ಮನೆ-ಮನೆಗೂ ಬರಲಿದೆ ಗಂಗೆ
375 ಕೋ. ರೂ. ವೆಚ್ಚದ ಬೃಹತ್ ಯೋಜನೆ
Team Udayavani, May 10, 2022, 9:16 AM IST
ಪುತ್ತೂರು: ಗ್ರಾಮೀಣ ಪ್ರದೇಶ ದಲ್ಲಿ ಕುಡಿಯವ ನೀರಿನ ಸಮಸ್ಯೆ ಪರಿಹಾರಕ್ಕೆ ಶಾಶ್ವತ ಕ್ರಮ ಅನುಷ್ಠಾನಕ್ಕೆ ರೂಪಿಸಿರುವ 375 ಕೋ.ರೂ.ವೆಚ್ಚದ ಪ್ರಸ್ತಾವನೆಯು ಟೆಂಡರ್ ಹಂತಕ್ಕೆ ತಲುಪಿದ್ದು ಎಲ್ಲವು ಅಂದುಕೊಂಡಂತೆ ಸಾಗಿದರೆ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರತೀ ಮನೆಗೂ ಗಂಗೆ ಹರಿದು ಬರಲಿದ್ದಾಳೆ.
ಪ್ರತೀ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸಲು ರೂಪಿಸಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಈ ಕಾಮಗಾರಿ ಅನುಷ್ಠಾನಗೊಳ್ಳಲಿದ್ದು ಕರ್ನಾಟಕ ಜಲಮಂಡಳಿ ಇದರ ಜವಾಬ್ದಾರಿ ವಹಿಸಲಿದೆ. ಕೇಂದ್ರ ಸರಕಾರದ ಅನುದಾನದಲ್ಲಿ ಇದು ಕಾರ್ಯಗತಗೊಳ್ಳಲಿದೆ.
ಏನಿದು ಯೋಜನೆ?
ನಗರದಲ್ಲಿ ಶಾಶ್ವತ ಕುಡಿಯುವ ನೀರಿನ ಪೂರೈಕೆಗಾಗಿ ಅನುಷ್ಠಾನದ ಹಂತದಲ್ಲಿ ಇರುವ ಜಲಸಿರಿ ಯೋಜನೆಯ ಮಾದರಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರತೀ ಮನೆಗೆ ಕುಡಿಯುವ ನೀರು ತಲುಪಬೇಕು ಎಂಬ ನಿಟ್ಟಿನಲ್ಲಿ ಶಾಸಕ ಸಂಜೀವ ಮಠಂದೂರು ಅವರು 375 ಕೋ.ರೂ. ಕ್ರಿಯಾ ಯೋಜನೆ ತಯಾರಿಸಿ ನೀರಾವರಿ ಇಲಾಖೆ ಮೂಲಕ ಯೋಜನೆ ಜಾರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಕ್ರಿಯಾಯೋಜನೆ ಪ್ರಕಾರ ವಿಧಾನಸಭಾ ಕ್ಷೇತ್ರದ 31 ಗ್ರಾಮ ಪಂಚಾಯತ್, 1 ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರು ಒದಗಿಸುವ ಬೃಹತ್ ಯೋಜನೆ ಇದಾಗಿದೆ. ಯೋಜನೆಯ ಡಿಪಿಆರ್‌ಗೆ ಸರಕಾರ ಒಪ್ಪಿಗೆ ನೀಡಿದ್ದು ಟೆಂಡರ್ ಹಂತದಲ್ಲಿದೆ.
ನೇತ್ರಾವತಿ ನದಿಯಿಂದ ನೀರು ಸಂಗ್ರಹಿಸಿ ಪೂರೈಕೆ
ಬಂಟ್ವಾಳ ತಾಲೂಕಿನಲ್ಲಿ ಹರಿಯುತ್ತಿರುವ ನೇತ್ರಾವತಿ ನದಿಗೆ ಅಳ ವಡಿಸಿರುವ ಎಎಂಆರ್ ಡ್ಯಾಂ ನಿಂದ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ನೀರು ಪೂರೈ ಸುವುದು ಈ ಯೋಜನೆಯ ಮೊದಲ ಹೆಜ್ಜೆ. ಜಾಕ್‌ವೆಲ್‌ನಲ್ಲಿ ನೀರು ಸಂಗ್ರಹಿಸಿ ಶುದ್ಧೀಕರಿಸಿ ವಿಟ್ಲ- ಅಳಿಕೆ ಮೂಲಕ ಪೈಪ್ ಲೈನ್ ಅಳವಡಿಸಿ ನೀರು ಹರಿಸ ಲಾಗು ತ್ತದೆ. ಪುಣಚ, ಬಲಾ°ಡಿನ ಎತ್ತರದ ಪ್ರದೇಶ ದಲ್ಲಿ 15 ಲಕ್ಷ ಲೀ. ಮಿಕ್ಕಿ ಸಾಮರ್ಥ್ಯದ ಟ್ಯಾಂಕ್ ನಿರ್ಮಿಸಿ ಅಲ್ಲಿಂದ ಪ್ರತೀ ಗ್ರಾ.ಪಂ.ಗೆ ಪೂರೈಸಲಾಗುತ್ತದೆ.
ನೀರಿನ ಕೊರತೆ ಉಂಟಾಗದು
ನಗರದಲ್ಲಿ ಜಲಸಿರಿ ಇರುವ ಹಾಗೆ ಗ್ರಾಮಾಂತರ ಪ್ರದೇಶದಲ್ಲಿ ಪ್ರತೀ ಮನೆಗೆ ನೀರು ಹರಿಸಲು 375 ಕೋ.ರೂ.ಪ್ರಸ್ತಾವನೆ ಟೆಂಡರ್ ಹಂತದಲ್ಲಿದೆ. ಡ್ಯಾಂ ಮೂಲಕ ನೀರು ಸಂಗ್ರಹಿಸಿ ಜೆಜೆಎಂ ಪೈಪ್‌ಲೈನ್ ಮೂಲಕ ಮನೆ ಮನೆಗೆ ನೀರು ಹರಿಸಲಾಗುತ್ತದೆ. ಇದು ಅನುಷ್ಠಾನ ಆದಾಗ ವಿಧಾನಸಭಾ ಕ್ಷೇತ್ರದ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದು. -ಸಂಜೀವ ಮಠಂದೂರು, ಶಾಸಕರು, ಪುತ್ತೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ
Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ
Sullia; ಆರೋಪಿ ತಾಯಿಯ ಅಪರಾಧ ಸಾಬೀತು; ಜ. 4ರಂದು ಶಿಕ್ಷೆ ಪ್ರಮಾಣ ಘೋಷಣೆ
Uppinangady: ತ್ಯಾಜ್ಯ ಸರಿಯಾಗಿ ವಿಂಗಡಿಸಿ ಕೊಡದಿದ್ದರೆ ಕ್ರಮಕ್ಕೆ ಸದಸ್ಯರ ಸಲಹೆ
Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.