ಗುತ್ತಿಗಾರು-ಮೆಟ್ಟಿನಡ್ಕ ರಸ್ತೆ ದುರಸ್ತಿಗೆ ಕ್ರಮ


Team Udayavani, Jul 21, 2018, 3:00 PM IST

21-july-13.jpg

ಸುಬ್ರಹ್ಮಣ್ಯ: ಹದಗೆಟ್ಟ ಗುತ್ತಿಗಾರು-ಮೆಟ್ಟಿನಡ್ಕ ಸಂಪರ್ಕ ರಸ್ತೆಯ ಸ್ಥಳಕ್ಕೆ ಜಿ.ಪಂ. ಅಸಿಸ್ಟೆಂಟ್‌ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಹನುಮಂತರಾಯಪ್ಪ ಹಾಗೂ ಎಂಜಿನಿಯರ್‌ ರತ್ನಾಕರ ಗುರುವಾರ ಭೇಟಿ ನೀಡಿ ರಸ್ತೆಯ ಸ್ಥಿತಿಗತಿ ಪರಿಶೀಲಿಸಿದರು. ಇನ್ನೆರಡು ದಿನಗಳಲ್ಲಿ ಈ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಪಡಿಸುವ ಭರವಸೆಯನ್ನು ಗ್ರಾಮಸ್ಥರಿಗೆ ನೀಡಿದರು. ಕಂದ್ರಪ್ಪಾಡಿ ಇತರೆ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಗುತ್ತಿಗಾರು- ಮೆಟ್ಟಿನಡ್ಕ ಕ್ರಾಸ್‌ ಬಳಿಯಿಂದ ಪೂಜಾರಿಮನೆ ತನಕದ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಅಯೋಗ್ಯವಾಗಿತ್ತು. ಈ ರಸ್ತೆಯನ್ನು ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಶಾಶ್ವತವಾಗಿ ಅಭಿವೃದ್ಧಿಪಡಿಸಲು 1.43 ಕೋಟಿ ರೂ. ಅನುದಾನ ಮೀಸಲಿರಿಸಿದ್ದರೂ ಕಾಮಗಾರಿ ಆರಂಭವಾಗಿರಲಿಲ್ಲ. 

ಈ ಭಾಗದಲ್ಲಿ ಮಳೆ ಪ್ರಮಾಣ ತೀವ್ರವಾಗಿದ್ದ ಕಾರಣ ಈ ಸಂಪರ್ಕ ರಸ್ತೆ ಪೂರ್ತಿ ಹೊಂಡಗಳು ನಿರ್ಮಾಣವಾಗಿ ಸಂಚರಿಸಲು ಸಾಧ್ಯವೇ ಇಲ್ಲ ಎನ್ನುವ ಸ್ಥಿತಿಗೆ ತಲುಪಿತ್ತು. ಈ ಕುರಿತು ಸ್ಥಳಿಯರು ಜನಪ್ರತಿನಿ ಗಳ, ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಈ ರಸ್ತೆ ಅವ್ಯವಸ್ಥೆ ಮತ್ತು ಹದಗೆಟ್ಟ ರಸ್ತೆಯಲ್ಲಿ ಸಂಚಾರ ವೇಳೆ ಸಾರ್ವಜನಿಕ ಪ್ರಯಾಣಿಕರು ಶಾಲಾ ಮಕ್ಕಳು ಅನುಭವಿಸುತ್ತಿರುವ ಯಾತನೆ ಕುರಿತು ಜು. 18ರಂದು ಉದಯವಾಣಿ ಸುದಿನದಲ್ಲಿ ವಿಸ್ತೃತ ವರದಿ ಪ್ರಕಟಿಸಿ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಇದಕ್ಕೆ ಸ್ಪಂದಿಸಿದ ಜಿ.ಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಮುಂದಿನ ಎರಡು ದಿನಗಳಲ್ಲಿ ಈ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಲಾಗುವುದು ಎಂಬ ಭರವಸೆಯನ್ನು ಸ್ಥಳೀಯ ಗ್ರಾಮಸ್ಥರಿಗೆ ನೀಡಿದ್ದಾರೆ.

ಫಲಾನುಭವಿಗಳಾದ ಚಂದ್ರಶೇಖರ ಕಡೋಡಿ, ರವೀಂದ್ರ ಕೂಡಂಬು, ಸುನೀಲ್‌ ಅಮೆ, ಯತೀಶ್‌ ಪಾರೆಪ್ಪಾಡಿ, ಮೋಹನ ಮುಕ್ಕೂರು, ಪ್ರವೀಣ ಪಂಜಿಪಳ್ಳ, ಪ್ರಶಾಂತ ಬಳ್ಳಡ್ಕ, ವಸಂತ ಛತ್ರಪ್ಪಾಡಿ. ವಿನೋದ ಛತ್ರಪ್ಪಾಡಿ, ಉದಯ ಹಾಲೆಮಜಲು, ವಿನಯ ಕುತ್ಯಾಳ, ರಾಧಾಕೃಷ್ಣ ಹೊಸೋಳಿಕೆ, ವಿಶ್ವನಾಥ ಆಚಳ್ಳಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.