ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ


Team Udayavani, Dec 22, 2020, 1:17 AM IST

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ ಮತ್ತು ಯಕ್ಷಸಿರಿ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಹಿರಿಯ ಯಕ್ಷಗಾನ ಅರ್ಥಧಾರಿ ಮತ್ತು ಪ್ರಸಂಗಕತೃì ಡಿ.ಎಸ್‌. ಶ್ರೀಧರ ಅವರು “ಪಾರ್ತಿಸುಬ್ಬ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅಕಾಡೆಮಿ ಅಧ್ಯಕ್ಷ ಪ್ರೊ| ಎಂ.ಎ. ಹೆಗಡೆ ಅವರು ಮಂಗಳೂರಿನಲ್ಲಿ ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಿ ದರು. “ಪಾರ್ತಿಸುಬ್ಬ’ ಪ್ರಶಸ್ತಿ ಒಂದು ಲಕ್ಷ ರೂ. ನಗದು ಮತ್ತು ಪ್ರಮಾಣಪತ್ರ, ಗೌರವ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು ಮತ್ತು ಪ್ರಮಾಣಪತ್ರ, ಯಕ್ಷ ಸಿರಿ ವಾರ್ಷಿಕ ಪ್ರಶಸ್ತಿಗಳು ತಲಾ 25 ಸಾವಿರ ರೂ. ನಗದು ಮತ್ತು ಪ್ರಮಾಣ ಪತ್ರ ವನ್ನು ಒಳ ಗೊಂಡಿದೆ ಎಂದರು. ಪ್ರಶಸ್ತಿ ಪ್ರದಾನ ಸಮಾರಂಭ ಫೆಬ್ರವರಿ 2ನೇ ಅಥವಾ 3ನೇ ವಾರದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.

ಪುರಸ್ಕೃತರಲ್ಲಿ ಕರಾವಳಿಯ ಯಕ್ಷ ಸಾಧಕರಾದ ಬನ್ನಂಜೆ ಸಂಜೀವ ಸುವರ್ಣ, ತಿಮ್ಮಪ್ಪ ಗುಜರನ್‌ (ಮರಣೋತ್ತರ), ತೀರ್ಥಹಳ್ಳಿ ಗೋಪಾಲ ಆಚಾರ್ಯ, ಆವರ್ಸೆ ಶ್ರೀನಿವಾಸ ಮಡಿವಾಳ, ಬೆಳೂ¤ರು ರಮೇಶ್‌, ಸಂಜಯ ಕುಮಾರ್‌, ಗೋಣಿಬೀಡು, ಸುಬ್ರಹ್ಮಣ್ಯ ಧಾರೇಶ್ವರ, ವಿಟ್ಲ ಶಂಭು ಶರ್ಮ ಸೇರಿದ್ದಾರೆ.

ಗೌರವ ಪ್ರಶಸ್ತಿ ಪುರಸ್ಕೃತರು
ಗೌರವ ಪ್ರಶಸ್ತಿಗೆ ತೆಂಕುತಿಟ್ಟಿನ ಕೆ. ತಿಮ್ಮಪ್ಪ ಗುಜರನ್‌, ಉಡುಪಿಯ ಯಕ್ಷಗಾನ ಕೇಂದ್ರದ ಗುರು ಬಿ. ಸಂಜೀವ ಸುವರ್ಣ, ಪಡುವಲಪಾಯದ ವಿದ್ವಾಂಸ ಡಾ| ವಿಜಯ ನಳಿನಿ ರಮೇಶ್‌, ಮೂಡಲಪಾಯ ಯಕ್ಷಗಾನ ವಿದ್ವಾಂಸ, ಸಂಘಟಕ ಡಾ| ಚಕ್ಕೆರೆ ಶಿವಶಂಕರ್‌, ಮೂಡಲಪಾಯದ ಕಲಾವಿದ ಹಾಗೂ ಸಂಘಟಕ ಬಿ. ಪರಶುರಾಮ್‌ ಆಯ್ಕೆಯಾಗಿ ದ್ದಾರೆ. ತಿಮ್ಮಪ್ಪ ಗುಜರನ್‌ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗುವುದು. ಅವರು ನಿಧನ ಹೊಂದುವ ಹೆಸರು ಆಯ್ಕೆಯಾಗಿತ್ತು ಎಂದು ಪ್ರೊ| ಎಂ.ಎ. ಹೆಗಡೆ ಹೇಳಿದರು.

ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರು
ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಕಲಾವಿದರಾದ ಗೋಪಾಲ ಆಚಾರ್ಯ ತೀರ್ಥಹಳ್ಳಿ, ಆವರ್ಸೆ ಶ್ರೀನಿವಾಸ ಮಡಿವಾಳ, ಬೆಳೂ¤¤ರು ರಮೇಶ್‌, ಸ್ತ್ರೀ ವೇಷಧಾರಿ ಸಂಜಯ್‌ ಕುಮಾರ್‌ ಶೆಟ್ಟಿ, ಪಡುವಲಪಾಯ ಸಂಘಟಕ ಎಂ.ಆರ್‌. ಹೆಗಡೆ ಕಾನಗೋಡ, ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಅರ್ಥ ಧಾರಿ ವಿಟ್ಲ ಶಂಭು ಶರ್ಮ, ಮೂಡ ಲಪಾಯ ಭಾಗ ವತ ಹನುಮಂತರಾಯಪ್ಪ, ಮುಖವೀಣೆ ಕಲಾವಿದ ಎ.ಎಂ. ಮುಳವಾಗಲಪ್ಪ ಆಯ್ಕೆ ಆಗಿದ್ದಾರೆ.

ಅಕಾಡೆಮಿ ಸದಸ್ಯರಾದ ರಾಧಾಕೃಷ್ಣ ಕಲ್ಚಾರ್‌, ಕದ್ರಿ ನವನೀತ ಶೆಟ್ಟಿ, ಸಹ ಸದಸ್ಯದಾಮೋದರ ಶೆಟ್ಟಿ, ರಿಜಿಸ್ಟ್ರಾರ್‌ ಎಸ್‌.ಎಚ್‌. ಶಿವರುದ್ರಪ್ಪ ಅವರು ಉಪಸ್ಥಿತರಿದ್ದರು.

ಪಠ್ಯದಲ್ಲಿ ಯಕ್ಷಗಾನ
ಪ್ರೌಢಶಾಲಾ ಪಠ್ಯದಲ್ಲಿ ಯಕ್ಷಗಾನವನ್ನು ಸೇರಿಸುವ ಪ್ರಯತ್ನ ನಡೆಯುತ್ತಿದೆ. ಈ ವಿಚಾರ ಸದ್ಯ ಪಠ್ಯ ಪುಸ್ತಕ ರಚನೆ ಸಮಿತಿಯ ಮುಂದಿದೆ. ತುಳುವಿನ ಪ್ರಸಂಗಗಳನ್ನು ಪ್ರಕಟಿಸಲು ಅಕಾಡೆಮಿ ಯೋಜನೆ ಹಾಕಿಕೊಂಡಿದೆ. ಅಲ್ಲದೆ ಹಿರಿಯ ಯಕ್ಷಗಾನ ಕಲಾವಿದರ ಜತೆ “ನೆನಪಿನ ಬುತ್ತಿ’ ಕಾರ್ಯಕ್ರಮ ನಡೆಸಲಾಗುವುದು. ಈ ಬಾರಿಯ ಅಕಾಡೆಮಿಯ ಪುಸ್ತಕ ಬಹುಮಾನವನ್ನು ಮುಂದಿನ ಬಾರಿಯ ಬಹುಮಾನದೊಂದಿಗೆ ನೀಡಲಾಗುವುದು. ಕೊರೊನಾ ಹಿನ್ನೆಲೆಯಲ್ಲಿ ಯಕ್ಷಗಾನ ಅಕಾಡೆಮಿಗೂ 5 ಲ.ರೂ. ಕಡಿಮೆ ಅನುದಾನ ದೊರೆತಿದೆ ಎಂದು ಪ್ರೊ| ಎಂ.ಎ. ಹೆಗಡೆ ತಿಳಿಸಿದರು.

ಟಾಪ್ ನ್ಯೂಸ್

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.