ಅಪಘಾತ ವಲಯವಾದ ಕುಂಟಿಕಾನ: ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಕಾರಣ?

ವಾಹನ ಚಾಲಕರಿಗೆ ಗೊಂದಲ; ಪಾದಚಾರಿಗಳಿಗೂ ಅಪಾಯ

Team Udayavani, May 10, 2022, 11:33 AM IST

kuntikana

ಕುಂಟಿಕಾನ: ರಾಷ್ಟ್ರೀಯ ಹೆದ್ದಾರಿ 66ರ ಕುಂಟಿಕಾನ ಪರಿಸರದಲ್ಲಿ ಪ್ರತಿನಿತ್ಯವೆಂಬಂತೆ ಅಪಘಾತಗಳು ಸಂಭವಿಸುತ್ತಿದ್ದು, ಆತಂಕ ಮೂಡಿಸಿದೆ.

ಮುಖ್ಯವಾಗಿ ಕುಂಟಿಕಾನದ ಕದ್ರಿ ಅಗ್ನಿಶಾಮಕ ಠಾಣೆಯ ಎದು ರಿನಲ್ಲಿ ಹಾದು ಹೋಗುವ ಹೆದ್ದಾರಿಯ ಭಾಗ ಅಪಘಾತ ವಲಯವಾಗಿ ಗುರುತಿಸಿಕೊಳ್ಳುತ್ತಿದೆ. ಇಲ್ಲಿ ಹೆದ್ದಾರಿ ತಗ್ಗಿನಿಂದ ಕೂಡಿರುವುದೇ ಅಪಘಾತಕ್ಕೆ ಪ್ರಮುಖ ಕಾರಣ ಎಂಬುದು ಕಂಡು ಬರುತ್ತಿದೆ. ಕೆಪಿಟಿ ಮತ್ತು ಕೊಟ್ಟಾರಚೌಕಿ ಕಡೆಯಿಂದ ಬರುವ ವಾಹನಗಳು ಎತ್ತರದಿಂದ ತಗ್ಗಾದ ಕಡೆಗೆ ಅತ್ಯಂತ ವೇಗವಾಗಿ ಧಾವಿಸುತ್ತವೆ. ಆಗ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗುತ್ತವೆ.

ಈ ಭಾಗದ ಹೆದ್ದಾರಿಯ ಇಕ್ಕೆಲಗಳಲ್ಲಿ ಸರ್ವಿಸ್‌ ರಸ್ತೆ ಇದೆ. ಆದರೆ ಸರ್ವಿಸ್‌ ರಸ್ತೆ ಆರಂಭ/ ಕೊನೆಗೊಳ್ಳುವ ಸ್ಥಳದಲ್ಲಿ ಯಾವುದೇ ಸೂಚನ ಫ‌ಲಕಗಳು ಇಲ್ಲ. ಹಾಗಾಗಿ ವಾಹನಗಳ ಚಾಲಕರು ಗೊಂದಲಕ್ಕೀಡಾಗಿ ಏಕಾಏಕಿ ಬ್ರೇಕ್‌ ಹಾಕುತ್ತಾರೆ. ಇದರಿಂದಾಗಿಯೂ ಅಪಘಾತಗಳು ಸಂಭವಿಸುತ್ತಿವೆ. ಪಾದಚಾರಿಗಳು ರಸ್ತೆ ದಾಟುವುದು ಕೂಡ ಇಲ್ಲಿ ತುಂಬಾ ಅಪಾಯಕಾರಿಯಾಗಿದೆ. ಈ ಹಿಂದೆ ಇಲ್ಲಿ ಡೈವರ್ಷನ್‌ ಇತ್ತು. ಆಗ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದವು. ಡೈವರ್ಷನ್‌ನ್ನು ಮುಚ್ಚಿರುವುದರಿಂದ ಅಪಘಾತಗಳ ಸಂಖ್ಯೆ ಈ ಹಿಂದಿಗಿಂತ ಸ್ವಲ್ಪ ಕಡಿಮೆಯಾಗಿದೆಯಾದರೂ ಆಗಾಗ್ಗೆ ಅಪಘಾತಗಳು ನಡೆಯುತ್ತಲೇ ಇವೆ. ಈ ಸ್ಥಳ ಅಪಾಯಕಾರಿ ಎಂದು ಸೂಚಿಸುವ ರೆಡ್‌ ಸಿಗ್ನಲ್‌ ಲೈಟ್‌ ಅನ್ನು ಇಲ್ಲಿ ಅಳವಡಿಸಲಾಗಿದೆ. ಆದರೆ ವಾಹನ ಸವಾರರು, ಚಾಲಕರು ಇದನ್ನು ಗಮನಿಸಿ ವಾಹನದ ವೇಗ ತಗ್ಗಿಸುವುದಿಲ್ಲ ಎನ್ನುತ್ತಾರೆ ಸ್ಥಳೀಯರು.

ಅಗ್ನಿಶಾಮಕ ಠಾಣೆಯ ಎದುರೇ ಈ ‘ಆ್ಯಕ್ಸಿಡೆಂಟ್‌ ಸ್ಪಾಟ್‌’ ಇದೆ. ಅಪಘಾತ ನಡೆದರೆ ಅಗ್ನಿಶಾಮಕ ಸಿಬಂದಿ ಹಗಲು ರಾತ್ರಿಯೆನ್ನದೆ ಜೀವ ಉಳಿಸಲು ಮುಂದಾಗುತ್ತಿದ್ದಾರೆ. ಇತ್ತೀಚೆಗೆ ನಡೆದ ಅಪಘಾತದಲ್ಲಿ ಅಗ್ನಿಶಾಮಕ ದಳ ಓರ್ವ ಸಿಬಂದಿಯೇ ಮೃತಪಟ್ಟಿದ್ದರು.

ಪರಿಹಾರವೇನು?

ಹೆದ್ದಾರಿ ನಿರ್ಮಾಣ ಅಸಮರ್ಪಕವಾಗಿರುವುದರಿಂದಲೇ ಅಪಘಾತಗಳು ಇಲ್ಲಿ ಹೆಚ್ಚಾಗಿ ಸಂಭವಿಸುತ್ತಿವೆ ಎಂಬುದು ಸ್ಥಳೀಯರ ಅಭಿಪ್ರಾಯ. ವಾಹನಗಳ ವೇಗದ ಮಿತಿಯನ್ನು ಕಡಿಮೆ ಮಾಡಿಸುವುದು ಸದ್ಯಕ್ಕೆ ಇರುವ ಪರಿಹಾರ. ಅದಕ್ಕಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸಬಹುದು ಅಥವಾ ವೈಜ್ಞಾನಿಕ ರೀತಿಯ ಹಂಪ್ಸ್‌ ಹಾಕಬಹುದು. ವಾಹನ ಸವಾರರು, ಚಾಲಕರ ಗಮನ ಸೆಳೆಯುವಂತಹ ರೀತಿಯಲ್ಲಿ ಮುನ್ನೆಚ್ಚರಿಕೆ ಫ‌ಲಕಗಳನ್ನು ಅಳವಡಿಸ ಬಹುದು ಎಂದು ಸ್ಥಳೀಯ ವಾಹನ ಚಾಲಕರು ಸಲಹೆ ನೀಡಿದ್ದಾರೆ.

-ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

1-sonia

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು… ಮಹಿಳೆ ಪಾರು

Mangaluru: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು… ಮಹಿಳೆ ಪಾರು

ಆಳ್ವಾಸ್‌ ವಿರಾಸತ್‌ಗೆ ತೆರೆ; ಮೂಡುಬಿದಿರೆಯಲ್ಲಿ 6 ದಿನ ಕಳೆಗಟ್ಟಿದ್ದ ಸಂಭ್ರಮ

ಆಳ್ವಾಸ್‌ ವಿರಾಸತ್‌ಗೆ ತೆರೆ; ಮೂಡುಬಿದಿರೆಯಲ್ಲಿ 6 ದಿನ ಕಳೆಗಟ್ಟಿದ್ದ ಸಂಭ್ರಮ

ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

Someshwar Beach: ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

ಬೆಳಕಿನ ನಿರೀಕ್ಷೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪ್ರದೇಶದ ನಿವಾಸಿಗಳು

ಬೆಳಕಿನ ನಿರೀಕ್ಷೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪ್ರದೇಶದ ನಿವಾಸಿಗಳು

Mangaluru: ಮೂಲಗೇಣಿ ಹಕ್ಕು ಸದನದಲ್ಲಿ ಚರ್ಚೆ: ಐವನ್‌ ಡಿ’ಸೋಜಾ

Mangaluru: ಮೂಲಗೇಣಿ ಹಕ್ಕು ಸದನದಲ್ಲಿ ಚರ್ಚೆ: ಐವನ್‌ ಡಿ’ಸೋಜಾ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

Rain: 5 ವಿದ್ಯುತ್‌ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್‌

Rain: 5 ವಿದ್ಯುತ್‌ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.