ಆಸ್ತಿ ತೆರಿಗೆ ಪಾವತಿಗೆ ತಾಂತ್ರಿಕ ಸಮಸ್ಯೆ; ಮೇಯರ್ ನೇತೃತ್ವದಲ್ವಿ ಶೀಘ್ರ ಸಭೆ
Team Udayavani, Mar 22, 2022, 4:35 PM IST
ಲಾಲ್‌ಬಾಗ್: ಮಂಗಳೂರು ಪಾಲಿಕೆಯಲ್ಲಿ ಆನ್‌ಲೈನ್ ಮುಖೇನ ಆಸ್ತಿ ತೆರಿಗೆ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಸದ್ಯದಲ್ಲೇ ಸಂಬಂಧಪಟ್ಟ ಅಧಿಕಾರಿಗ ಜತೆ ಸಭೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ 2008ರ ಎ. 1ರಿಂದ ಸ್ವಯಂಘೋಷಿತ ಆಸ್ತಿ ತೆರಿಗೆ ವ್ಯವಸ್ಥೆ ಜಾರಿಯಲ್ಲಿದೆ. ಈ ಹಿಂದೆ ತೆರಿಗೆದಾರರು ನಿಗದಿತ ನಮೂನೆಗಳಲ್ಲಿ ವಿವರಗಳನ್ನು ಭರ್ತಿ ಮಾಡುವ ಮೂಲಕ ಸೇವಾ ಕೇಂದ್ರ ಹಾಗೂ ಬ್ಯಾಂಕ್‌ಗಳಲ್ಲಿ ಪಾವತಿ ಮಾಡಬೇಕಿತ್ತು. ಇದೀಗ ಡಿಜಿಟಲ್ ತಂತ್ರಜ್ಞಾನ ವ್ಯವಸ್ಥೆ ಬಳಸಿಕೊಳ್ಳಲಾಗುತ್ತಿದ್ದು, ಆನ್‌ಲೈನ್ ಮುಖೇನ ಬಳಸಿಕೊಳ್ಳಲು ವೆಬ್ ಅಪ್ಲಿಕೇಶನ್ ಸಿದ್ಧಪಡಿಸಲಾಗಿದೆ. ಆದರೆ ಈ ವ್ಯವಸ್ಥೆಯಲ್ಲಿ ಸದ್ಯ ಸಮಸ್ಯೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ‘ಉದಯವಾಣಿ ಸುದಿನ’ ಕಳೆದ ವಾರ ವಿಶೇಷ ವರದಿ ಪ್ರಕಟಿಸಿತ್ತು.
ಶೀಘ್ರ ಸಮಸ್ಯೆ ಪರಿಹಾರ
ಪಾಲಿಕೆಯಲ್ಲಿ ಆಸ್ತಿ ತೆರಿಗೆ ಪಾವತಿ ಮಾಡಲು ಕಳೆದ ವರ್ಷ ಆನ್‌ಲೈನ್ ವ್ಯವಸ್ಥೆ ಕಲ್ಪಿಸಲಾಗಿದೆ. ಮೊದಲನೇ ವರ್ಷವಾದ ಕಾರಣ ಕೆಲವೊಂದು ತಾಂತ್ರಿಕ ಸಮಸ್ಯೆ ಉಂಟಾಗುತ್ತಿದೆ. ಸಮಸ್ಯೆಗೆ ಕಾರಣ ಏನೆಂದು ತಿಳಿಯಲು ಅಧಿಕಾರಿಗಳ ಸಭೆ ನಡೆಸುತ್ತೇನೆ. ಇನ್ನು, ಕಚೇರಿಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಳ್ಳುತ್ತೇನೆ. ಶೀಘ್ರ ಸಮಸ್ಯೆ ಬಗೆಹರಿಸಲಾಗುವುದು ಎಂದು ಮೇಯರ್ ತಿಳಿಸಿದ್ದಾರೆ.
ಅಪ್‌ಡೇಟ್ ಆಗದೆ ಸಮಸ್ಯೆ
ಸಾರ್ವಜನಿಕರು ಆನ್‌ಲೈನ್ ಮುಖೇನ ಹಣ ಪಾವತಿ ಮಾಡುವ ವೇಳೆ ಗೇಟ್‌ವೆ ಹೆಚ್ಚಿನ ಬ್ಯಾಂಕ್ ಗಳಿಗೆ ಸಪೋರ್ಟ್ ಮಾಡದೇ ಇರುವುದರಿಂದ ಪಾವತಿಗೆ ವೇಳೆ ತೊಂದರೆಯಾಗುತ್ತಿದೆ. ಕಳೆದ ವರ್ಷ ಆಸ್ತಿ ತೆರಿಗೆ ಪಾವತಿ ಮಾಡಿದ ಅನೇಕರ ಮಾಹಿತಿ ಆನ್‌ಲೈನ್ ವ್ಯವಸ್ಥೆಯಲ್ಲಿ ಅಪ್ ಡೇಟ್ ಆಗಿಲ್ಲ. ಇದೇ ಕಾರಣಕ್ಕೆ ಹಿಂದಿನ ವರ್ಷದ ತೆರಿಗೆ ಪಾವತಿಗೆ ಬಾಕಿ ಇದೆ ಎಂದು ತೋರಿಸುತ್ತಿದ್ದು ಪ್ರಸ್ತುತ ತೆರಿಗೆ ಪಾವತಿಗೆ ತೊಂದರೆಯಾಗುತ್ತಿದೆ. ಆನ್ ಲೈನ್ ಪಾವತಿ ಮಾಡಿದರೂ ಕೆಲವರಿಗೆ ತೆರಿಗೆ ಬಾಕಿ ಇದೆ ಎಂದು ತೋರಿಸುತ್ತಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Forest: ರಿಲೀಸ್ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.