ಮಲೇರಿಯಾ ನಿಯಂತ್ರಣ ದಿನಾಚರಣೆ
Team Udayavani, Apr 26, 2019, 6:25 AM IST
ಮಂಗಳೂರು/ ಉಡುಪಿ: ವಿಶ್ವ ಮಲೇರಿಯಾ ದಿನಾಚರಣೆ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುರುವಾರ ಮಲೇರಿಯಾ ದಿನಾಚರಣೆ ನಡೆಸಲಾಯಿತು.
ಮಂಗಳೂರಿನ ದ.ಕ. ಜಿ.ಪಂ. ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಡಾ| ಸೆಲ್ವಮಣಿ ಆರ್. ಮಲೇರಿಯಾ ನಿಯಂತ್ರಣ ಅಭಿಯಾನಕ್ಕೆ ಚಾಲನೆ ನೀಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಮತ್ತಿತರ ಪ್ರಮುಖರು ಭಾಗವಹಿಸಿದ್ದರು. ಈ ಬಾರಿಯ ಮುಖ್ಯ ಕಾರ್ಯಕ್ರಮವಾಗಿ ನಗರದ 62 ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಮಲೇರಿಯಾ ತಡೆಗಟ್ಟುವ ನಿಟ್ಟಿನಲ್ಲಿ ವಹಿಸಬೇಕಾದ ಎಚ್ಚರಿಕೆ, ಜಾಗೃತಿ ಕಾರ್ಯಗಳ ಕುರಿತು ಕಚೇರಿ ಸಿಬಂದಿಗಳಿಗೆ ಮಾಹಿತಿ ನೀಡಲಾಯಿತು. “ಮಲೇರಿಯಾ ನಿರ್ಮೂಲನೆ ನನ್ನಿಂದ ಪ್ರಾರಂಭ’ ಎಂಬ ಘೋಷವಾಕ್ಯದಡಿ ಕಾರ್ಯಕ್ರಮ ನಡೆಯಿತು.
ಉಡುಪಿ ಪತ್ರಿಕಾ ಭವನದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ, ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಆಶ್ರಯದಲ್ಲಿ ನಡೆದ ವಿಶ್ವ ಮಲೇರಿಯಾ ದಿನಾಚರಣೆ ಮತ್ತು ಮಾಧ್ಯಮ ಪ್ರತಿನಿಧಿಗಳ ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಓಂಪ್ರಕಾಶ್ ಕಟ್ಟಿಮನಿ ಮಾತನಾಡಿದರು. ದೇಶವನ್ನು 2030ರ ವೇಳೆಗೆ ಮತ್ತು ರಾಜ್ಯವನ್ನು 2025ಕ್ಕೆ ಮಲೇರಿಯಾ ಮುಕ್ತ ಮಾಡಲು ಸರಕಾರ ಗುರಿ ನಿಗದಿ ಮಾಡಿದ್ದು, ಆರೋಗ್ಯ ಇಲಾಖೆ 2022ಕ್ಕೆ ಮಲೇರಿಯಾ ನಿರ್ಮೂಲನೆ ಮಾಡಿ, ಮತ್ತೆ 3 ವರ್ಷ ನಿಗಾ ವಹಿಸಲು ಚಿಂತನೆ ನಡೆಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.