ಉಳ್ಳಾಲ: ಪುತ್ರಿಯ ವಿವಾಹದ ದಿನದಂದೇ ಹೃದಯಾಘಾತದಿಂದ ತಂದೆ ಸಾವು
Team Udayavani, May 16, 2023, 6:40 AM IST
ಉಳ್ಳಾಲ: ಬೋಳಿಯಾರ್‌ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ.
ಬೋಳಿಯಾರ್ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ (60) ಮೃತರು. ಅವರ ಮಗಳಿಗೆ ಕಾಸರಗೋಡುವಿನ ಯುವಕನೊಂದಿಗೆ ಸೋಮವಾರ ಹೊಸಂಗಡಿಯ ಸಭಾಂಗಣವೊಂದರಲ್ಲಿ ಮದುವೆ ನಿಗದಿಯಾಗಿತ್ತು. ಮದುವೆಯ ಸಿದ್ಧತೆಯಲ್ಲಿ ಹಸನಬ್ಬ ಅವರಿಗೆ ಸೋಮವಾರ ಮುಂಜಾನೆ 4 ಗಂಟೆಯ ವೇಳೆಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಪಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗದೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.
ಅವರು ಕುಕ್ಕೋಟ್ಟು ಜುಮ್ಮಾ ಮಸೀದಿಯ ಕೋಶಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಹಸನಬ್ಬ ಮೃತಪಟ್ಟ ಹಿನ್ನಲೆಯಲ್ಲಿ ಸಭಾಂಗಣದಲ್ಲಿ ಮದುವೆ ಕಾರ್ಯಕ್ರಮ ರದ್ದುಗೊಳಿಸಲಾಗಿತ್ತು ಹಾಗೂ ಎರಡು ಕುಟುಂಬದ ಹಿರಿಯರೊಂದಿಗೆ ಚರ್ಚಿಸಿ ಸಂಜೆಯ ವೇಳೆಗೆ ವರನ ಮನೆಯಲ್ಲಿ ಸರಳವಾಗಿ ನಿಖಾ ನೆರವೇರಿಸಲಾಯಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.