ಅಭಿವೃದ್ಧಿ ಕಾಮಗಾರಿಗೆ ಮರಕ್ಕೆ ಕೊಡಲಿಯೇಟು
Team Udayavani, May 21, 2020, 5:42 AM IST
ಮಂಗಳೂರು: ನಗರದಲ್ಲಿ ನಾನಾ ರೀತಿಯ ಅಭಿವೃದ್ಧಿ ಕಾಮಗಾರಿಗಳಿಂದಾಗಿ ಮರಗಳು ಧರಾಶಾಹಿಯಾಗುತ್ತಿದ್ದು, ಪರಿಸರವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ನಗರದ ಆರ್ಯ ಸಮಾಜ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಈ ರಸ್ತೆಯ ಬದಿಯಲ್ಲಿದ್ದ ಸುಮಾರು 100 ವರ್ಷದ ಹಲಸಿನ ಮರವನ್ನು ಬುಧವಾರ ಬೆಳಗ್ಗಿನ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಕಡಿದಿದ್ದಾರೆ. ಕೂಡಲೇ ಪರಿಸರವಾದಿಗಳು ಸಹಿತ ಸ್ಥಳೀಯರು ಸ್ಥಳಕ್ಕೆ ಆಗಮಿಸಿ, ಮರ ಕಡಿಯದಂತೆ ಮನವಿ ಮಾಡಿದ್ದರು. ಆದರೆ, ಅವರ ಮಾತಿಗೆ ಮನ್ನಣೆ ಕೊಡದ ಅಧಿಕಾರಿಗಳು ಮರಕ್ಕೆ ಕೊಡಲಿಯೇಟು ಹಾಕಿದ್ದಾರೆ.
ಈ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯಿಸಿದ ಪರಿಸರವಾದಿ ಜೀತ್ ಮಿಲನ್ ರೋಶ್ ಅವರು, “ಅಭಿವೃದ್ಧಿ ಹೆಸರಿನಲ್ಲಿ ನಗರದಲ್ಲಿ ಮರಗಳನ್ನು ಕಡಿದುರುಳಿಸಲಾಗುತ್ತಿದೆ. ಆರ್ಯ ಸಮಾಜ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಈ ಮರವನ್ನು ಉಳಿಸಿಕೊಂಡು ರಸ್ತೆ ಅಗಲ ಮಾಡಬಹುದಿತ್ತು. ಆದರೆ, ಅಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಚಕಾರ ಎತ್ತುತ್ತಿಲ್ಲ’ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.