ಅಮ್ಮೆಮಾರ್‌ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್‌ ಸಿಂಗ್‌ ಭೇಟಿ

Team Udayavani, Oct 26, 2024, 1:10 AM IST

ಅಮ್ಮೆಮಾರ್‌ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್‌ ಸಿಂಗ್‌ ಭೇಟಿ

ಬಂಟ್ವಾಳ: ಫರಂಗಿಪೇಟೆ ಸಮೀಪದ ಅಮ್ಮೆಮಾರ್‌ ಶಾಲಾ ಬಳಿ ತಂಡವೊಂದು ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರ ಮೇಲೆ ತಲವಾರು ದಾಳಿ ನಡೆಸಿ ಕೊಲೆಯತ್ನ ಪ್ರಕರಣವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಅಮ್ಮೆಮಾರಿನ ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಪೊಲೀಸ್‌ ಉಪಮಹಾನಿರೀಕ್ಷಕ(ಡಿಐಜಿ) ಅಮಿತ್‌ ಸಿಂಗ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌. ಅವರು ಜತೆಗಿದ್ದು, ಮುಂದಿನ ತನಿಖೆಯ ಕುರಿತು ಡಿಐಜಿ ಅವರು ಸಲಹೆ-ಸೂಚನೆಗಳನ್ನು ನೀಡಿದರು. ಘಟನೆಗೆ ಸಂಬಂಧಿಸಿ ಸುಮಾರು 14 ಮಂದಿ ಆರೋಪಿಗಳ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ಬಂಟ್ವಾಳ ಡಿವೈಎಸ್‌ಪಿಯವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನೂ ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದೆ.

ತಲವಾರಿ ದಾಳಿಗೆ ಸಂಬಂಧಿಸಿ ಸಿಸಿ ಕ್ಯಾಮರಾ ವಿಡಿಯೋ ಕೂಡ ಇಲಾಖೆಗೆ ಲಭ್ಯವಾಗಿದ್ದು, ದುಷ್ಕರ್ಮಿಗಳ ತಂಡ ತಲವಾರು ಹಿಡಿದು ಬೀಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಈ ಘಟನೆಯನ್ನು ಪೊಲೀಸ್‌ ಇಲಾಖೆ ಮಟ್ಟ ಹಾಕದೇ ಇದ್ದಲ್ಲಿ ಕಾನೂನು ಸುವಸ್ಥೆಗೆ ಹದಗೆಡುವ ಆತಂಕವೂ ಎದುರಾಗಿದ್ದು, ಹೀಗಾಗಿ ಪ್ರಕರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಮಟ್ಟ ಹಾಕುವ ವಿಶ್ವಾಸ ವ್ಯಕ್ತಪಡಿಸಿದೆ.

ಅ. 22ರ ರಾತ್ರಿ 11.50ರ ಸುಮಾರಿಗೆ ಘಟನೆ ನಡೆಸಿದ್ದು, ಪೂರ್ವದ್ವೇಷದ ಹಿನ್ನೆಲೆಯಲ್ಲಿ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಹಾಗೂ ಇತರರು ಅಮ್ಮೆಮಾರ್‌ ನಿವಾಸಿಗಳಾದ ತಸ್ಲಿàಂ ಹಾಗೂ ಮಹಮ್ಮದ್‌ ಶಾಕೀರ್‌ನ ಮೇಲೆ ತಲವಾರು ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ್ದು, ಗಾಯಾಳುಗಳು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಿಐಜಿ ಭೇಟಿಯ ವೇಳೆ ಬಂಟ್ವಾಳ ಡಿವೈಎಸ್‌ಪಿ ಎಸ್‌.ವಿಜಯಪ್ರಸಾದ್‌, ಗ್ರಾಮಾಂತರ ಇನ್ಸ್‌ಪೆಕ್ಟರ್‌ ಶಿವಕುಮಾರ್‌, ಪಿಎಸ್‌ಐಗಳು ಹಾಗೂ ಪೊಲೀಸ್‌ ಸಿಬಂದಿ ಉಪಸ್ಥಿತರಿದ್ದರು.

ಪೋಟೊ: ಡಿಐಜಿ ಅಮಿತ್‌ ಸಿಂಗ್‌ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

9

Sullia ಆಸ್ಪತ್ರೆ ಶೆಡ್‌ನ‌ಲ್ಲಿ ನಿಲ್ಲುತ್ತಿದ್ದ 108 ಆ್ಯಂಬುಲೆನ್ಸ್‌ ಈಗ ರಸ್ತೆ ಬದಿಗೆ!

5(1)

Uppinangady-ನೆಲ್ಯಾಡಿ ಹೆದ್ದಾರಿ ಹೊಂಡಮಯ, ಧೂಳುಮಯ!

WhatsApp Image 2024-10-25 at 02.16.30

Aranthodu: ಕಾಡಾನೆಗಳಿಂದ ಕೃಷಿಗೆ ಹಾನಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.