Ullala: ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದಮಹಿಳೆ ಸಾವು
Team Udayavani, Sep 25, 2023, 10:20 AM IST
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು ಬಳಿ ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದಮಹಿಳೆಯೊಬ್ವರು ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಮೃತಪಟ್ಟವರು.
ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು ಸೆ.24ರ ಭಾನುವಾರ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿನಡೆದ ಪೂಜೆಯಲ್ಲಿ ಪಾಲ್ಗೊಂಡು ಸಂಜೆ ಕಾಸರಗೋಡು ಕಡೆ ತೆರಳಲು ಸಹೋದರನ ಬೈಕ್ ನಲ್ಲಿ ತೊಕ್ಕೊಟ್ಟು ಜಂಕ್ಷನ್ ಗೆ ಹೋಗುವವರಿದ್ದರು.
ಈ ನಡುವೆ ಜಪ್ಪಿನಮೊಗರು ಬಳಿಯ ಸಂಬಂಧಿಕರ ಮನೆಗೆ ತೆರಳಿ ಬಳಿಕ ಬೀರಿಗೆ ಬಂದು ಅಲ್ಲಿಂದ ಕಾಸರಗೋಡು ಕಡೆ ತೆರಳಲು ಹೆದ್ದಾರಿಯಲ್ಲಿ ತೊಕ್ಕೊಟ್ಟು ಪ್ಲೈಓವರ್ ಬಳಿ ತಲುಪುತ್ತಿದ್ದಂತೆ ಕೆರೆಬೈಲು ನಾಗನ ಕಟ್ಟೆ ಬಳಿ ಸ್ಕೂಟರ್ ನಿಂದ ಕೆಳಗೆ ಉರುಳಿ ಬಿದ್ದಿದ್ದಾರೆ. ಈ ಪರಿಣಾಮ ತಲೆಗೆ ಗಂಭೀರ ಗಾಯಗೊಂಡಿದ್ದ ಸುಮಾ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.