Belthangady ಮಕ್ಕಳ ಜತೆ ಆಟವಾಡುತ್ತಿದ್ದ ಬಾಲಕ ಕಾಲು ಜಾರಿ ಬಾವಿಗೆ ಬಿದ್ದು ಸಾವು
Team Udayavani, Jan 15, 2024, 11:54 PM IST
ಬೆಳ್ತಂಗಡಿ: ಇಲ್ಲಿಯ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಮಕ್ಕಳ ಜತೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಜ. 15ರಂದು ಸಂಜೆ ನಡೆದಿದೆ.
ಪಣಕಜೆ ನಿವಾಸಿ ಮಹಮ್ಮದ ಹನೀಫ್ ಅವರ ದ್ವಿತೀಯ ಪುತ್ರ ಮಹಮ್ಮದ್ ಅನಾನ್ (7) ಮೃತಪಟ್ಟ ಬಾಲಕ. ಸೋಮವಾರ ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯ ಮಕ್ಕಳ ಜತೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ.
ಕಟ್ಟೆ ಇಲ್ಲದ ಬಾವಿಯ ಬಳಿ ಮಕ್ಕಳು ಆಟವಾಡುತ್ತಿದ್ದಾಗ ಬಾಲಕ ಅನಾನ್ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದನೆನ್ನಲಾಗಿದೆ.
ಕೂಡಲೇ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರೂ, ಆದಾಗಲೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈತ ಸ್ಥಳೀಯ ಶಾಲೆಯ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪುಂಜಾಲಕಟ್ಟೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.