ಅನುದಾನ ರಹಿತ ಶಾಲಾ ಸಿಬಂದಿಗೆ ವೇತನ ನೀಡುವಂತೆ ಆದೇಶಿಸಿ ಸಚಿವರಿಗೆ ಕ್ಯಾ| ಕಾರ್ಣಿಕ್ ಮನವಿ
Team Udayavani, May 13, 2020, 8:09 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಲಾಕ್‌ಡೌನ್ ಬಳಿಕ ಕೆಲವು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕ-ಶಿಕ್ಷಕೇತರ ಸಿಬಂದಿಗೆ ಆಡಳಿತ ಮಂಡಳಿ ವೇತನ ಪಾವತಿ ಮಾಡದಿರುವುದು ಗಮನಕ್ಕೆ ಬಂದಿದ್ದು, ವೇತನ ಪಾವತಿಸುವ ಬಗ್ಗೆ ಶಿಕ್ಷಣ ಇಲಾಖೆ ವತಿಯಿಂದ ರಾಜ್ಯದ ಎಲ್ಲ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಆದೇಶ ನೀಡಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಲ್ಲಿ ಮನವಿ ಮಾಡಿದ್ದಾರೆ.
ಲಾಕ್‌ಡೌನ್ ಜಾರಿಯಾದ ಬಳಿಕ ಉಂಟಾದ ಉದ್ಯೋಗ ಅಭದ್ರತೆ ಇದೀಗ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಬೋಧಕ ಮತ್ತು ಬೋಧಕೇತರ ಸಿಬಂ ದಿಗೆ ತೂಗುಗತ್ತಿಯಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 3 ಲಕ್ಷಕ್ಕೂ ಅ ಧಿಕ ಸಿಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೆಚ್ಚಿನ ಶಿಕ್ಷಣ ಸಂಸ್ಥೆಗಳು ಲಾಕ್‌ಡೌನ್ ಬಳಿಕ ತಮಗೆ ಸಂಬಳ ನೀಡದಿರುವ ಬಗ್ಗೆ ಬೋಧಕ- ಬೋಧಕೇತರ ಸಿಬಂದಿ ಅಳಲನ್ನು ವ್ಯಕ್ತಪಡಿಸಿದ್ದು, ವೇತನ ಸಿಗದೆ ಅವರಿಗೆ ಕುಟುಂಬ ನಿರ್ವಹಣೆ ದುಸ್ತರವಾಗಿದೆ. ಇದೇ ರೀತಿ ಮುಂದುವರಿದಲ್ಲಿ ಅವರ ಜೀವನ ಇನ್ನಷ್ಟು ಶೋಚನಿಯ ಆಗಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.