ದಕ್ಷಿಣ ಕನ್ನಡಲ್ಲಿ ಮತ್ತೆ ಮೂವರಿಗೆ ಕೋವಿಡ್-19 ಸೋಂಕು ಪತ್ತೆ
Team Udayavani, May 25, 2020, 1:22 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ಮೂರು ಕೋವಿಡ್-19 ಪ್ರಕರಣಗಳು ವರದಿಯಾಗಿದೆ. ಇದಿರಿಂದ ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.
ಈ ಮೂವರು ಸೋಂಕಿತರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. 30, 25, 55 ವರ್ಷದ ಮೂವರು ಪುರುಷರಿಗೆ ಕೋವಿಡ್ -19 ಸೋಂಕು ತಾಗಿರುವುದು ದೃಢವಾಗಿದೆ.
ಈ ಮೂವರು ಮಹಾರಾಷ್ಟ್ರದ ಮುಂಬಯಿ ಮತ್ತು ಪೂನಾದಿಂದ ಬಂದಿದ್ದರು. ಇವರನ್ನು ಬೆಳ್ತಂಗಡಿಯಲ್ಲಿ ಕ್ವಾರೆಂಟೈನ್ ಮಾಡಲಾಗಿತ್ತು. ಸದ್ಯ ಇವರಿಗೆ ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಲಾಗುತ್ತಿದೆ.
ರಾಜ್ಯದಲ್ಲಿ ಇಂದು 69 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2158ಕ್ಕೆ ಏರಿಕೆಯಾಗಿದೆ. ಇದರಲ್ಲಿ 680 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 53 ಜನ ಸೋಂಕಿನ ಕಾರಣದಿಂದ ಸಾವನ್ನಪ್ಪಿದರೆ, ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಶಾಲಾ ವಾಹನ ಸುರಕ್ಷತೆ; ಪಾಲಕರಿಗೆ ಚಿಂತೆ
ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ
Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು
Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು
Mangaluru: ಯಾವುದೇ ರಾಜ್ಯಕ್ಕೂ ಕೇಂದ್ರ ಮಲತಾಯಿ ಧೋರಣೆ ಮಾಡಿಲ್ಲ: ನಿರ್ಮಲಾ ಸೀತಾರಾಮನ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.