Belthangady ರಸ್ತೆಗೆ ಬಿದ್ದ ಮರ; ವಾಹನಗಳಿಗೆ ಹಾನಿ
Team Udayavani, Jun 25, 2024, 12:57 AM IST
ಬೆಳ್ತಂಗಡಿ: ಉಜಿರೆ ಬಸ್ ನಿಲ್ದಾಣದಿಂದ ಅನತಿ ದೂರದ ಬೆಳ್ತಂಗಡಿ ರಸ್ತೆಯಲ್ಲಿ ಸೋಮವಾರ ಮರವೊಂದು ಬುಡ ಸಮೇತ ಹೆದ್ದಾರಿಗೆ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದ್ದು, ಆಟೋ ಸಹಿತ ಇತರ ಹಲವು ವಾಹನ ಜಖಂಗೊಂಡಿದೆ.
ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ ಮರ ಬಿದ್ದಿದ್ದು, ಚಾಲಕ ಉಜಿರೆ ಹಳೆಪೇಟೆಯ ರತ್ನಾಕರ (50) ಹಾಗೂ ಪ್ರಯಾಣಿಕ ಹಳೆಪೇಟೆಯ ಸಾಂತಪ್ಪ (47) ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎರಡು ಕಾರುಗಳಿಗೂ ಹಾನಿಯಾಗಿದೆ.ಘಟನೆಯಿಂದ ಸುಮಾರು ಒಂದು ತಾಸು ಸಂಚಾರ ವ್ಯತ್ಯಯವಾಗಿದ್ದು, ಇಕ್ಕೆಲಗಳಲ್ಲಿ ಮೂರು ಕಿ.ಮೀ.ಗಿಂತ ಉದ್ದದ ವಾಹನಗಳ ಸಾಲು ಕಂಡು ಬಂತು.
ಉಜಿರೆ ಪ್ರದೇಶದಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಅಲ್ಲಲ್ಲಿ ಯಂತ್ರಗಳಿಂದ ಅಗೆದ ಕಾರಣ ಮರಗಳ ಬುಡ ಸಡಿಲಗೊಂಡಿದೆ. ಚಾರ್ಮಾಡಿಯಿಂದ ಉಜಿರೆ ತನಕ ಇನ್ನೂ ಇಂಥ ಸಾಕಷ್ಟು ಅಪಾಯಕಾರಿ ಮರಗಳಿವೆ.
ಅರಣ್ಯ ಇಲಾಖೆ ವಿರುದ್ಧ
ಕ್ರಮಕ್ಕೆ ಆಗ್ರಹ
ಹೆದ್ದಾರಿ ಕಾಮಗಾರಿ ನಡೆದ ಸ್ಥಳಗಳಲ್ಲಿ ಮರಗಳ ಬುಡದವರೆಗೂ ಮಣ್ಣು ಅಗೆಯಲಾಗಿದ್ದು, ಮರಗಳು ದಿನದಿಂದ ದಿನಕ್ಕೆ ರಸ್ತೆಗೆ ಬಾಗುತ್ತಿವೆ. ರಸ್ತೆ ಬದಿಗಳಲ್ಲಿ ಅನೇಕ ಅಪಾಯಕಾರಿ ಮರಗಳಿವೆ. ಆದರೆ ಅರಣ್ಯ ಇಲಾಖೆ ಮಳೆಗಾಲಕ್ಕೂ ಮುನ್ನ ಗೆಲ್ಲು ತೆರವು ನಡೆಸುವುದಿಲ್ಲ. ಇದರಿಂದ ವಾಹನಗಳ ಮೇಲೆ ಬಿದ್ದು ಅಮಾಯಕರ ಜೀವಹಾನಿ ಸಂಭವಿಸುತ್ತದೆ. ಉಜಿರೆಯಲ್ಲಿ ಕೆಲವು ವರ್ಷಗಳ ಹಿಂದೆ ಇಬ್ಬರು ಮೃತಪಟ್ಟಿದ್ದರು. ಸಾರ್ವಜನಿಕರ ಜೀವದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಸಾಧಾರಣ ಮಳೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಹಗಲು ವೇಳೆಯಲ್ಲಿ ಸಾಧಾರಣ ಮಳೆಯಾಗಿದೆ. ಮುಂಜಾನೆ ವೇಳೆ ಸ್ವಲ್ಪ ಮಳೆಯಾಗಿದ್ದು, ಬಳಿಕ ಮೋಡ- ಬಿಸಿಲಿನ ವಾತಾವರಣದೊಂದಿಗೆ ಬಿಟ್ಟು ಬಿಟ್ಟು ಒಂದೆರಡು ಬಾರಿ ಮಳೆಯಾಗಿದೆ.
ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಪುತ್ತೂರು, ಬಂಟ್ವಾಳ ಭಾಗದಲ್ಲೂ ಮಳೆ ಸಾಧಾರಣ ಮಳೆಯಾಗಿದೆ. ಆಗಾಗ್ಗೆ ದಟ್ಟ ಮೋಡ ಕವಿದು ಮಳೆ ಸುರಿದಿದೆ. ಜತೆಗೆ ಜೋರಾದ ಗಾಳಿಯೂ ಇತ್ತು. ಕೆಲವು ಕಡೆಗಳಲ್ಲಿ ಮರ, ಕೊಂಬೆಗಳು ಮುರಿದು ಬಿದ್ದಿದೆ.
ಆರೆಂಜ್ ಅಲರ್ಟ್
ಕರಾವಳಿಗೆ ಮಂಗಳವಾರ ಮತ್ತು ಬುಧವಾರ ಆರೆಂಜ್ ಅಲರ್ಟ್ ಇದೆ. ಗಾಳಿಯೊಂದಿಗೆ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಮುದ್ರದಿಂದ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 30.1 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 22.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಆಟೋ ಚಾಲಕರಿಂದ ಪ್ರತಿಭಟನೆ
ಮರ ತೆರವುಗೊಂಡ ಬಳಿಕ ಅಪಾಯಕಾರಿ ಮರ, ಗೆಲ್ಲುಗಳನ್ನು ತೆರವುಗೊಳಿಸದ ಬಗ್ಗೆ ಹಾಗೂ ಹೆದ್ದಾರಿ ರಸ್ತೆ ಕಾಮಗಾರಿಯ ಅವ್ಯವಸ್ಥೆ ಕುರಿತು ರಿûಾ ಚಾಲಕರು ಸಹಿತ ಸ್ಥಳೀಯರು ಪ್ರತಿಭಟಿಸಿದರು.
ಉಡುಪಿಯಲ್ಲಿ
ಸಾಧಾರಣ ಮಳೆ
ಉಡುಪಿ: ಜಿಲ್ಲೆಯಲ್ಲಿ ಸೋಮವಾರ ಹಲವೆಡೆ ಸಾಧಾರಣ ಮಳೆಯಾಗಿದೆ. ಮಲ್ಪೆ, ಉಡುಪಿ, ಮಣಿಪಾಲ, ಕಾಪು, ಹಿರಿಯಡಕ, ಬ್ರಹ್ಮಾವರ ಸುತ್ತಮುತ್ತ ಬಿಸಿಲು-ಮೋಡ ಕವಿದ ವಾತಾವರಣದ ನಡುವೆ ಕೆಲಕಾಲ ಬಿಟ್ಟುಬಿಟ್ಟು ಮಳೆ ಸುರಿದಿದೆ. ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ 33.5 ಮಿ. ಮೀ. ಸರಾಸರಿ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.