ಸ್ಥಳೀಯರಿಗೆ ಬೃಹತ್ ಕಂಪೆನಿಗಳಿಂದ ಹೆಚ್ಚುತ್ತಿದೆ ಸಮಸ್ಯೆ: ಮುನೀರ್
Team Udayavani, Feb 9, 2018, 3:26 PM IST
ಸುರತ್ಕಲ್ : ಬೃಹತ್ ಸಂಸ್ಥೆಗಳು, ಉದ್ಯಮಗಳು ಬಂದರೆ ಸ್ಥಳೀಯರಿಗೆ ಉದ್ಯೋಗ ದೊರಕುತ್ತದೆ ಎಂಬ ಭರವಸೆ
ಸುಳ್ಳಾಗಿದ್ದು, ಇದೀಗ ಅನುಕೂಲಕ್ಕಿಂತ ಅನನುಕೂಲವೇ ಹೆಚ್ಚಿ ಆರೋಗ್ಯ ಕೆಡಿಸಿ ಕೊಳ್ಳುವ ಸ್ಥಿತಿಗೆ ತಲುಪಿದ್ದೇವೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು.
ಕಾನಾ ಜೋಕಟ್ಟೆ ಕಾರಿಡಾರ್ನ ದುರವಸ್ಥೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ನದಿ, ಭೂ ಮಾಲಿನ್ಯದಿಂದ ಜನರು ಉಸಿರಾಟ, ಚರ್ಮ ಸಮಸ್ಯೆಯಿಂದ ಬಳಲುವಂತಾಗಿದೆ. ಜನರು ಓಡಾಡಲು ಮಾಡಿದ ಕಾರಿಡಾರ್ ಹದಗೆಟ್ಟಿದ್ದು ದ್ವಿಚಕ್ರ ಸವಾರರು ಅಪಘಾತಕ್ಕೀಡಾಗುವ ಸ್ಥಿತಿ ಬಂದಿದೆ.
ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಿದ್ದರೂ ದುರಸ್ತಿ ಕಾರ್ಯಕೈಗೊಂಡಿಲ್ಲ. ಕಂಪೆನಿಗಳು ಸಿಎಸ್ಆರ್ ನಿಧಿಯನ್ನು ಸಮಸ್ಯೆ ಅನುಭವಿಸುತ್ತಿರುವ ಜನರಿಗಾಗಿ ವಿನಿಯೋಗಿಸುವ ಬದಲು ಬೇರೆಡೆ ಉಪಯೋಗ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿ.ಕೆ. ಇಮ್ತಿಯಾಝ್, ಅಜ್ಮಲ್ ಅಹ್ಮದ್, ಚಂದ್ರಶೇಖರ್, ಇಕ್ಬಾಲ್, ಸಲೀಂ ಶ್ಯಾಡೋ, ಅಮೀ
ನಮ್ಮ, ಅಬೂಬಕ್ಕರ್ ಬಾವಾ, ಯಮುನಕ್ಕ ಜೋಕಟ್ಟೆ ಕರುಣಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.