ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ: ಆ್ಯಸಿಡ್ ಒದಗಿಸಿದವರನ್ನು ವಶಕ್ಕೆ ಪಡೆದ ಪೊಲೀಸರು
Team Udayavani, Mar 13, 2024, 12:53 AM IST
ಕಡಬ: ಪ್ರೀತಿ ನಿರಾಕರಣೆಯ ಆಕ್ರೋಶದಿಂದ ಮಾ. 4ರಂದು ಬೆಳಗ್ಗೆ ಕಡಬ ಸರಕಾರಿ ಪ.ಪೂ. ಕಾಲೇಜಿನ ಆವರಣದಲ್ಲಿ ಪರೀಕ್ಷೆ ಬರೆಯಲು ಸಿದ್ಧಳಾಗುತ್ತಿದ್ದ ತನ್ನ ಪ್ರೇಯಸಿ ಸೇರಿದಂತೆ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿ ಗಾಯಗೊಳಿಸಿದ ಆರೋಪಿಗೆ ಆ್ಯಸಿಡ್ ಒದಗಿಸಿದ ಆರೋಪದಲ್ಲಿ ತಮಿಳುನಾಡಿನ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕು ವಾಯಿಕಡವು ಗ್ರಾಮದ ಅಡಕ್ಕರ ನಿವಾಸಿ ಅಬಿನ್ ಸಿಬಿ (22) ತನ್ನ ಊರಿನಿಂದ ರೈಲಿನ ಮೂಲಕ ತಮಿಳುನಾಡಿನ ಕೊಯಮತ್ತೂರಿಗೆ ತೆರಳಿ ಆ್ಯಸಿಡ್ ಖರೀದಿಸಿ ತಂದಿರುವುದು ಪೊಲೀಸರ ತನಿಖೆಯ ವೇಳೆ ಬಯಲಾಗಿತ್ತು. ಘಟನೆಯ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದಿದ್ದರು.
ಕಡಬದಲ್ಲಿ ಘಟನೆ ನಡೆದಿದ್ದ ಕಾಲೇಜಿಗೆ, ಮೊಬೈಲ್ ಚಾರ್ಜ್‌ಗೆ ಇರಿಸಿದ್ದ ಬೇಕರಿಗೆ, ಬಟ್ಟೆ ಬದಲಾಯಿಸಿದ್ದ ಜಾಗಕ್ಕೆ ಸೇರಿದಂತೆ ಆರೋಪಿ ಸಂಚರಿಸಿದ್ದ ಇನ್ನಿತರ ಸ್ಥಳಗಳಿಗೆ ಆರೋಪಿಯನ್ನು ಕರೆದೊಯ್ದು ವಿಸ್ತೃತ ತನಿಖೆ ನಡೆಸಿದ್ದ ಪೊಲೀಸರು ಹೆಚ್ಚಿನ ತನಿಖೆಗಾಗಿ ಕೇರಳ ಹಾಗೂ ತಮಿಳುನಾಡಿಗೆ ಕರೆದೊಯ್ದಿದ್ದರು. ತಮಿಳುನಾಡಿನಲ್ಲಿ ಆರೋಪಿಗೆ ಆ್ಯಸಿಡ್ ನೀಡಿದ್ದ ಅಂಗಡಿಯ ಮಾಲಕ ಹಾಗೂ ಇನ್ನೋರ್ವನನ್ನು ಕಡಬಕ್ಕೆ ಕರೆತಂದಿರುವ ಪೊಲೀಸರು ಅವರಿಂದ ಅಗತ್ಯ ಮಾಹಿತಿಗಳನ್ನು ಕಲೆಹಾಕಿದ್ದಾರೆ.
ನ್ಯಾಯಾಂಗ ಬಂಧನ
ಆರೋಪಿ ಅಬಿನ್ ಸಿಬಿಯನ್ನು ನ್ಯಾಯಾಲಯದ ಮೂಲಕ ಕಸ್ಟಡಿಗೆ ಪಡೆದಿದ್ದ ಪೊಲೀಸರು ವಿಸ್ತೃತ ತನಿಖೆ ನಡೆಸಿ ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬ್ಯಾಗಿನಲ್ಲಿತ್ತು ಬುರ್ಖಾ, ಚೂರಿ!
ಕೇರಳದಿಂದ ರೈಲಿನಲ್ಲಿ ಮಾ. 3ರಂದು ರಾತ್ರಿ ಮಂಗಳೂರಿಗೆ ಬಂದಿಳಿದಿದ್ದ ಆರೋಪಿ ಅಬಿನ್ ಸಿಬಿ ರೈಲು ನಿಲ್ದಾಣದಲ್ಲಿಯೇ ರಾತ್ರಿ ಕಳೆದು ಮರುದಿನ ಮುಂಜಾನೆ ಬಸ್ ಹತ್ತಿ ಕಡಬಕ್ಕೆ ಬಂದು ತಲುಪಿದ್ದ. ಕಾಲೇಜಿನ ವರಾಂಡದಲ್ಲಿ ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಲೆತ್ನಿಸಿದಾಗ ವಿದ್ಯಾರ್ಥಿಗಳು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಆತನ ಬ್ಯಾಗನ್ನು ಪರಿಶೀಲಿಸಿದಾಗ ಒಂದು ಬುರ್ಖಾ ಹಾಗೂ ಚೂರಿ ಪತ್ತೆಯಾಗಿತ್ತು. ಒಂದು ವೇಳೆ ಆ್ಯಸಿಡ್ ದಾಳಿ ನಡೆಸಲು ಸಾಧ್ಯವಾಗದಿದ್ದರೆ ಆತ ತನ್ನ ಗುರಿಯಾಗಿದ್ದ ವಿದ್ಯಾರ್ಥಿನಿಯ ಮೇಲೆ ಚೂರಿಯಿಂದ ದಾಳಿ ಮಾಡುವ ಸಾಧ್ಯತೆಗಳಿತ್ತು ಹಾಗೂ ಘಟನೆಯ ಬಳಿಕ ತನ್ನ ಗುರುತು ಸಿಗದಂತೆ ಬುರ್ಖಾ ಧರಿಸಿ ಪರಾರಿಯಾಗುವ ಉದ್ದೇಶದಿಂದ ಬುರ್ಖಾ ತಂದಿರಬಹುದು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.