ವಿವಿಧೆಡೆ ಮಳೆಕೊಯ್ಲು ಅಳವಡಿಕೆ ಮಾಹಿತಿ ಕಾರ್ಯಾಗಾರ
'ಮನೆ ಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನದ ಯಶಸ್ಸು
Team Udayavani, Aug 5, 2019, 5:00 AM IST
ಮಹಾನಗರ: ಕುಳಾಯಿ ಸ್ಪಂದನ ಫ್ರೆಂಡ್ಸ್ ಸರ್ಕಲ್ ಸಹಯೋಗದಲ್ಲಿ ಮಳೆ ನೀರುಕೊಯ್ಲು ಬಗ್ಗೆ ಮಾಹಿತಿ ಕಾರ್ಯಾಗಾರ ರವಿವಾರ ಕುಳಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು.
ನಿರ್ಮಿತಿ ಕೇಂದ್ರದ ಯೋಜನ ನಿರ್ದೇಶಕ ರಾಜೇಂದ್ರ ಕಲ್ಬಾವಿ ಅವರು ಮಳೆ ನೀರು ಕೊಯ್ಲು ವಿಷಯದ ಕುರಿತಾಗಿ ಮಾಹಿತಿ ನೀಡಿದರು. ಸಂಸ್ಥೆಯ ಪದಾಧಿಕಾರಿಗಳು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದು, ಮಳೆಕೊಯ್ಲು ಬಗ್ಗೆ ಮಾಹಿತಿ ಪಡೆದುಕೊಂಡರು.
ದೈವಸ್ಥಾನದ ಬಾವಿಗೆ ಮಳೆಕೊಯ್ಲು
‘ಉದಯವಾಣಿ’ ಮಳೆಕೊಯ್ಲು ಅಭಿಯಾನದಿಂದ ಪ್ರೇರಿತವಾದ ಸುರತ್ಕಲ್ ಕುಚ್ಚಿಗುಡ್ಡೆ ಕೋಡ್ದಬ್ಬು ದೈವಸ್ಥಾನ ಆಡಳಿತ ಸಮಿತಿಯು ದೈವಸ್ಥಾನದ ಬಾವಿಗೆ ಮಳೆಕೊಯ್ಲು ಅಳವಡಿಕೆ ಮಾಡಿದ್ದಾರೆ. ಭವಿಷ್ಯದ ನೀರಿನ ಅಗತ್ಯತೆಯನ್ನು ಗಮನದಲ್ಲಿಟ್ಟುಕೊಂಡು 25,000 ರೂ.ಗಳ ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಮಾಡಲಾಗಿದೆ.
ಕುಚ್ಚಿಗುಡ್ಡೆ ಕೋಡ್ದಬ್ಬು ದೈವಸ್ಥಾನ ಪುರಾತನ ದೈವಸ್ಥಾನ. ಇಲ್ಲಿ ಬಾವಿ ಇದ್ದು, ದೇವಸ್ಥಾನದ ದೈವ ಕಾರ್ಯಗಳಿಗೆ ಮಾತ್ರ ಬಾವಿ ನೀರಿನ ಬಳಕೆ ಮಾಡಲಾಗುತ್ತದೆ. ಅಲ್ಲದೆ, ನೀರಿನ ಸಮಸ್ಯೆ ಇಲ್ಲಿ ಕಂಡು ಬಂದಿಲ್ಲ. ಆದರೆ, ‘ಉದಯವಾಣಿ’ ಮಳೆಕೊಯ್ಲು ಅಭಿಯಾನ ನೋಡಿ ಪ್ರೇರಿತರಾದ ಆಡಳಿತ ಮಂಡಳಿಯ ಸದಸ್ಯರು ಮಳೆಕೊಯ್ಲು ವ್ಯವಸ್ಥೆ ಮೂಲಕ ನೀರಿಂಗಿಸಿ ಅಂತರ್ಜಲ ಮಟ್ಟ ಏರಿಸಲು ಸಹಕರಿಸಿದ್ದಾರೆ. ನೀರು ಶುದ್ಧೀಕರಣಕ್ಕೆ ಫಿಲ್ಟರ್ ಅಳವಡಿಸಲಾಗಿದೆ.
ಅಧ್ಯಕ್ಷ ಜಯ ಶೆಟ್ಟಿ, ಆಡಳಿತ ಮಂಡಳಿಯ ಸರ್ವ ಸದಸ್ಯರ ಸಹಕಾರದಲ್ಲಿ ಈ ವ್ಯವಸ್ಥೆ ಮಾಡಲಾಗಿದೆ. ಪ್ರತೀ ಗ್ರಾಮದಲ್ಲೂ ಮಳೆ ಕೊಯ್ಲು ಆದಲ್ಲಿ ಅಂತರ್ಜಲ ವೃದ್ಧಿ ಆಗುವುದರಲ್ಲಿ ಸಂಶಯವಿಲ್ಲ ಎನ್ನುತ್ತಾರೆ ದೈವಸ್ಥಾನದ ಗೌರವಾಧ್ಯಕ್ಷ ವೈ. ರಮಾನಂದ ರಾವ್.
ಜಲಮರುಪೂರಣ ಮಾಹಿತಿ ಕಾರ್ಯಾಗಾರ
ಗುರುಪುರ ಕೈಕಂಬ ಪೊಂಪೈ ಚರ್ಚ್‌ನ ಕೊಳವೆ ಬಾವಿಗೆ ಅಳವಡಿಸಿದ ಜಲಮರುಪೂರಣ ಉದ್ಘಾಟನೆ ಹಾಗೂ ಮಳೆಕೊಯ್ಲು ಮಾಹಿತಿ ಕಾರ್ಯಾಗಾರ ರವಿವಾರ ಚರ್ಚ್‌ನ ಸಭಾಂಗಣದಲ್ಲಿ ನಡೆಯಿತು.
ನಿರ್ಮಿತಿ ಕೇಂದ್ರದ ಯೋಜನ ನಿರ್ದೇಶಕ ರಾಜೇಂದ್ರ ಕಲ್ಬಾವಿ ಅವರು ಮಳೆ ನೀರು ಕೊಯ್ಲು ವಿಷಯದ ಕುರಿತಾಗಿ ಮಾಹಿತಿ ನೀಡಿದರು.ಚರ್ಚ್‌ನ ವಂ| ಆ್ಯಂಟನಿ ಲೋಬೋ, ಪಂಚಾಯತ್ ಸದಸ್ಯರು, ಲಯನ್ಸ್ ಕ್ಲಬ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.