Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Team Udayavani, May 1, 2024, 12:19 AM IST
ಸುಳ್ಯ: ಮರ ಕಡಿಯುವ ಸಂದರ್ಭದಲ್ಲಿ ಮರದ ಕೊಂಬೆಯ ನಡುವೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯದ ಕುರುಂಜಿ ಗುಡ್ಡೆಯಲ್ಲಿ ಮಂಗಳವಾರ ಸಂಭವಿಸಿದೆ.
ಕೇರ್ಪಳದ ಚಿನ್ನಪ್ಪ ನಾಯ್ಕ ಮೃತಪಟ್ಟವರು. ಸುಳ್ಯದ ಕುರುಂಜಿ ಗುಡ್ಡೆಯಲ್ಲಿ ಅವರು ಮರವೊಂದನ್ನು ಕಡಿಯುತ್ತಿದ್ದ ವೇಳೆ ಮರದ ಬುಡ ಹಿಂದಕ್ಕೆ ಬಂದಿದ್ದು, ಈ ವೇಳೆ ಅಲ್ಲೇ ಇದ್ದ ಚಿನ್ನಪ್ಪ ಅವರು ಮರದ ಬುಡ ಮತ್ತು ಇನ್ನೊಂದು ಮರದ ನಡುವೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೈವಸ್ಥಾನದಿಂದ ಘಂಟೆ ಕಳವು
ಸುಳ್ಯ: ದುಗ್ಗಲಡ್ಕದ ಶ್ರೀ ದುಗ್ಗಲಾಯ ದೇವಸ್ಥಾನದ ಎದುರು ಅಳವಡಿಸಲಾಗಿದ್ದ ಸುಮಾರು 30 ಸಾವಿರ ರೂ. ಮೌಲ್ಯದ ಕಂಚಿನ ಘಂಟೆಯನ್ನು ಎ. 29ರ ರಾತ್ರಿ ಕಳವು ಮಾಡಲಾಗಿದೆ. ದೈವಸ್ಥಾನದ ಆಡಳಿತದವರು ಸುಳ್ಯ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.