ಕ‌ಲಾವಿದರ ಸಮರ್ಪಣೆ, ಪ್ರೇಕ್ಷಕರ ಪ್ರೋತ್ಸಾಹದಿಂದ ಯಕ್ಷಗಾನದ ಉಳಿವು

ಯಕ್ಷಧ್ರುವ ಪಟ್ಲ ಸಂಭ್ರಮ 2022 ಸಮಾರೋಪದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ

Team Udayavani, May 30, 2022, 1:49 AM IST

ಕ‌ಲಾವಿದರ ಸಮರ್ಪಣೆ, ಪ್ರೇಕ್ಷಕರ ಪ್ರೋತ್ಸಾಹದಿಂದ ಯಕ್ಷಗಾನದ ಉಳಿವು

yakshadhruva, patla Sambhrama 2022,ಯಕ್ಷಧ್ರುವ, ಪಟ್ಲ ಸಂಭ್ರಮ 2022

ಮಂಗಳೂರು: ಆಧುನಿಕತೆಯ ಹೊಡೆತದಿಂದ ಅನೇಕ ಕಲೆಗಳು ನಶಿಸುತ್ತಿರುವ ಕಾಲ ಘಟ್ಟದಲ್ಲಿ ಯಕ್ಷಗಾನ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು, ಜನಪ್ರಿಯತೆ ವೃದ್ಧಿಸಿ ಕೊಂಡು ಬೆಳೆಯುವಲ್ಲಿ ಕ‌ಲಾವಿದರ ಸಮರ್ಪಣ ಭಾವ, ಹೊಸತನ, ಪ್ರೇಕ್ಷಕರ ಪ್ರೋತ್ಸಾಹ ಕಾರಣವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು.

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ ಆಶ್ರಯದಲ್ಲಿ ರವಿವಾರ ಅಡ್ಯಾರ್‌ ಗಾರ್ಡನ್‌ನಲ್ಲಿ ಡಾ| ಪುನೀತ್‌ ರಾಜ್‌ಕುಮಾರ್‌ ವೇದಿಕೆ ಯಲ್ಲಿ ಜರಗಿದ ಯಕ್ಷಧ್ರುವ ಪಟ್ಲ ಸಂಭ್ರಮ 2022 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತ ನಾಡಿದರು. ಪಟ್ಲ ಸತೀಶ್‌ ಶೆಟ್ಟಿ ಅವರಂಥ ಯುವ ಕಲಾವಿದರು ಹೊಸತನವನ್ನು ಪ್ರತಿಪಾದಿಸಿದ ಕಾರಣ ಈ ಕಲೆ ಸಾಕಷ್ಟು ಜನರನ್ನು ಆಕರ್ಷಿ ಸುತ್ತಿದೆ. ಸತೀಶ್‌ ಶೆಟ್ಟಿ ಅವರ ನೇತೃತ್ವದ ಟ್ರಸ್ಟ್‌ ಯಕ್ಷಗಾನ ಕಲೆ, ಕಲಾವಿದರ ಅಭಿವೃದ್ಧಿಗಾಗಿ ನಡೆಸುತ್ತಿರುವ ಕಾರ್ಯ ಅನನ್ಯ ಎಂದರು.

ಎಡನೀರು ಮಠದ ಶ್ರೀ ಸಚ್ಚಿದಾ ನಂದ ಭಾರತಿ ಸ್ವಾಮೀಜಿ, ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.

ಮುಂಬಯಿಯ ಉದ್ಯಮಿ, ಟ್ರಸ್ಟ್‌ನ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ ಶುಭಾಶಂಸನೆಗೈದರು. ಬರೋಡಾದ ಉದ್ಯಮಿ ಶಶಿಧರ ಬಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಸಚಿವ ಎಸ್‌. ಅಂಗಾರ, ಕೆಪಿಎಸ್‌ಸಿ ನಿವೃತ್ತ ಆಯುಕ್ತ ಟಿ. ಶ್ಯಾಮ್‌ ಭಟ್‌, ಉದ್ಯಮಿಗಳಾದ ಆನಂದ ಶೆಟ್ಟಿ ತೋನ್ಸೆ, ರಘುರಾಮ ಶೆಟ್ಟಿ, ಕೆ.ಎಂ. ಶೆಟ್ಟಿ, ರವೀಂದ್ರ ಭಂಡಾರಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಪೂನಾ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್‌, ಬಂಟರ ಸಂಘ ಮುಂಬಯಿ ಪ್ರಧಾನ ಕಾರ್ಯದರ್ಶಿ ಆರ್‌.ಕೆ. ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.

ಶಾಸಕರಾದ ವೇದವ್ಯಾಸ ಕಾಮತ್‌, ಉಮಾನಾಥ ಕೋಟ್ಯಾನ್‌, ಡಾ| ಭರತ್‌ ಶೆಟ್ಟಿ, ಎಂಇಐ ಲಿ. ಅಧ್ಯಕ್ಷ ಸಂತೋಷ್‌ ಕುಮಾರ್‌ ರೈ ಬೋಳಿಯಾರು, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌, ಉದ್ಯಮಿ ಸಂತೋಷ್‌ ಶೆಟ್ಟಿ, ಹಿಂ. ವರ್ಗಗಳ ಆಯೋಗದ ಸದಸ್ಯ ಕೆ.ಟಿ. ಶೆಟ್ಟಿ, ಉದ್ಯಮಿ ಯಾದವ ಕೋಟ್ಯಾನ್‌ ವಿಶೇಷ ಆಹ್ವಾನಿತರಾಗಿದ್ದರು.

ಟ್ರಸ್ಟ್‌ನ ಮಹಾಪೋಷಕರಾದ ರಾಜ್ಯೋತ್ಸವ ಪುರಸ್ಕೃತ ಚೆಲ್ಲಡ್ಡ ಕೆ.ಡಿ. ಶೆಟ್ಟಿ ದಂಪತಿ ಹಾಗೂ ವಕ್ವಾಡಿ ಪ್ರವೀಣ್‌ ಶೆಟ್ಟಿ, ಅಂತಾರಾಷ್ಟ್ರೀಯ ಸೊಸೈಟಿ ಐಕಾನ್‌ ಪ್ರಶಸ್ತಿ ಪುರಸ್ಕೃತ ಕಡಂದಲೆ ಸುರೇಶ್‌ ಭಂಡಾರಿ ಹಾಗೂ ಸಹಕಾರಿ ರತ್ನ ಪುರಸ್ಕೃತ ಸವಣೂರು ಸೀತಾರಾಮ ರೈ ದಂಪತಿಗೆ ಗೌರವಾರ್ಪಣೆ ಸಲ್ಲಿಸಿ ಸಮ್ಮಾನಿಸಲಾಯಿತು. ಭಾರತೀಯ ಸೇನೆಯ ಮೇಜರ್‌ ಆಗಿ ಪದೋನ್ನತಿ ಹೊಂದಿರುವ ಭರತ್‌ ಶೆಟ್ಟಿ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ ಸ್ಥಾಪಕಾಧ್ಯಕ್ಷ ಸತೀಶ್‌ ಶೆಟ್ಟಿ ಪಟ್ಲ ಸ್ವಾಗತಿಸಿದರು. ಅಡ್ಯಾರ್‌ ಪುರುಷೋತ್ತಮ ಭಂಡಾರಿ, ಕದ್ರಿ ನವನೀತ್‌ ಶೆಟ್ಟಿ ನಿರೂಪಿಸಿದರು. ಬೆಳಗ್ಗೆ ಉದ್ಘಾಟನ ಸಮಾ ರಂಭ ಜರಗಿತು. ಸಮಾರಂಭ ದಲ್ಲಿ “ಯಕ್ಷಾಂಗಣ ಧ್ರುವತಾರೆ ಪಟ್ಲ’ ಮತ್ತು “ಧ್ರುವ ಪ್ರಭ’-ಸೇವಾಯಾನದ ಮೆಲುಕು ಕೃತಿ ಬಿಡುಗಡೆ ಮಾಡಲಾಯಿತು.

ಪಟ್ಲ ಪ್ರಶಸ್ತಿ ಪ್ರದಾನ
ಮಾಂಬಾಡಿ ಸುಬ್ರಹ್ಮಣ್ಯ ಭಟ್‌ ಅವರಿಗೆ 1 ಲಕ್ಷ ರೂ. ನಗದು ಸಹಿತ “ಪಟ್ಲ ಪ್ರಶಸ್ತಿ 2022′ ನೀಡಿ ಗೌರವಿಸಲಾಯಿತು. ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ| ಎಂ.ಎಲ್‌. ಸಾಮಗ ಅಭಿನಂದನ ಭಾಷಣ ಮಾಡಿದರು. ಪದ್ಮನಾಭ ಉಪಾಧ್ಯ, ಸದಾಶಿವ ಶೆಟ್ಟಿಗಾರ್‌ ಸಿದ್ದಕಟ್ಟೆ, ಅಜ್ರಿ ಗೋಪಾಲ ಗಾಣಿಗ, ಯೋಗಾಕ್ಷಿ ಗಣೇಶ್‌ ಗುಜರನ್‌, ಮಾಧವ ಭಂಡಾರಿ ಕುಳಾಯಿ, ಕಲ್ಲುಗುಂಡಿ ಕೊರಗಪ್ಪ ಮಣಿಯಾಣಿ, ಉಜಿರೆ ನಾರಾಯಣ ಪೂಜಾರಿ, ವಿಜಯಕುಮಾರ್‌ ಶೆಟ್ಟಿ ಮೊಲೊಟ್ಟು, ಅರೆಹೊಳೆ ಸಂಜೀವ ಶೆಟ್ಟಿ, ಮಧುಕರ ಬೋಳೂರು ಅವರಿಗೆ ತಲಾ 20 ಸಾವಿರ ರೂ. ನಗದು ಸಹಿತ “ಯಕ್ಷಧ್ರುವ ಕಲಾ ಗೌರವ-2022′ ಪ್ರದಾನ ಮಾಡಲಾಯಿತು.

ಕಲಾವಿದರಿಗೆ ನೆರವು
ಯಕ್ಷಧ್ರುವ ಪಟ್ಲ ಸಂಭ್ರಮ 2022 ಕಾರ್ಯಕ್ರಮದಲ್ಲಿ ಸೇವಾಯೋಜನೆಯಡಿ 13 ಮಂದಿ ಆಶಕ್ತ ಕಲಾವಿದರಿಗೆ ತಲಾ 50 ಸಾವಿರ ರೂ. ನೆರವು, 12 ಮಂದಿ ಕಲಾವಿದರಿಗೆ ತಲಾ 25 ಸಾವಿರ ರೂ.ಗಳಂತೆ ವೈದ್ಯಕೀಯ ನೆರವು, 24 ಮಂದಿ ಕಲಾವಿದರಿಗೆ ಮನೆ ನಿರ್ಮಾಣಕ್ಕೆ ತಲಾ 25 ಸಾವಿರ ರೂ. ನೆರವು, ಯಕ್ಷಾಶ್ರಯ ಯೋಜನೆಯಲ್ಲಿ ಮನೆ ನಿರ್ಮಾಣ ಸೇರಿದಂತೆ ಒಟ್ಟು 57.5 ಲಕ್ಷ ರೂ. ನೆರವು ನೀಡಲಾಯಿತು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.