ಯಡಿಯೂರಪ್ಪ ಸರಕಾರ ಯಾರನ್ನು ಹಸಿವಿನಿಂದ ಇರಲು ಬಿಡುವುದಿಲ್ಲ: ಸಚಿವ ಸೋಮಣ್ಣ
Team Udayavani, Dec 13, 2020, 4:05 PM IST
ಬೆಳ್ತಂಗಡಿ: ಸಾರಿಗೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿರುವುದು ತಪ್ಪಲ್ಲ, ಆದರೆ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು. ಯಡಿಯೂರಪ್ಪ ಸರಕಾರ ಯಾರನ್ನು ಹಸಿವಿನಿಂದ ಇರಲು ಬಿಡುವುದಿಲ್ಲ ಎಂದು ವಸತಿ ಸಚಿವ ಸೋಮಣ್ಣ ಹೇಳಿಕೆ ನೀಡಿದ್ದಾರೆ.
ಧರ್ಮಸ್ಥಳ ಲಕ್ಷದೀಪೋತ್ಸವ ಸರ್ವಧರ್ಮ ಸಮ್ಮೇಳನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಧರ್ಮಸ್ಥಳ ಭೇಟಿ ನೀಡಿ, ರಾಜ್ಯಾದ್ಯಂತ ಸಾರಿಗೆ ನೌಕರರ ಪ್ರತಿಭಟನೆ ವಿಚಾರವಾಗಿ ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಪ್ರತಿ ತಿಂಗಳ ವೇತನ ಬಿಡುಗಡೆ ಮಾಡುವುದು ಎಷ್ಟು ಕಷ್ಟ ಅಂತ ಎಲ್ಲರಿಗೂ ತಿಳಿದಿದೆ. ಇದು ಹೋರಾಟ ಇವತ್ತಿನದಲ್ಲ. ತುಂಬಾ ವರ್ಷಗಳ ಹೋರಾಟ. ಆದರೆ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಮೂರು ತಿಂಗಳ ಸಂಬಳ ಬಿಡುಗಡೆ ಮಾಡಿದ್ದಾರೆ.
ಎಲ್ಲವನ್ನೂ ಕುಳಿತು ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸಲಾಗುವುದು. ಇಂದು ಸಂಜೆಯ ಒಳಗಡೆ ಸಮಸ್ಯೆ ಇತ್ಯರ್ಥವಾಗುವ ಸಾಧ್ಯತೆ ಇದೆ. ನಾನು ಒಬ್ಬ ಸರಕಾರಿ ನೌಕರನಾಗಿ ದುಡಿದ ಅನುಭವ ಇದೆ. ಹೀಗಾಗಿ ಸಾರಿಗೆ ನೌಕರರು ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ದೇಶ-ವಿದೇಶಗಳಲ್ಲಿ 30,000 ಗಂಟೆ ಉಪನ್ಯಾಸ ಪ್ರವಚನಗೈದ ದಾಖಲೆ: ಬನ್ನಂಜೆ ಸಾಧನೆಯ ಹಾದಿ !
ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಇದಕ್ಕೂ ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಭೇಟಿ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.