ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Team Udayavani, Nov 22, 2024, 10:22 AM IST
ಬೆಳ್ತಂಗಡಿ: ಯುವಕನೊಬ್ಬ ತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಸೇರಿ ಆತನನ್ನು ತಡೆದು ಎರಡು ಕೈಗಳನ್ನು ಲಾಕ್ ಮಾಡಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋವನ್ನು ಸಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ.22ರ ಶುಕ್ರವಾರ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಈತನ ವಿಡಿಯೋ ವೈರಲ್ ಆಗುತ್ತಲೇ, ತನ್ನ ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದಾರೆ. ಇದರಿಂದ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.
ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಹರಿದ ರೀತಿಯಲ್ಲಿತ್ತು. ಅದನ್ನು ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಮಾರುಕಟ್ಟೆಯಲ್ಲಿದ್ದ ಪಡ್ಡೆ ಯುವಕರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಹಿಂದಕ್ಕೆ ಹಿಡಿದು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜತೆಗೆ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದರು.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬೀರ್, ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಸಲೀಂ ಎಂಬವರು ಸೇರಿ ಈ ದುಷ್ಕ್ರತ್ಯ ನಡೆಸಿದ್ದಾರೆ ಎನ್ನಲಾಗಿದೆ.
ವಿಡಿಯೋ ಮಾಡಿ ಟ್ರೋಲ್ ಮಾಡಿದರಿಂದ ಮಾನಸಿಕವಾಗಿ ನೊಂದ ಶಾಹಿಲ್ ನ.21 ರಂದು ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಮನೆಯವರು ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ.
ಈ ಘಟನೆ ಬಗ್ಗೆ ಸಾರ್ವಜನಿಕರು ಈ ಮೂವರು ಪುಂಡರ ವಿರುದ್ಧ ಕಠಿನ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.