Belthangady: ಆಟೋ ರಿಕ್ಷಾಕ್ಕೆ ಕಾರು ಢಿಕ್ಕಿ
Team Udayavani, Nov 9, 2024, 7:53 PM IST
ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಕಾರು ಮತ್ತು ಆಟೋರಿಕ್ಷಾ ಮುಖಾಮುಖೀ ಢಿಕ್ಕಿಯಾದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ತೆರಳುತ್ತಿದ್ದ ದಾವಣಗೆರೆ ಮೂಲದ ಕಾರು ಹಾಗೂ ಉಜಿರೆಯಿಂದ ಮುಂಡಾಜೆ ಕಡೆ ತೆರಳುತ್ತಿದ್ದ ರಿಕ್ಷಾ ಪರಸ್ಪರ ಢಿಕ್ಕಿ ಹೊಡೆದು ಎರಡು ವಾಹನಗಳು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿವೆ.
ಘಟನೆಯಲ್ಲಿ ರಿಕ್ಷಾ ಚಾಲಕ ದಿಡುಪೆಯ ಸತೀಶ್ (39) ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಅಪಘಾತ ಸ್ಥಳದ ವ್ಯಾಪ್ತಿಯಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಪ್ರದೇಶದಲ್ಲಿ ರಸ್ತೆಯ ಒಂದು ಬದಿಗೆ ಮಾತ್ರ ಡಾಂಬರೀಕರಣ ನಡೆದಿದ್ದು ಅದು ಅಲ್ಲಲ್ಲಿ ಎದ್ದು ಹೋಗಿ ಸಾಕಷ್ಟು ಹೊಂಡಗಳು ನಿರ್ಮಾಣವಾಗಿವೆ. ಇನ್ನೊಂದು ಬದಿಗೆ ಡಾಂಬರೀಕರಣ ನಡೆಸುವ ತಯಾರಿಗಳು ಆಗುತ್ತಿದ್ದು ಆ ಬದಿಯ ರಸ್ತೆಯಲ್ಲಿ ವಾಹನ ಸಂಚಾರ ಇರುವುದಿಲ್ಲ. ಈ ಕಾರಣದಿಂದ ರಸ್ತೆಯು ತೀರಾ ಅಗಲ ಕಿರಿದಾಗಿದ್ದು ಆಗಾಗ ಅಪಘಾತಗಳು ಸಂಭವಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.