7ನೇ ತರಗತಿ ಪಬ್ಲಿಕ್‌ ಪರೀಕ್ಷೆ ಇದ್ದರೂ ಉತ್ತೀರ್ಣ-ಅನುತ್ತೀರ್ಣ ಇಲ್ಲ

ಬಂಟ್ವಾಳದಲ್ಲಿ "ಉದಯವಾಣಿ' ಜತೆ ಶಿಕ್ಷಣ ಸಚಿವರ ಮಾತುಕತೆ

Team Udayavani, Dec 18, 2019, 4:22 AM IST

cv-40

ಬಂಟ್ವಾಳ: ಪ್ರಸಕ್ತ ಸಾಲಿನಲ್ಲಿ 7ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಿದರೂ ಯಾವುದೇ ವಿದ್ಯಾರ್ಥಿಯನ್ನು ಈ ವರ್ಷ ಫೇಲ್‌ ಮಾಡುವುದಿಲ್ಲ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಅವರು ಪೋಷಕರಿಗೆ ಭರವಸೆ ನೀಡಿದ್ದಾರೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಶಿಕ್ಷಣ ಸಚಿವರು ಬಂಟ್ವಾಳ ನಿರೀಕ್ಷಣ ಮಂದಿರದಲ್ಲಿ “ಉದಯವಾಣಿ’ ಜತೆ ಮಾತನಾಡಿದರು. ಇನ್ನುಳಿದ ಕಡಿಮೆ ಅವಧಿಯಲ್ಲಿ ಪಬ್ಲಿಕ್‌ ಪರೀಕ್ಷೆಗೆ ಸಿದ್ಧತೆ ನಡೆಸಲು ಸಾಧ್ಯವೇ, ನಮ್ಮ ಮಕ್ಕಳಲ್ಲಿ ಅದನ್ನು ಎದುರಿಸುವಷ್ಟು ಸಾಮರ್ಥ್ಯ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಇಲ್ಲಿ ಮಕ್ಕಳನ್ನು ಪಾಸು-ಫೇಲ್‌ ಮಾಡುವ ಬದಲು ಅವರಿಗೆ ಪಬ್ಲಿಕ್‌ ಪರೀಕ್ಷೆ ಎದುರಿಸುವ ಅನುಭವ ನೀಡುವ ಉದ್ದೇಶ ಇದೆ. ಹೀಗಾಗಿ ಸಿದ್ಧತೆ, ಸಾಮರ್ಥ್ಯದ ವಿಚಾರ ಬರುವುದಿಲ್ಲ ಎಂದರು.

ಮಕ್ಕಳ ಅನುಭವಕ್ಕಾಗಿ ಪರೀಕ್ಷೆ
ಪರೀಕ್ಷೆ ಅಂದರೆ ಹೇಗಿರುತ್ತದೆ, ಪರೀಕ್ಷಾ ಕೊಠಡಿಯ ವಾತಾವರಣ ಹೇಗಿರುತ್ತದೆ ಎಂಬುದು ಮಕ್ಕಳ ಅನುಭವಕ್ಕೆ ಬರಬೇಕು ಎಂಬ ಉದ್ದೇಶದಿಂದ ಈ ಯೋಚನೆ ಮಾಡಲಾಗಿದೆ. ಎಸೆಸೆಲ್ಸಿಯಂತಹ ಪ್ರಮುಖ ಹಂತದಲ್ಲಿ ಅವರು ಗಲಿಬಿಲಿಗೊಳ್ಳದಂತೆ ಅವರಿಗೆ ಪಬ್ಲಿಕ್‌ ಪರೀಕ್ಷೆ ಎದುರಿಸುವ ಅನುಭವ ಇರಬೇಕು ಎನ್ನುವುದು ಮಾತ್ರ ನಮ್ಮ ಉದ್ದೇಶ ಎಂದರು. ಆದರೆ ಅದಕ್ಕೂ ಒಂದಷ್ಟು ಮಂದಿ ತಕರಾರು ಮಾಡಿದ್ದಾರೆ. ಅವರ ಜತೆ ಸಾಕಷ್ಟು ಚರ್ಚೆ ನಡೆಸಿ, ಅವರ ಮನವೊಲಿಸುವ ಕಾರ್ಯವನ್ನೂ ಮಾಡಿದ್ದೇವೆ. ಇನ್ನು 3 ದಿನಗಳಲ್ಲಿ ಪಬ್ಲಿಕ್‌ ಪರೀಕ್ಷೆಯ ಕುರಿತು ಸ್ಪಷ್ಟ ತೀರ್ಮಾನವನ್ನು ಕೈಗೊಳ್ಳಲಿದ್ದೇವೆ. ಪಬ್ಲಿಕ್‌ ಪರೀಕ್ಷೆಯನ್ನು ನಡೆಸುವ ತೀರ್ಮಾನಕ್ಕೆ ಬಂದರೂ ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ ಎಂದರು.

ಚುನಾವಣಾಧಿಕಾರಿಗೆ ಪತ್ರ
ಶಾಲಾ ಶಿಕ್ಷಕರಿಗೆ ಚುನಾವಣೆ- ತರಬೇತಿಗಳಿಂದ ಪಾಠಕ್ಕೆ ತೊಂದರೆ ಯಾಗುತ್ತಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿಕ್ಷಕರನ್ನು ಚುನಾವಣ ಕರ್ತವ್ಯದಿಂದ ಮುಕ್ತಿ ಗೊಳಿಸಬೇಕು ಎಂದು ತಾನು ಈಗಾಗಲೇ ಚುನಾವಣ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಉತ್ತರ ಬರಬೇಕಿದೆ. ಶಿಕ್ಷಕರ ಮೇಲಿನ ಇತರ ಹೊರೆಗಳನ್ನೂ ಕಡಿಮೆ ಮಾಡುವ ಕುರಿತಾಗಿಯೂ ಯೋಚನೆ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಮತ್ತೆ ಮತ್ತೆ ತರಬೇತಿ ಇಲ್ಲ ಶಿಕ್ಷಕರಿಗೆ ಏನೇ ತರಬೇತಿ ನೀಡುವುದಾದರೂ ವಿದ್ಯಾರ್ಥಿಗಳ ಪಾಠ, ಪರೀಕ್ಷೆಗಳಿಗೆ ತೊಂದರೆಯಾಗದ ರೀತಿಯಲ್ಲಿ ಡಿಸೆಂಬರ್‌ ಒಳಗೆ ಮುಗಿಸುವಂತೆ ತಿಳಿಸಲಾಗಿದೆ. ಜತೆಗೆ ಮತ್ತೆ ಮತ್ತೆ ತರಬೇತಿ, ಮೀಟಿಂಗ್‌ಗಳನ್ನು ಕರೆಯಬಾರದು ಎಂಬ ಸೂಚನೆಯನ್ನೂ ನೀಡಿದ್ದೇನೆ. ಶಿಕ್ಷಕರು ಹೆಚ್ಚು ಹೆಚ್ಚು ಶಾಲೆಗಳಲ್ಲಿ ನಿಲ್ಲಬೇಕು, ತರಬೇತಿಗಳನ್ನು ಅವರ ವಿರಾಮದ ಸಮಯದಲ್ಲಿ ನಡೆಸಬೇಕು. ಡಿಸೆಂಬರ್‌ ಬಳಿಕ ಯಾವುದೇ ತರಬೇತಿ ಹಮ್ಮಿಕೊಳ್ಳಬಾರದು, ಆ ಬಳಿಕದ ಶಾಲಾವಧಿಯನ್ನು ಪೂರ್ತಿಯಾಗಿ ಶೈಕ್ಷಣಿಕ ಚುಟುವಟಿಕೆಗಳಿಗೆ ನೀಡಬೇಕು ಎಂಬ ನಿರ್ದೇಶನವನ್ನೂ ನೀಡಿದ್ದೇನೆ ಎಂದು ಶಿಕ್ಷಣ ಸಚಿವರು “ಉದಯವಾಣಿ’ ಜತೆ ಅಭಿಪ್ರಾಯ ಹಂಚಿಕೊಂಡರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.