‘ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ’
Team Udayavani, Aug 17, 2018, 12:35 PM IST
ವಾಮಂಜೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಗಳೂರು, ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ನೀರುಮಾರ್ಗ ವಲಯ ಇದರ ಆಶ್ರಯದಲ್ಲಿ ಪದಾಧಿಕಾರಿಗಳ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ಚರ್ಚ್ ಸಭಾ ಭವನದಲ್ಲಿ ಜರಗಿತು. ಸ್ಥಳೀಯ ಕಾರ್ಪೊರೇಟರ್ ಹೇಮಲತಾ ರಘು ಸಾಲ್ಯಾನ್ ದೀಪ ಬೆಳಗಿಸಿ, ಉದ್ಘಾಟಿಸಿ ಶುಭ ಹಾರೈಸಿದರು.
ಶಾಸಕ ಡಾ| ವೈ. ಭರತ್ ಶೆಟ್ಟಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವೈಖರಿ ಬಗ್ಗೆ ಶ್ಲಾಘಿಸಿದರು. ಇಂದು ಅಧಿಕಾರ ಪಡೆಯುವ ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಯೋಜನೆಯ ಬೆಳವಣಿಗೆ ಹಾಗೂ ಸಾರ್ವಜನಿಕರಿಗೆ ಯೋಜನೆಯ ಸವಲತ್ತು ದೊರಕಿಸಿ ಕೊಡುವಲ್ಲಿ ತಮ್ಮ ಕರ್ತವ್ಯ ನಿರ್ವಹಿಸಬೇಕೆಂದು ಸಲಹೆ ನೀಡಿದರು.
ಸಂಸ್ಕೃತಿ ಉಳಿಸಿ
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ಇಂದು ಸ್ತ್ರೀಯರು ಸ್ವಾವಲಂಬಿಗಳಾಗಿ ಬದುಕಲು ಯೋಜನೆ ಸಹಕಾರಿಯಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಚರ್ಚ್ ಧರ್ಮಗುರು ವಂ| ಸಿಪ್ರಿಯನ್ ಪಿಂಟೋ ಮಾತನಾಡಿ, ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆದಿದ್ದು, ಮಹಿಳೆಯರೇ ಹೆಚ್ಚಾಗಿ ವೇದಿಕೆಯಲ್ಲಿ ಹಾಗೂ ಸಭಾಂಗಣದಲ್ಲಿ ನೆರೆದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಯೋಜನಾಧಿಕಾರಿ ಉಮರಬ್ಬ ಮಾಹಿತಿಯನ್ನು ನೀಡಿದರು. ಮೇಲ್ವಿಚಾರಕಾದ ಸಂಪತ್ ಕುಮಾರ್ ಯೋಜನೆಯ ವರದಿ ವಾಚಿಸಿದರು.
ಮಂಗಳೂರು ಗ್ರಾಮಾಂತರ ಪೋಲಿಸ್ ಇನ್‌ಸ್ಪೆಕ್ಟರ್ ಸಿದ್ಧಗೌಡ ಬಜಂತ್ರಿ, ತಾ.ಪಂ. ಸದಸ್ಯೆ ಅಪ್ಸತ್, ಪದ್ಮನಾಭ ಕೋಟ್ಯಾನ್ ಬಿಎಲ್‌ಪಿ, ವಸಂತ್ ಕುಮಾರ್ ಪೆರ್ಮಂಕಿ, ಸತೀಶ್ ಶೆಟ್ಟಿ ಮೂಡುಜಪ್ಪುಗುತ್ತು, ಶಶಿಧರ್ ಭಟ್, ಜಯಲಕ್ಷ್ಮೀ ಹೆಗ್ಡೆ ಉಪಸ್ಥಿತರಿದ್ದರು. ಕೆಸರ್ದ ಗೊಬ್ಬುಲು ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ರಾಜೀವ ಶೆಟ್ಟಿ ಸಲ್ಲಾಜೆ ಸ್ವಾಗತಿಸಿ, ಅಶೋಕ್ ಅಡ್ಯಾರ್ ವಂದಿಸಿದರು. ಸಂಧ್ಯಾ ಭಂಡಾರಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.