ಕ್ಷೇತ್ರಾದ್ಯಂತ ಸಾವಿರ ನಿವೇಶನ ನೀಡುವ ಕನಸು ನನಸು: ಉಮಾನಾಥ ಕೋಟ್ಯಾನ್‌

ಮೂಡುಬಿದಿರೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

Team Udayavani, Aug 15, 2021, 8:21 PM IST

ಕ್ಷೇತ್ರಾದ್ಯಂತ ಸಾವಿರ ನಿವೇಶನ ನೀಡುವ ಕನಸು ನನಸು: ಉಮಾನಾಥ ಕೋಟ್ಯಾನ್‌

ಮೂಡುಬಿದಿರೆ: ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ಈ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟವರನ್ನು ನೆನೆಯುವ, ಗೌರವಿಸುವ ಮೂಲಕವೇ ನಾವು ಸ್ವಾತಂತ್ರ್ಯ ದಿನವನ್ನು ಆಚರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್‌ ಹೇಳಿದರು.

ಮೂಡುಬಿದಿರೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ 75ನೇ ಸ್ವಾತಂತ್ರ್ಯೋತ್ಸವದ ಅಧ್ಯಕ್ಷತೆ ವಹಿಸಿ, ತಾಲೂಕು ತಹಶೀಲಾªರ್‌, ದಂಡಾ ಧಿಕಾರಿ ಪುಟ್ಟರಾಜು ಜತೆಗೂಡಿ ರಾಷ್ಟ್ರಧ್ವಜಾ ರೋಹಣ ನೆರವೇರಿಸಿ, ಪೊಲೀಸ್‌, ಹೋಂ ಗಾರ್ಡ್ಸ್, ಸ್ಕೌಟ್ಸ್‌ ದಳಗಳಿಂದ ಗೌರವ ರಕ್ಷೆ ಸ್ವೀಕರಿಸಿ, ಕನ್ನಡ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೋವಿಡ್‌ ಸೆಂಟರ್‌ ಉದ್ಘಾಟನೆ
ಸ್ಕೌಟ್ಸ್‌ ಗೈಡ್ಸ್‌ ಕನ್ನಡ ಭವನದಲ್ಲಿ ಸಜ್ಜುಗೊಳಿಸಲಾಗಿರುವ ಕೋವಿಡ್‌ ಸೆಂಟರ್‌ನ್ನು ಶಾಸಕ ಉಮಾನಾಥ ಕೋಟ್ಯಾನ್‌ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್‌ ಪುಟ್ಟರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ದಯಾವತಿ, ಪುರಸಭಾಧ್ಯಕ್ಷ ಪ್ರಸಾದ್‌ ಕುಮಾರ್‌, ಉಪಾಧ್ಯಕ್ಷೆ ಸುಜಾತಾ ಶಶಿಕಿರಣ್‌, ಮುಖ್ಯಾಧಿಕಾರಿ ಇಂದೂ ಎಂ., ಪೊಲೀಸ್‌ ಇನ್‌ಸ್ಪೆಕ್ಟರ್‌ ದಿನೇಶ್‌ ಕುಮಾರ್‌, ಸ. ಅರಣ್ಯಸಂರಕ್ಷಣಾಧಿಕಾರಿ ಸತೀಶ್‌ ಎನ್‌., ವಲಯ ಅರಣ್ಯಾಧಿಕಾರಿಗಳಾದ ಪ್ರಕಾಶ್‌, ಉಮೇಶ, ಅಗ್ನಿ ಶಾಮಕ ಠಾಣಾಧಿಕಾರಿ ಸ್ಟೀಫನ್‌ ಡಿ’ಸಿಲ್ವ, ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ| ಶಶಿಕಲಾ, ತಾ| ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್‌ ಎಸ್‌., ತಾ| ಯುವಜನಸೇವಾ ಅಧಿಕಾರಿ ಶಿವಾನಂದ ಕಾಯ್ಕಿಣಿ ಪಾಲ್ಗೊಂಡಿದ್ದರು.

ಇದನ್ನೂ ಓದಿ:ಕಲಹ ಪೀಡಿತ ಕಾಬೂಲ್ ನಿಂದ ದೆಹಲಿಗೆ ಬಂದಿಳಿದ 129 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ

ಜೈನ ಪ್ರೌಢಶಾಲೆಯ ವಿದ್ಯಾರ್ಥಿನಿ ಯರು ರಾಷ್ಟ್ರಗೀತೆ, ನಾಡಗೀತೆ ಮತ್ತು ರೈತಗೀತೆ ಹಾಡಿದರು. ತಹಶೀಲ್ದಾರ್‌ ಪುಟ್ಟರಾಜು ಸ್ವಾಗತಿಸಿ, ನವೀನ್‌ಚಂದ್ರ ಅಂಬೂರಿ ನಿರೂಪಿಸಿದರು.

ಪರಿಹಾರ ಚೆಕ್‌ ವಿತರಣೆ
ಸಾಂಕೇತಿಕವಾಗಿ 94ಸಿ ಅನ್ವಯ 6, 94 ಸಿಸಿ ಅನ್ವಯ 7 ಕುಟುಂಬಗಳಿಗೆ ಮನೆ ನಿವೇಶನ ಹಕ್ಕುಪತ್ರಗಳನ್ನು ವಿತರಿಸಿದ ಅವರು, ಮೂಡುಬಿದಿರೆ ತಾಲೂಕಿನ ಸಾವಿರ ಕುಟುಂಬಗಳಿಗೆ ಮನೆ ನಿವೇಶನ ಒದಗಿಸಿಕೊಡುವ ಮೂಲಕ ಸ್ವಾತಂತ್ರ್ಯೋತ್ಸವದ ಅಮೃತ ಮಹೋ ತ್ಸವವನ್ನು ಸ್ಮರಣೀಯ ವಾಗಿಸಬೇಕೆನ್ನುವ ತನ್ಮ ಕನಸು ನನಸಾಗಿದೆ ಎಂದರು. ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದ ತಾಲೂಕಿನ ವಿವಿಧ ಗ್ರಾಮಗಳ 23 ಮಂದಿಗೆ ರೂ. 5,04,200 ಮೊತ್ತದ ಪರಿಹಾರ ಚೆಕ್‌ಗಳನ್ನು ಅವರು ವಿತರಿಸಿದರು.

ಟಾಪ್ ನ್ಯೂಸ್

Vijayendra (2)

MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

lakshmi hebbalkar

Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್

10

BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್‌ ʼಛಾವಾʼ; ರಿಲೀಸ್‌ ಡೇಟ್‌ ಮುಂದೂಡಿಕೆ?

7-

ಹುಂಡಿ ಒಡೆದು ನಗದು ದೋಚಿ ಪರಾರಿಯಾದ ದುಷ್ಕರ್ಮಿಗಳು; ಎರಡು ಪ್ರತ್ಯೇಕ ಘಟನೆ ದಾಖಲು

1-qwwqewq

Udupi; ಬಜೆ ಡ್ಯಾಂ ಬಳಿ ಶಿಲಾಯುಗದ ನಿಲಿಸುಗಲ್ಲು ಪತ್ತೆ

US Result: ಡೊನಾಲ್ಡ್‌ ಟ್ರಂಪ್  ಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

US Result: ಡೊನಾಲ್ಡ್‌ Trumpಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

KPTCL ಕಾಮಗಾರಿ ಅವಾಂತರ; ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ಬಳಿ ಅಪಾಯ

4

Mangaluru-ಕಾಸರಗೋಡಿಗೆ ‘ಅಶ್ವಮೇಧ’ ಬಸ್‌

3

Bajpe: ಹಳ್ಳಿಯ ತೋಡು, ಗದ್ದೆ, ತೋಟಗಳನ್ನೂ ಬಿಡದ ಪ್ಲಾಸ್ಟಿಕ್‌!

ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10

Katpadi: ಅಂಚಿಗೆ ಬ್ಯಾರಿಕೇಡ್‌ ಇರಿಸಿ ರಿಬ್ಬನ್‌ ಅಳವಡಿಕೆ

Vijayendra (2)

MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

9

Padubidri: ಹೆಜಮಾಡಿ ಬಂದರು ಮೀನಮೇಷ ಎಣಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.