ವೆನ್ಲಾಕ್: ಕೋವಿಡ್ 19 ಪತ್ತೆ ಪ್ರಯೋಗಾಲಯ ಕಾರ್ಯಾರಂಭ
Team Udayavani, Apr 8, 2020, 5:31 AM IST
ಮಂಗಳೂರು: ವೆನ್ಲಾಕ್ ಜಿಲ್ಲಾಸ್ಪತ್ರೆ ಯಲ್ಲಿ ನೂತನ ಕೋವಿಡ್ ಪ್ರಯೋಗಾಲಯ ಮಂಗಳವಾರ ಅಧಿಕೃತ ಕಾರ್ಯಾರಂಭ ಮಾಡಿದೆ. ಮೊದಲ ದಿನವೇ 10 ಮಂದಿಯ ಗಂಟಲ ದ್ರವ ಮಾದರಿಯನ್ನು ಹೊಸ ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಗಿದೆ.
ನೂತನ ಪ್ರಯೋಗಾಲಯದಲ್ಲಿ ರೋಗಿಗಳ ಗಂಟಲ ದ್ರವ ಮಾದರಿಯ ಪರೀಕ್ಷಾ ವರದಿ ಒಂದು ಗಂಟೆಯೊಳಗೇ ಲಭ್ಯವಾಗಲಿದೆ. ರೋಗ ಶಾಸ್ತ್ರಜ್ಞ ಡಾ| ಶರತ್‌ಕುಮಾರ್ ಅವರು ಪ್ರಯೋಗಾಲಯದ ಮೇಲ್ವಿಚಾರಕರಾಗಿದ್ದಾರೆ. ಇಬ್ಬರು ವೈದ್ಯರು ಸಹಿತ ಒಟ್ಟು ಐದು ಮಂದಿ ಪ್ರಯೋಗಾಲಯದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ವೆನ್ಲಾಕ್ ನಲ್ಲಿ ಕೋವಿಡ್ 19 ಸಂಬಂಧಪಟ್ಟಂತೆ ಶಂಕಿತ ಪ್ರಕರಣಗಳು ದಾಖಲಾದಾಗ ರೋಗಿಗಳ ಗಂಟಲ ದ್ರವ ಮಾದರಿಯನ್ನು ಹಾಸನ ಮತ್ತು ಬೆಂಗಳೂರಿನ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗುತ್ತಿತ್ತು. ಈ ಪರೀಕ್ಷಾ ವರದಿ ಮತ್ತೆ ಜಿಲ್ಲಾ ಆರೋಗ್ಯ ಇಲಾಖೆ ಕೈ ಸೇರಲು ಕನಿಷ್ಠ ಎರಡು ದಿನಗಳ ಕಾಲಾವಕಾಶ ಬೇಕಿತ್ತು. ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದರಿಂದ ವಿದೇಶಗಳಿಂದ ಬಂದ ಹಲವಾರು ರೋಗಿಗಳಲ್ಲಿ ವಿವಿಧ ರೋಗ ಲಕ್ಷಣ ಕಂಡುಬಂದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಗಂಟಲು ದ್ರವ ಪರೀಕ್ಷೆ ಮಾಡಲಾಗುವುದರಿಂದ ಇದಕ್ಕೆ ಪ್ರಯೋಗಾಲಯ ಅವಶ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಐಸಿಎಂಆರ್ ಪ್ರಯೋಗಾಲಯಕ್ಕೆ ಸೋಮವಾರವೇ ಅನುಮತಿ ನೀಡಿದ್ದು, ಮಂಗಳವಾರ ಕಾರ್ಯಾರಂಭ ಮಾಡಿದೆ. ಪ್ರಯೋಗಾಲಯದ ಪ್ರಾಯೋಗಿಕವಾಗಿ ವಾರದ ಹಿಂದೆಯೇ ಕಾರ್ಯಾರಂಭಿಸಿತ್ತು.
ದ.ಕ.: ಕೋವಿಡ್ 19 ಪ್ರಕರಣ ಇಲ್ಲ
ದ.ಕ. ಜಿಲ್ಲೆಯಿಂದ ಪರೀಕ್ಷೆಗೆ ಕಳುಹಿಸಲಾಗಿದ್ದ 10 ಮಂದಿಯ ಗಂಟಲ ದ್ರವ ಮಾದರಿಯ ವರದಿ ಮಂಗಳವಾರ ಜಿಲ್ಲಾಡಳಿತದ ಕೈ ಸೇರಿದ್ದು, ಎಲ್ಲವೂ ನೆಗೆಟಿವ್ ಆಗಿವೆ. ಇದರಲ್ಲಿ ವೆನ್ಲಾಕ್ ನಲ್ಲಿ ಹೊಸದಾಗಿ ಆರಂಭವಾಗಿರುವ ಪ್ರಯೋಗಾಲಯದಲ್ಲಿ ಪರೀಕ್ಷಿಸಿದ ವರದಿಗಳೂ ಸೇರಿವೆ. ಏಳು ಮಾದರಿಗಳ ವರದಿ ಸಿಗಲು ಬಾಕಿ ಇದೆ. 3 ಮಂದಿ ಹೊಸದಾಗಿ ದಾಖಲಾಗಿದ್ದಾರೆ. ಹೊಸದಾಗಿ 49 ಮಂದಿಯನ್ನು ಮಂಗಳವಾರ ತಪಾಸಣೆಗೊಳಪಡಿಸಲಾಗಿದೆ. ಇಲ್ಲಿವರೆಗೆ 3,930 ಮಂದಿ ಗೃಹ ನಿಗಾವಣೆಯಲ್ಲಿದ್ದು, 10 ಮಂದಿ ಇಎಸ್‌ಐ ಆಸ್ಪತ್ರೆಯಲ್ಲಿದ್ದಾರೆ. 1989 ಮಂದಿ 28 ದಿನಗಳ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ.
ಪ್ರತಿ ಕುಟುಂಬಕ್ಕೆ ಅರ್ಧ ಲೀ. ಹಾಲು
ಸರಕಾರದ ಆದೇಶದಂತೆ ಪ್ರತಿ ಕುಟುಂಬಕ್ಕೆ ಒಂದು ಲೀಟರ್ ಹಾಲಿನ ಬದಲಾಗಿ ಅರ್ಧ ಲೀಟರ್‌ಗೆ ಸೀಮಿತಗೊಳಿಸಲಾಗಿದೆ. ದ.ಕ. ಜಿಲ್ಲೆಗೆ 3 ಸಾವಿರ ಲೀ. ಉಚಿತ ಹಾಲು ಸರಬರಾಜಿಗೆ ಸಂಬಂಧಿಸಿದಂತೆ ಪರಿಷ್ಕೃತ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.