Belthangady ವಗ್ಗದಲ್ಲಿ ಅಪಘಾತವಾಗಿದ್ದ ಆ್ಯಂಬುಲೆನ್ಸ್: ಗಾಯಾಳು ಮಹಿಳೆಯೂ ಸಾವು
Team Udayavani, Aug 21, 2023, 11:15 PM IST
ಬೆಳ್ತಂಗಡಿ: ಎರಡು ದಿನಗಳ ಹಿಂದೆ ವಗ್ಗ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಆ್ಯಂಬುಲೆನ್ಸ್ ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದರು. ಅದರಲ್ಲಿ ಗಾಯಾಳು ವಾಗಿದ್ದ ಅಳದಂಗಡಿ ಸನಿಹದ ಮಹಿಳೆ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಅಳದಂಗಡಿ ಸನಿಹದ ಬಡಗ ಕಾರಂದೂರು ಗ್ರಾಮದ ಸುಂಕದಕಟ್ಟೆ ನಿವಾಸಿ ದಿ| ಹಸನ್ ಅವರ ಪತ್ನಿ ಮರಿಯಮ್ಮ (80) ಮೃತರು. ಆ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿದೆ. ಶುಕ್ರವಾರ ದಿನ ಮಹಿಳೆಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಇಸಿಜಿ ಸಹಿತ ತುರ್ತು ಚಿಕಿತ್ಸೆ ನೀಡಿ, ಹೃದಯನಾಳಗಳಲ್ಲಿ ಬ್ಲಾಕ್ ಇರುವುದರಿಂದ ವೈದ್ಯರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದರು. ಅಂತೆಯೇ ಶಬೀರ್ ಅವರ ಆ್ಯಂಬುಲೆನ್ಸ್‌ನಲ್ಲಿ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ವಗ್ಗ ಬಳಿ ಅಪಘಾತ ನಡೆದಿತ್ತು. ಈ ವೇಳೆ ಚಾಲಕ ಶಬೀರ್ ತೀವ್ರ ಗಾಯಗೊಂಡು ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದರು.
ಮಹಿಳೆ ತಲೆಗೆ ಪೆಟ್ಟು
ಹೃದಯದ ತೊಂದರೆ ಇದ್ದ ಮಹಿಳೆಗೆ ಅಪಘಾತದ ವೇಳೆ ತಲೆಗೆ ಗಾಯಗಳಾಗಿ ರಕ್ತಸ್ರಾವವಾಗಿತ್ತು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ವೇಳೆ ಆ್ಯಂಬುಲೆನ್ಸ್‌ನಲ್ಲಿ ಅವರ ಜತೆ ಇದ್ದ ಅವರ ಪುತ್ರ ರಝಾಕ್ ಅವರ ಕೈ ಮೂಳೆ ಮುರಿತಕ್ಕೊಳಗಾಗಿದ್ದು, ಅವರು ಚಿಕಿತ್ಸೆಯಲ್ಲಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.