Adyanadka ಕರ್ಣಾಟಕ ಬ್ಯಾಂಕ್ ಕಳ್ಳತನ ಪ್ರಕರಣ: ಪೊಲೀಸರ ತನಿಖೆಯಲ್ಲಿ ಪ್ರಗತಿ
Team Udayavani, Mar 2, 2024, 12:50 AM IST
ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ ಪ್ರಕರಣವಾಗಿ ತಿಂಗಳಾಗುತ್ತ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆನ್ನಲಾಗಿದೆ.
ಪೆರ್ಲದಲ್ಲಿ ವಾಹನದ ಗುರುತು ಹಾಗೂ ನಂಬರ್‌ಪ್ಲೇಟ್ ಪತ್ತೆ ಮಾಡಲಾಗಿತ್ತಾದರೂ, ಅದರಿಂದ ಕಳ್ಳರ ಪತ್ತೆಯನ್ನು ಮಾಡಲು ಸಾಧ್ಯವಾಗಿಲ್ಲ. ತಾಂತ್ರಿಕ ತನಿಖೆಯ ಮೂಲಕ ಕೃತ್ಯಕ್ಕೆ ಕಾರಣರಾದವರ ಮಾಹಿತಿಯನ್ನು ಸಂಗ್ರಹಿಸಿದ ಪೊಲೀಸರು ಪ್ರಮುಖ ಆರೋಪಿಗಳನ್ನು ಎರಡು ದಿನಗಳ ಹಿಂದೆ ವಶಕ್ಕೆ ಪಡೆದುಕೊಂಡಿದ್ದಾರೆ. ಮಾಹಿತಿಯ ಪ್ರಕಾರ ಕೇರಳದಲ್ಲಿ ಬೀಡು ಬಿಟ್ಟಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ವಿಚಾರಣೆಯ ಸಂದರ್ಭದಲ್ಲಿ ನಗದು ಹಾಗೂ ಚಿನ್ನಾಭರಣವನ್ನು ಪಾಲು ಮಾಡಿ ಕೊಂಡು ಹಂಚಿಕೊಂಡ ಮಾಹಿತಿ ಕಳ್ಳರಿಂದಲೇ ಪಡೆದುಕೊಂಡಿದ್ದಾರೆನ್ನಲಾಗಿದೆ.
ಬ್ಯಾಂಕ್ ಕಟ್ಟಡದ ಹಿಂಬಾಗಿಲಿನ ಕಿಟಕಿಯನ್ನು ತುಂಡರಿಸಿ ಒಳ ನುಗ್ಗಿದ ಕಳ್ಳರು ಸೇಫ್ ಲಾಕರ್ ಬಾಗಿಲು ತುಂಡರಿಸಿ, ಲಾಕರ್ ಒಳಗಿದ್ದ ನಗದು ಹಾಗೂ ಚಿನ್ನಾಭರಣವನ್ನು ಫೆ.7ರ ರಾತ್ರಿ ದೋಚಿದ್ದರು. ಬ್ಯಾಂಕ್ ಕಳ್ಳತನ ನಡೆಯುತ್ತಿದ್ದಂತೆ ವಾಹನದ ಗುರುತು ಪತ್ತೆ ಮಾಡಿ, ಸ್ಥಳೀಯ ಇಬ್ಬರನ್ನು ಅನುಮಾನದ ಮೇಲೆ ವಿಚಾರಣೆಯನ್ನು ನಡೆಸಿ ಬಿಡುಗಡೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.