ತಾತ್ಕಾಲಿಕ ವ್ಯಾಪಾರ ಮಳಿಗೆ ವಾಹನ ಪಾರ್ಕಿಂಗ್‌ಗೆ ಬಳಕೆ!
Team Udayavani, Jun 8, 2020, 5:34 AM IST
ಮಹಾನಗರ: ಸೆಂಟ್ರಲ್ ಮಾರ್ಕೆಟ್‌ನಿಂದ ತೆರವುಗೊಳಿಸಲ್ಪಟ್ಟ ಚಿಲ್ಲರೆ ವ್ಯಾಪಾರಸ್ಥರಿಗೆ ವ್ಯಾಪಾರಕ್ಕಾಗಿ ತಾತ್ಕಾಲಿಕವಾಗಿ ನಿರ್ಮಿಸಿ ಕೊಡ ಲಾಗಿರುವ ಶೆಡ್‌ಗಳು ಈಗ ವಾಹನ ಪಾರ್ಕಿಂಗ್ ಸ್ಥಳಗಳಾಗಿ ಮಾರ್ಪಟ್ಟಿವೆ.
ಸೆಂಟ್ರಲ್ ಮಾರ್ಕೆಟ್‌ನಲ್ಲಿದ್ದ ಸಗಟು ವ್ಯಾಪಾರಸ್ಥರನ್ನು ಎರಡು ತಿಂಗಳ ಹಿಂದೆ ಬೈಕಂಪಾಡಿಯ ಎಪಿಎಂಸಿ ಯಾರ್ಡ್‌ಗೆ ಸ್ಥಳಾಂತರಗೊಳಿಸಲಾಗಿತ್ತು. ಚಿಲ್ಲರೆ ವ್ಯಾಪಾರಸ್ಥರಿಗಾಗಿ ಮಂಗಳೂರು ಪುರ ಭವನ ಎದುರು, ಬೀದಿ ಬದಿ ವ್ಯಾಪಾರಿಗಳ ವಲಯ ಮತ್ತು ಲೇಡಿಗೋಶನ್ ಆಸ್ಪತ್ರೆ ಎದುರಿನ ರಸ್ತೆ ಸಮೀಪ 100ಕ್ಕೂ ಹೆಚ್ಚು ಸಿಮೆಂಟ್ ಶೀಟ್‌ನ ತಾತ್ಕಾಲಿಕ ಮಳಿಗೆಗಳನ್ನು ನಿರ್ಮಿಸಿ ಕೊಡಲಾಗಿತ್ತು.
ಸೆಂಟ್ರಲ್ ಮಾರ್ಕೆಟ್‌ನ ಹೊಸ ವಾಣಿಜ್ಯ ಸಂಕೀರ್ಣ ಕಟ್ಟಡ ಮತ್ತು ನೆಹರೂ ಮೈದಾನದ ಬಳಿ ತಾತ್ಕಾಲಿಕ ಕಟ್ಟಡ ನಿರ್ಮಾಣಗೊಳ್ಳುವವರೆಗೆ ವ್ಯಾಪಾರ ನಡೆಸುವುದಕ್ಕಾಗಿ ಈ ಶೆಡ್‌ಗಳನ್ನು ನಿರ್ಮಿಸಿ ಕೊಡಲಾಗಿದೆ. ಆದರೆ ಇದೀಗ ದ್ವಿಚಕ್ರ ವಾಹನಗಳ ಪಾರ್ಕಿಂಗ್‌ಗೆ ಬಳಕೆಯಾಗುತ್ತಿದೆ.
ವ್ಯಾಪಾರಸ್ಥರಿಗೆ ಸೂರು !
ಲೇಡಿಗೋಶನ್ ಎದುರು ಇರುವ ತಾತ್ಕಾಲಿಕ ಮಳಿಗೆಗಳಲ್ಲಿ ಸೆಂಟ್ರಲ್ ಮಾರ್ಕೆಟ್‌ನಲ್ಲಿದ್ದ ಚಿಲ್ಲರೆ ವ್ಯಾಪಾರಸ್ಥರ ಬದಲು ನಗರದ ಇತರ ಕಡೆ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದವರು ಬಂದು ವ್ಯಾಪಾರ ಮಾಡುತ್ತಿದ್ದಾರೆ. ಇಂತಹ ವ್ಯಾಪಾರಿಗಳಿಗೆ ಮಳೆಗಾಲಕ್ಕೊಂದು ಸೂರು ಸಿಕ್ಕಂತಾಗಿದೆ. ಶೆಡ್‌ಗಳಲ್ಲಿ ವ್ಯವಸ್ಥೆ ಇಲ್ಲದಿರುವುದರಿಂದ ಅಲ್ಲಿ ತಾತ್ಕಾಲಿಕವಾಗಿಯೂ ವ್ಯಾಪಾರ ಮಾಡಲು ಸಾಧ್ಯವಿಲ್ಲ ಎಂದು ದೂರಿರುವ ಸೆಂಟ್ರಲ್ ಮಾರ್ಕೆಟ್‌ನ ಚಿಲ್ಲರೆ ವ್ಯಾಪಾರಸ್ಥರು ವ್ಯವಹಾರ ಮಾಡಲು ನಿರಾಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.