ಬಿಸಿ ನೀರಿನ ಬುಗ್ಗೆ ಬೆಂದ್ರ್ ತೀರ್ಥಕ್ಕೂ ತಟ್ಟಿದ ಬರಗಾಲ

ಸಂಪೂರ್ಣ ಒಣಗಿದ ಕೆರೆ; ಪ್ರವಾಸೋದ್ಯಮಕ್ಕೂ ಕುತ್ತು

Team Udayavani, Jun 3, 2019, 6:00 AM IST

z-17

ಈಶ್ವರಮಂಗಲ: ಉಭಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬರಗಾಲ ಹೊಡೆತ ನೀಡಿದೆ. ಇದಕ್ಕೆ ಒಂದು ಉದಾಹರಣೆ ದಕ್ಷಿಣ ಭಾರತದ ಏಕೈಕ ಬಿಸಿನೀರಿನ ತಾಣವಾದ ಇರ್ದೆ ಗ್ರಾಮದ ಬೆಂದ್ರ್ ತೀರ್ಥ. ಬೆಂದ್ರ್ ತೀರ್ಥ ಈ ಬಾರಿ ಸಂಪೂರ್ಣ ಒಣಗಿ ಹೋಗಿದೆ. ನೀರಿಲ್ಲದ ಕಾರಣ ಕೆರೆ ನೋಡಲು ಯಾತ್ರಿಕರು ಬರುತ್ತಿಲ್ಲ.

ಐತಿಹಾಸಿಕ ಸ್ಥಳ
ಸೀರೆ ನದಿಯ ತಟದಲ್ಲಿ ಪ್ರಕೃತಿ ರಮಣೀಯ ವಾದ ಸ್ಥಳದಲ್ಲಿ ಇರುವ ಇದರ ಸೌಂದರ್ಯವನ್ನು ಮಳೆಗಾಲದಲ್ಲಿ ಸವಿದಷ್ಟು ಸಾಲದು. ಅಂತಹ ವಾತಾವರಣ ಇಲ್ಲಿನದ್ದು. ಇಲ್ಲಿ ಬಿಸಿ ನೀರು ಇರುವ ಕಾರಣಕ್ಕೆ ಇದೊಂದು ಪವಿತ್ರ ಹಾಗೂ ಐತಿಹಾಸಿಕ ಸ್ಥಳವಾಗಿ ಪರಿಗಣಿತವಾಗಿದೆ. ಸಲ್ಪಟ್ಟಿದೆ. ವಿಶೇಷ ದಿನಗಳಲ್ಲಿ ಇಲ್ಲಿ ತೀರ್ಥ ಸ್ನಾನವೂ ನಡೆಯುತ್ತದೆ. ಕೆರೆಯ ಪಕ್ಕದಲ್ಲಿ ಯಾವಾಗ ಕೊಳವೆ ಬಾವಿಗಳನ್ನು ತೆಗೆದರೋ ಅಂದಿನಿಂದ ಕೆರೆಯ ಬಿಸಿ ನೀರು ಬರಿದಾಗಿದೆ. ಮಳೆಗಾಲ ಪ್ರಾರಂಭವಾಗಿ ನದಿಯಲ್ಲಿ ನೀರು ತುಂಬುವ ವೇಳೆ ಮತ್ತೆ ಕೊಳ ತುಂಬುತ್ತದೆ. ಮಳೆ ಇರಲಿ, ಚಳಿ ಇರಲಿ ಈ ಕೊಳದ ನೀರು ಸದಾ ಬಿಸಿಯಾಗಿಯೇ ಇರುತ್ತದೆ. ಇದರ ನೀರು ಬಿಸಿಯಾಗಲು ವೈಜ್ಞಾನಿಕ ಕಾರಣವೇ ಇದೆ. ಬಿಸಿ ನೀರು ಇರುವ ಕಾರಣಕ್ಕೆ ಈ ಸ್ಥಳಕ್ಕೆ ತುಳುವಿನಲ್ಲಿ ಬೇಂದ್ರ್ ತೀರ್ಥ ಎಂದು ಕರೆಯುತ್ತಿದ್ದು, ಸ್ಥಳಕ್ಕೆ ಧಾರ್ಮಿಕ ಪಾವಿತ್ರ್ಯವೂ ಇದೆ.

ಇಲ್ಲಿಗೆ ತೆರಳುವ ರಸ್ತೆಯು ಸಂಚಾರಕ್ಕೆ ಅಯೋಗ್ಯವಾಗಿದ್ದು, ಹೊಂಡ-ಗುಂಡಿಗಳಿಂದ ತುಂಬಿರುವ ಕಾರಣ ಯಾತ್ರಿಕರ ಸಂಖ್ಯೆಯೂ ಕಡಿಮೆ ಯಾಗಿದೆ. ಬೇಸಗೆಯಲ್ಲಿ ಯಾತ್ರಿಕರು ಬರುವ ವೇಳೆ ಕೊಳದಲ್ಲಿ ನೀರು ಬತ್ತಿ ಹೋಗಿರುತ್ತದೆ. ಮಳೆಗಾಲದಲ್ಲಿ ನೀರು ಇದ್ದರೂ ರಸ್ತೆ ಸಮರ್ಪಕವಾಗಿಲ್ಲದ ಕಾರಣ ಯಾತ್ರಿಕರು ಬರಲು ಕಷ್ಟವಾಗುತ್ತದೆ. ಕೆಲವೊಂದು ವಿಶೇಷ ದಿನಗಳಲ್ಲಿ ಕೊಳದ ನೀರಿನಲ್ಲಿ ಸ್ನಾನ ಮಾಡಿದರೆ ಚರ್ಮ ಕಾಯಿಲೆ ವಾಸಿಯಾಗುತ್ತವೆ ಎನ್ನುವ ನಂಬಿಕೆ ಇದೆ. ನವ ದಂಪತಿಗಳು ಬಂದು ಪೂಜೆ ಸಲ್ಲಿಸುತ್ತಾರೆ. ವೈಜ್ಞಾನಿಕ ಮತ್ತು ಧಾರ್ಮಿಕ ಕಾರಣಗಳಿಂದ ಪ್ರಸಿದ್ಧಿ ಪಡೆದಿರುವ ಬೆಂದ್ರ್ ತೀರ್ಥವನ್ನು ಅಭಿವೃದ್ಧಿಪಡಿಸಬೇಕಾದ ಜವಾಬ್ದಾರಿ ಜಿಲ್ಲಾಡಳಿತಕ್ಕಿದ್ದು, ಪ್ರವಾಸೋದ್ಯಮ ಇಲಾಖೆಯ ಗಮನಕ್ಕೆ ತರುವ ಮೂಲಕ ಉಳಿಸುವ ಕಾರ್ಯ ಆಗಬೇಕಿದೆ. ಬೆಂದ್ರ್ ತೀರ್ಥ ಪ್ರವಾಸಿ ತಾಣವಾಗಿ ಉಳಿ ಯಲಿಲ್ಲ ಅಥವಾ ನಾವು ಉಳಿಸಲಿಲ್ಲ. ಅಲ್ಲಿನ ಬಿಸಿ ನೀರು ತಂಪಾದಾಗಲೂ ನಾವು ಮಾತನಾಡಲಿಲ್ಲ. ಈಗ ಕೆರೆಯೇ ಬತ್ತಿ ಹೋಗಿದೆ. ಪರಿಸರದಲ್ಲಿರುವ ಮಣ್ಣು ಬಿಸಿಯಾಗಿದೆ. ಆದರೂ ಕಾಳಜಿ ತೋರಿ ಸುತ್ತಿಲ್ಲ ಎಂದು ಪ್ರವಾಸಿಗರು ಬೇಸರ ವ್ಯಕ್ತ ಪಡಿಸುತ್ತಾರೆ.

ಗ್ರಾ.ಪಂ. ನಿರ್ಣಯಕ್ಕೆ ಬೆಲೆಯೇ ಇಲ್ಲ!
ಪ್ರಸಿದ್ಧಿ ಪಡೆದ ಬಿಸಿ ನೀರಿನ ಬುಗ್ಗೆ ಬೇಂದ್ರ್ ತೀರ್ಥವನ್ನು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಗೊಳಿಸಲು ಪಂಚಾ ಯತ್‌ ವತಿಯಿಂದ ಸಂಬಂಧಿ ಸಿದ ಇಲಾಖೆ, ಜನಪ್ರತಿನಿಧಿ ಗಳಿಗೆ ನಿರ್ಣಯ ಕಳಿಸಲಾಗಿತ್ತು. ಆದರೆ ಅಧಿಕಾರಿಗಳು, ಇಲಾಖೆಗಳು ಸ್ಪಂದಿಸದೇ ಇರುವುದು ಈ ಪ್ರದೇಶದ ಅಭಿವೃದ್ಧಿ ಕುಂಠಿತಗೊಳ್ಳಲು ಕಾರಣವಾಗಿದೆ ಎನ್ನಲಾಗುತ್ತಿದೆ.

ಪ್ರವಾಸಿ ಕೇಂದ್ರವಾಗಲಿಲ್ಲ
ಸ್ಥಳವನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡಬೇಕೆಂಬ ಆಗ್ರಹ ಕೇಳುತ್ತಿದ್ದರೂ ಈವರೆಗೂ ಅದು ಕೈಗೂಡಿಲ್ಲ. ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಕೊಳವನ್ನು ದುರಸ್ತಿ ಮಾಡಿ ಸುತ್ತಲೂ ಕಲ್ಲಿನ ಆವರಣವನ್ನು ನಿರ್ಮಿಸಲಾಗಿದೆ. ವಿಶ್ರಾಂತಿ ಕೊಠಡಿ ಮತ್ತು ಬಟ್ಟೆ ಬದಲಿಸುವ ಕೊಠಡಿಗಳನ್ನು ನಿರ್ಮಿಸಲಾಗಿದ್ದರೂ, ಸೂಕ್ತ ನಿರ್ವಹಣೆ ಇಲ್ಲದೆ ಅವು ಉಪಯೋಗ ಶೂನ್ಯವಾಗಿದೆ. ಕೆಲವೊಂದು ಕೋಣೆಗಳು ಮುರಿದು ಬಿದ್ದು ವರ್ಷಗಳೇ ಕಳೆದಿದೆ. ಅಧಿಕಾರಿಗಳು ಇಲ್ಲಿಗೆ ಭೇಟಿ ನೀಡುವುದೇ ಇಲ್ಲ.

ಗ್ರಾ.ಪಂ.ನಿಂದ ಪೂರ್ಣ ಸಹಕಾರ
ಬೆಂದ್ರತೀರ್ಥ ಅಭಿವೃದ್ಧಿಗೆ ಸಂಬಂಧಿಸಿ ಮುಂದಿನ ಸಾಮಾನ್ಯ ಸಭೆಯಲ್ಲಿ ಪ್ರಸ್ತಾವ ಮಾಡಲಾಗುವುದು. ರಸ್ತೆ ಅಭಿವೃದ್ಧಿಗೆ ಅನುದಾನ ಇರಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರವಾಸಿ ತಾಣವಾಗಿ ಮಾಡಲು ಇಲಾಖೆಗೆ ಪಂಚಾಯತ್‌ನಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು.
– ಶೈಲಜಾ, ಪಿಡಿಒ, ಬೆಟ್ಟಂಪಾಡಿ ಗ್ರಾ.ಪಂ.

ಟಾಪ್ ನ್ಯೂಸ್

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ

1

Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.