ಪೊಲೀಸರ ಲಾಠಿ, ರಿವಾಲ್ವರ್ ಪ್ರದರ್ಶನಕ್ಕಲ್ಲ: ಹಲ್ಲೆಕೋರರಿಗೆ ಕೋಟ ಎಚ್ಚರಿಕೆ
Team Udayavani, Apr 23, 2020, 10:04 AM IST
ಮಂಗಳೂರು: ಕೋವಿಡ್ ವಾರಿಯರ್ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ಪೊಲೀಸರು, ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕೇಸ್ ಹಾಕಿ ಜೈಲಿಗಟ್ಟಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ವಾರಿಯರ್ ಮೇಲೆ ಹಲ್ಲೆ ಪ್ರಕರಣಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸರಿಗೆ ಲಾಠಿ, ರಿವಾಲ್ವರ್ ಕೊಟ್ಟಿರುವುದು, ಪ್ರದರ್ಶನಕ್ಕೆ ಅಲ್ಲ, ಜೀವರಕ್ಷಣೆಗಾಗಿ. ಅವರ ಮೇಲೆ ನಡೆ ಯುವ ಹಲ್ಲೆಯನ್ನು ಸಹಿಸುವುದು ಅಸಾಧ್ಯ. ಕೊರೊನಾ ತಪಾಸಣೆಗೆ ಹೋದವರ ಮೇಲೆ ಹಲ್ಲೆಗೆ ಯಾರಾದರೂ ಮುಂದಾದಲ್ಲಿ ಯಾವುದೇ ಮುಲಾ ಜಿಲ್ಲದೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು. ಜನರಿಗೆ ಮುಜರಾಯಿ ಇಲಾಖೆಯ ವತಿಯಿಂದ ಪ್ರತೀ ದೇವಸ್ಥಾನದಲ್ಲೂ ಆಹಾರ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಪತ್ರಕರ್ತರ ಆರೋಗ್ಯ ತಪಾಸಣೆ ನಡೆಸಲು ವ್ಯವಸ್ಥೆ ಮಾಡಬೇಕೆಂದು ಕೋರಿ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಈ ವೇಳೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.