ ಪರವಾನಗಿದಾರರು ತಮ್ಮ ಆಯುಧಗಳನ್ನು ಈಗಾಗಲೇ ಠೇವಣಿ ಇರಿಸಿರುವ ಪೊಲೀಸ್ ಠಾಣೆ/ಅಧಿಕೃತ ಕೋವಿ ಹಾಗೂ ಮದ್ದುಗುಂಡು ವ್ಯಾಪಾರಸ್ಥರಿಂದ ಹಿಂಪಡೆಯುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.
ಷರತ್ತುಗಳು
ಯಾವುದೇ ಮೆರವಣಿಗೆ, ಜಾತ್ರೆ ಇತ್ಯಾದಿಗಳಲ್ಲಿ ಶಸ್ತ್ರಾಸ್ತ್ರವನ್ನು ಒಯ್ಯಲು ಅವಕಾಶವಿಲ್ಲ. ಬೆಳೆಗಳ ರಕ್ಷಣೆಗಾಗಿ ಈ ಆಯುಧಗಳನ್ನು ಮಾತ್ರ ಬಳಸಬೇಕು. ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರವನ್ನು ಬಹಿರಂಗವಾಗಿ ಎಲ್ಲೂ ಪ್ರದರ್ಶಿಸುವಂತಿಲ್ಲ. ಸಾರ್ವಜನಿಕರನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆದರಿಸಲು ಶಸ್ತ್ರಾಸ್ತ್ರವನ್ನು ಬಳಸಬಾರದು. ಯಾವುದೇ ಸಂದರ್ಭದಲ್ಲಿ ಆವಶ್ಯವೆನಿಸಿದಲ್ಲಿ ಪೊಲೀಸ್ ಅಧಿಕಾರಿಗಳು/ ಸರಕಾರಿ ಅಧಿಕಾರಿಗಳಿಗೆ ತಪಾಸಣೆ ವೇಳೆ ಹಾಜರುಪಡಿಸಬೇಕು. ತಪಾಸಣೆಗೆ ಸಹಕರಿಸಿ ಪೂರಕ ದಾಖಲೆಗಳನ್ನು ಒದಗಿಸಬೇಕು. ಪರವಾನಿಗೆದಾರರು ಈ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಅಥವಾ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವುದು ಕಂಡುಬಂದಲ್ಲಿ ಶಸ್ತ್ರಾಸ್ತ್ರವನ್ನು ಯಾವುದೇ ಮುನ್ಸೂಚನೆ ನೀಡದೆ ವಶಪಡಿಸಿಕೊಳ್ಳಲಾಗುತ್ತದೆ.
ನೀತಿ ಸಂಹಿತೆಯು ಜಾರಿಯಲ್ಲಿರುವ ಸಮಯದಲ್ಲಿ ಆಯುಧ ಪರವಾನಗಿದಾರರು ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಐಪಿಸಿ ಸೆಕ್ಷನ್ 188ರಂತೆ ಪ್ರಕರಣ ದಾಖಲಿಸಲು ಹಾಗೂ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದವರು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.