ಆಲಂಕಾರು: ತಾ| ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ
Team Udayavani, Sep 17, 2018, 3:58 PM IST
ಆಲಂಕಾರು: ಸ್ಪರ್ಧಾ ಸ್ಫೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸಿದಾಗ ಮಾತ್ರ ಕ್ರೀಡಾ ಮನೋಭಾವನೆ ನಮ್ಮಲ್ಲಿ ಬೆಳೆಯಲು ಸಾಧ್ಯ ಎಂದು ಶ್ರೀ ದುರ್ಗಾಂಬ ವಿದ್ಯಾವರ್ಧಕ ಸಂಘದ ಅಧ್ಯಕ್ಷ ದಯಾನಂದ ರೈ ಮನವಳಿಕೆ ನುಡಿದರು.
ಶ್ರೀದುರ್ಗಾಂಬ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾ| ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕ್ರೀಡೆಯ ಯಶಸ್ಸಿಗೆ ನಿರಂತರ ಅಭ್ಯಾಸ ಹಾಗೂ ಮಾನಸಿಕ ಸಿದ್ಧತೆ ಅತ್ಯಗತ್ಯ. ಪಂದ್ಯದಲ್ಲಿ ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದೆ ಸೋಲು ಗೆಲುವನ್ನು ಸಮಾನ ಮನಸ್ಸಿನಿಂದ ಸ್ವೀಕರಿಸಿದಾಗ ಮಾತ್ರ ಜೀವನದ ಏಳು ಬೀಳುಗಳನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಂತಾರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ವಿಜೇತ, ದುರ್ಗಾಂಬ ಪದವಿಪೂರ್ವ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಿ. ಜಯಕರ ರೈ ಮಾತನಾಡಿದರು. ಪ್ರೌಢಶಾಲಾ ಮುಖ್ಯಗುರು ಸತ್ಯನಾರಾಯಣ ಭಟ್ ಉಪಸ್ಥಿತರಿದ್ದು, ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ನವೀನ್ ರೈ, ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಶ್ರೇಯಸ್ ರೈ ವಂದಿಸಿದರು.
ಪಂದ್ಯಾಟದ ಹುಡುಗರ ವಿಭಾಗದಲ್ಲಿ ಶ್ರೀ ದುರ್ಗಾಂಬ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆಯಿತು. ದ್ವಿತೀಯ ಸ್ಥಾನವನ್ನು ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜು ತನ್ನದಾಗಿಸಿಕೊಂಡಿತು. ಹುಡುಗಿಯರ ವಿಭಾಗದಲ್ಲಿ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆದರೆ, ಆಲಂಕಾರು ಶ್ರೀ ದುರ್ಗಾಂಬ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಪಂದ್ಯಾಟದ ಯಶಸ್ಸಿಗೆ ಹಿರಿಯ ವಿದ್ಯಾರ್ಥಿಗಳಾದ ಪದ್ಮನಾಭ ಗೌಡ ಆಲಡ್ಕ, ಪ್ರೀತಂ, ಸಚಿನ್, ನವೀನ್, ಗಣೇಶ್ ಮತ್ತು ಕಾಲೇಜಿನ ಉಪನ್ಯಾಸಕ ವೃಂದ ಅಧ್ಯಾಪಕ ವೃಂದದ ಸಿಬಂದಿ ಸಹಕರಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.