
ಪುತ್ತೂರಿನಿಂದ 1,100 ಮಂದಿ ಊರಿಗೆ
ಇಂದು ಬಿಹಾರಕ್ಕೆ ವಿಶೇಷ ರೈಲು; ಸರ್ವ ಸಿದ್ಧತೆ
Team Udayavani, May 12, 2020, 5:33 AM IST

ಪುತ್ತೂರು: ಪುತ್ತೂರು ಉಪವಿಭಾಗ ವ್ಯಾಪ್ತಿಯ ತಾಲೂಕುಗಳಲ್ಲಿರುವ 1,100 ಮಂದಿ ವಲಸೆ ಕಾರ್ಮಿಕರನ್ನು ಮೇ 12ರಂದು ವಿಶೇಷ ರೈಲಿನ ಮೂಲಕ ಪುತ್ತೂರು ರೈಲು ನಿಲ್ದಾಣದಿಂದ ಬಿಹಾರಕ್ಕೆ ಕಳುಹಿಸಿಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ರವಿವಾರ ಸಂಜೆ ದ.ಕ. ಜಿಲ್ಲಾ ಡಿಶನಲ್ ಎಸ್ಪಿ ಡಾ| ವಿಕ್ರಂ ಆಮ್ಟೆ ಪುತ್ತೂರು ರೈಲ್ವೇ ನಿಲ್ದಾಣ ಪರಿಶೀಲಿಸಿದ ಬಳಿಕ ಡಿವೈಎಸ್ಪಿ ದಿನಕರ್ ಶೆಟ್ಟಿ, ಸಹಾಯಕ ಕಮಿಷನರ್ ಡಾ| ಯತೀಶ್ ಉಳ್ಳಾಲ್ ಜತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ವ್ಯವಸ್ಥೆಯ ಕುರಿತು ಚರ್ಚೆ ನಡೆಸಿದರು.
ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ, ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಕುಸುಮಾಧರ್, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಠಾಣೆಗಳ ಇನ್‌ಸ್ಪೆಕ್ಟರ್‌ಗಳು ಪಾಲ್ಗೊಂಡಿದ್ದರು. ರೈಲು ನಿಲ್ದಾಣದಲ್ಲಿ ಜನಜಂಗುಳಿಯಾಗದಂತೆ, ಸೂಕ್ತ ಬಂದೋಬಸ್ತ್, ಟಿಕೆಟ್ ಪರಿಶೀಲನೆ, ಮೆಡಿಕಲ್ ಚೆಕ್‌ಅಪ್‌ಗೆ ವ್ಯವಸ್ಥೆ ಮಾಡಲಾಗಿದೆ.
ಗದ್ದೆಯಲ್ಲಿ ತಪಾಸಣೆ
ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ತಾಲೂಕುಗಳಿಂದ ಸುಮಾರು 1,100 ಮಂದಿ ಬಿಹಾರದ ವಲಸೆ ಕಾರ್ಮಿಕರನ್ನು ತವರಿಗೆ ಕಳುಹಿಸುವ ನಿಟ್ಟಿನಲ್ಲಿ ಆಯಾ ತಾಲೂಕುಗಳಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕರೆದುಕೊಂಡು ಬಂದು ಮಧ್ಯಾಹ್ನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ, ಬಳಿಕ ರೈಲು ನಿಲ್ದಾಣಕ್ಕೆ ಕರೆದುಕೊಂಡು ಹೋಗಲಾಗುತ್ತದೆ. ಅಲ್ಲಿ ಅವರ ಆಧಾರ್ ಕಾರ್ಡ್ ಪರಿಶೀಲಿಸಿ ಊರಿಗೆ ಕಳುಹಿಸಲಾಗುತ್ತದೆ. ಪ್ರಯಾಣಿಕರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ವಾರಂಟೈನ್ ವ್ಯವಸ್ಥೆ
ಹೊರ ರಾಜ್ಯ ಮತ್ತು ವಿದೇಶದಿಂದ ಬರುವವರಿಗೆ ಪುತ್ತೂರಿನಲ್ಲಿ ಕ್ವಾರಂಟೈನ್ ಮಾಡಲು ನಗರ ವ್ಯಾಪ್ತಿಯಲ್ಲಿ 7 ಬಿಸಿಎಂ ಮತ್ತು 4 ಸಮಾಜ ಕಲ್ಯಾಣ ಹಾಸ್ಟೆಲ್‌ಗಳ ವ್ಯವಸ್ಥೆ ಮಾಡಲಾಗಿದೆ. 22 ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾ.ಪಂ.ಗೆ ಒಂದರಂತೆ ಉತ್ತಮ ಮೂಲ ಸೌಕರ್ಯ ಇರುವ 22 ಶಾಲೆಗಳನ್ನು ಗುರುತಿಸಲಾಗಿದೆ. ಪುತ್ತೂರು ನಗರ ವ್ಯಾಪ್ತಿಯ ಹಾಸ್ಟೇಲ್‌ನಲ್ಲಿ 300 ಮಂದಿಯನ್ನು ಕ್ವಾರಂಟೈನ್ ಮಾಡಲು ಅವಕಾಶವಿದ್ದು, ಭರ್ತಿ ಆದ ಬಳಿಕ ಗ್ರಾಮ ಮಟ್ಟದಲ್ಲಿ ಗುರುತಿಸಿದ ಶಾಲೆಗಳಿಗೆ ಕಳುಹಿಸಲಾಗುತ್ತದೆ. ಊಟದ ಜತೆಗೆ ಮೂಲ ಸೌಕರ್ಯ ಇರುತ್ತದೆ. ಪ್ರತಿ ಕ್ವಾರಂಟೈನ್ ಸಂಸ್ಥೆಗೂ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತದೆ.
-ರಮೇಶ್ ಬಾಬು
ತಹಶೀಲ್ದಾರ್, ಪುತ್ತೂರು
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.