Koudadi: ಹುಲ್ಲು ತರಲು ಹೋದವರು ಶವವಾಗಿ ಪತ್ತೆ
The person who went to bring grass was found dead
Team Udayavani, Aug 8, 2024, 8:20 PM IST
ಪುಂಜಾಲಕಟ್ಟೆ: ಹುಲ್ಲು ತರಲು ತೋಟಕ್ಕೆ ಹೋದವರು ನೀರು ಹರಿಯುವ ತೋಡಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಗುರುವಾರ(ಆ.7) ಸಂಭವಿಸಿದೆ.
ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕೌಡಾಡಿ ನಿವಾಸಿ ವಿಶ್ವನಾಥ ಶೆಟ್ಟಿ(60) ಮೃತಪಟ್ಟವರಾಗಿದ್ದಾರೆ. ಗುರುವಾರ ಮಧ್ಯಾಹ್ನ ಹುಲ್ಲು ತರಲು ತೋಟಕ್ಕೆ ಹೋದವರು ತುಂಬ ಹೊತ್ತಾದರೂ ಮನೆಗೆ ಬಾರದ ಹಿನ್ನಲೆಯಲ್ಲಿ ಗಾಬರಿಯಾದ ಮನೆಮಂದಿ, ತೋಟಕ್ಕೆ ಹೋಗಿ ಹುಡುಕಿದಾಗ ಅಲ್ಲಿ ನೀರು ಹರಿಯುವ ತೋಡಿನಲ್ಲಿ ಇವರು ಬಿದ್ದಿರುವುದು ಕಂಡು ಬಂದಿದೆ. ತತ್‌ಕ್ಷಣ ಅವರನ್ನು ಮೇಲಕ್ಕೆತ್ತಿ ವಾಮದಪದವು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದನ್ನು ದೃಢಪಡಿಸಿದರು.
ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.