ಪ್ರಮುಖ ದೇಗುಲಗಳ ಮೃತ್ತಿಕೆ ಅಯೋಧ್ಯೆಗೆ
Team Udayavani, Jul 22, 2020, 10:53 AM IST
ಮಂಗಳೂರು: ಅಯೋಧ್ಯೆಗೆ ರವಾನಿಸುವ ಮೃತ್ತಿಕೆಯನ್ನು ಪೂಜಿಸಲಾಯಿತು.
ಮಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳ ಪವಿತ್ರ ಮಣ್ಣನ್ನು ಸಂಗ್ರಹಿಸಿ ದ.ಕ. ಜಿಲ್ಲಾ ವಿಶ್ವ ಹಿಂದೂ ಪರಿಷತ್‌ನ ಕಾರ್ಯಾಲಯದಿಂದ ಮಂಗಳವಾರ ಅಯೋಧ್ಯೆಗೆ ಕಳುಹಿಸಿಕೊಡಲಾಯಿತು. ಈ ವೇಳೆ ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಹಲವು ವರ್ಷಗಳ ಹೋರಾಟದ ಬಳಿಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ದಿನ ಸನ್ನಿಹಿತವಾಗುತ್ತಿದೆ. ರಾಮರಾಜ್ಯ ಆಗಬೇಕು, ಭವ್ಯ ರಾಮಮಂದಿರ ನಿರ್ಮಾಣವಾಗಬೇಕು ಎಂಬುದು ಪ್ರತಿ ಹಿಂದೂಗಳ ಕನಸಾಗಿತ್ತು. ಆ. 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳ ಪವಿತ್ರ ಮಣ್ಣನ್ನು ಅಯೋಧ್ಯೆಗೆ ಕಳುಹಿಸಿಕೊಡಲಾಗುತ್ತಿದೆ ಎಂದರು.
ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕದ್ರಿ, ಮಂಗಳಾದೇವಿ, ಕಟೀಲು, ಪೊಳಲಿ, ಸೋಮೇಶ್ವರ ದೇವಸ್ಥಾನಗಳಿಂದ ಪವಿತ್ರ ಮಣ್ಣನ್ನು ಅಯೋಧ್ಯೆಗೆ ಕಳುಹಿಸಿಕೊಡಲಾಗಿದೆ. ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ಜಿಲ್ಲಾಧ್ಯಕ್ಷ ಗೋಪಾಲ್ ಕುತ್ತಾರ್, ಜಿಲ್ಲಾ ಉಪಾಧ್ಯಕ್ಷ ಭಾಸ್ಕರ ಧರ್ಮಸ್ಥಳ, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಜಿಲ್ಲಾ ಸಹ ಕಾರ್ಯದರ್ಶಿ ಸುರೇಖಾ ರಾಜ್, ಬಜರಂಗದಳ ವಿಭಾಗ ಸಂಚಾಲಕ ಭುಜಂಗ ಕುಲಾಲ್, ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ, ವಸಂತ ಗುರುಪುರ, ಪ್ರವೀಣ್ ಕುತ್ತಾರ್, ನವೀನ್ ಮೂಡುಶೆಡ್ಡೆ, ಪ್ರದೀಪ್ ಸರಿಪಳ್ಳ, ದೀಪಕ್ ಮರೋಳಿ, ವಾಸುದೇವ ಗೌಡ, ವಿಷ್ಣು ಕಾಮತ್ ಗುರುಪುರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.