Mangaluru ಕುದ್ಮುಲ್ ರಂಗರಾವ್ ಸಮಾಧಿಗೆ ಗೌರವ ಸಲ್ಲಿಸಿದ ವೇದವ್ಯಾಸ್ ಕಾಮತ್
ಅವರ ಆಶಯವನ್ನು ಆದರ್ಶವಾಗಿ ಪರಿಗಣಿಸಿ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ...
Team Udayavani, Apr 16, 2023, 10:18 PM IST
ಮಂಗಳೂರು : ಬಿಜೆಪಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಈ ಬಾರಿಯೂ ನಾಮಪತ್ರ ಸಲ್ಲಿಸುವ ಮುನ್ನ ದಲಿತೋದ್ಧಾರಕ ಕುದ್ಮುಲ್ ರಂಗರಾವ್ ಅವರ ಸಮಾಧಿಗೆ ತೆರಳಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ”ಕಳೆದ ಬಾರಿಯೂ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಪೂಜ್ಯ ಕುದ್ಮುಲ್ ರಂಗರಾವ್ ಅವರ ಸಮಾಧಿಗೆ ಗೌರವ ಸಮರ್ಪಸಿದ್ದೆ. ಕುದ್ಮುಲ್ ರಂಗರಾವ್ ಅವರು ನನಗೆ ಆದರ್ಶ. ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆ, ಹಿಂದುಳಿದ ಸಮಾಜವನ್ನು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮುನ್ನೆಲೆಗೆ ತರಬೇಕೆಂಬ ಅವರ ಆಶಯವನ್ನು ಆದರ್ಶವಾಗಿ ಪರಿಗಣಿಸಿ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ” ಎಂದರು.
ಮಂಗಳೂರು ನಗರ ದಕ್ಷಿಣ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷರಾದ ರಘುವೀರ್ ಬಾಬುಗುಡ್ಡೆ ಮಾತನಾಡಿ, ”ತನ್ನ ಶಾಸಕತ್ವದ ಅವಧಿಯಲ್ಲಿ ನಮ್ಮ ಸಮುದಾಯದ ಪ್ರತಿಯೊಂದು ಬೇಡಿಕೆಗಳಿಗೂ ಪೂರಕವಾಗಿ ಸ್ಪಂದಿಸಿದ ವೇದವ್ಯಾಸ್ ಕಾಮತ್ ಅವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಲಿ” ಎಂದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಶೈಲೇಶ್, ಕುದ್ಮುಲ್ ರಂಗರಾಯರ ಎಜ್ಯುಕೇಷನ್ ಟ್ರಸ್ಟ್ ನ ಸದಸ್ಯರಾದ ಶ್ಯಾಮ್ ಕರ್ಕೇರ, ಶಶಿಕಾಂತ್, ಅರವಿಂದ್, ಹಾಗೂ ಬಿಜೆಪಿ ಎಸ್.ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಬಿಲಿಂಬಿ, ಉಪಾಧ್ಯಕ್ಷರಾದ ಸಂದೀಪ್ ಬೋಳೂರು, ರಾಧಕೃಷ್ಣ, ಸದಸ್ಯರಾದ ಗಂಗಾಧರ, ಬಿಜೆಪಿ ಮುಖಂಡರಾದ ಪ್ರಮೋದ್ ಕೊಟ್ಟಾರಿ, ಅರ್ಚನಾ, ಜನಾರ್ದನ, ವಿವೇಕ್ ಶೆಟ್ಟರ್, ಲಲಿತಾ, ಅಕ್ಷತಾ, ಮೇಘ, ದಿನೇಶ್, ನಾರಾಯಣ್, ವಿಕ್ರಮ್ ಕದ್ರಿ, ರಶ್ಮಿ, ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.