ನಗರದಲ್ಲಿ ಟ್ರಾಫಿಕ್ ಜಾಮ್; ಸವಾರರಿಗೆ ಕಿರಿಕಿರಿ
Team Udayavani, Oct 13, 2018, 12:25 PM IST
ಮಹಾನಗರ: ನಗರದ ವಿವಿಧ ಪ್ರದೇಶಗಳಲ್ಲಿ ಶುಕ್ರವಾರ ಮಧ್ಯಾಹ್ನ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಒಂದು ಕಡೆಯಿಂದ ಮತ್ತೊಂದು ಕಡೆ ತೆರಳಲು ತೊಂದರೆ ಅನುಭವಿಸಿದರು.
ಶುಕ್ರವಾರ ಸಭೆ-ಸಮಾರಂಭಗಳು ಜಾಸ್ತಿಯಿದ್ದು, ಈ ಕಾರಣಕ್ಕೆ ಹಲವು ಕಡೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ನಗರದ ಬಲ್ಲಾಳ್ಬಾಗ್ನಿಂದ ಬಂಟ್ಸ್ ಹಾಸ್ಟೆಲ್ವರೆಗೆ ಕಾರು, ಬೈಕ್ ಸಹಿತ ಹತ್ತಾರು ವಾಹನಗಳು ಸುಮಾರು ಅರ್ಧ ತಾಸಿಗೂ ಹೆಚ್ಚಿನ ಹೊತ್ತು ಸಾಲುಗಟ್ಟಿ ನಿಂತಿದ್ದವು. ಅಲ್ಲದೆ, ಲಾಲ್ಬಾಗ್, ನಂತೂರು, ಕಂಕನಾಡಿ, ಬಂಟ್ಸ್ ಹಾಸ್ಟೆಲ್, ಪಡೀಲ್, ಹಂಪನಕಟ್ಟೆ ಮತ್ತು ಇನ್ನಿತರ ಪ್ರದೇಶಗಳಲ್ಲಿಯೂ ವಾಹನ ದಟ್ಟಣೆ ಮಾಮೂಲಿ ದಿನಗಳಿಗಿಂತ ಹೆಚ್ಚಾಗಿತ್ತು. ತುರ್ತು ಕಾರ್ಯದ ನಿಮಿತ್ತ ತೆರಳುವ ಮಂದಿಗೆ ಅಡ್ಡಿಯುಂಟಾಯಿತು.
ಅನೇಕ ಕಡೆಗಳಲ್ಲಿ ಮಳೆಯಿಂದಾಗಿ ರಸ್ತೆಗಳು ಹಾಳಾಗಿ, ಅಲ್ಲಲ್ಲಿ ಗುಂಡಿ ಬಿದ್ದ ಕಾರಣ ವಾಹನಗಳಿಗೆ ಸರಾಗವಾಗಿ ಸಂಚರಿಸುವುದಕ್ಕೂ ತೊಂದರೆಯಾಗುತ್ತಿದೆ. ಅಲ್ಲದೆ, ಕೆಲವು ರಸ್ತೆ ಬದಿಯಲ್ಲಿ ಪಾಲಿಕೆ ವತಿಯಿಂದ ಕಾಮಗಾರಿಗಳು ನಡೆಯುತ್ತಿದ್ದು ಇದರಿಂದಲೂ ಸುಗಮ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.